
ವಾಷಿಂಗ್ಟನ್(ಮಾ.13): ಜುಲೈ 4ರ ಅಮೆರಿಕ ಸ್ವಾತಂತ್ರ್ಯೋತ್ಸವದ ಒಳಗಾಗಿ ದೇಶವನ್ನು ಕೊರೋನಾ ಮುಕ್ತ ಮಾಡಲು ನೂತನ ಅಧ್ಯಕ್ಷ ಜೋ ಬೈಡೆನ್ ಗಡುವು ನಿಗದಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಮೇ 1ರಿಂದ ಅಮೆರಿಕದ ಯುವ ಜನತೆ ಲಸಿಕೆ ಪಡೆಯಲು ಅರ್ಹರು ಎಂದು ಘೋಷಿಸಿದ್ದಾರೆ.
ಅಧ್ಯಕ್ಷರಾದ ಬಳಿಕ ಇದೇ ಮೊದಲ ಬಾರಿಗೆ ದೇಶವನ್ನು ಉದ್ದೇಶಿಸಿ ಗುರುವಾರ ಮಾತನಾಡಿದ ಅವರು, ‘ದೇಶವನ್ನೇ ತಲ್ಲಣಿಸಿರುವ ಕೊರೋನಾ ಮಹಾಮಾರಿಯಿಂದ ಮುಕ್ತರಾಗಲು 2 ದಿನಾಂಕ ನಿಗದಿ ಮಾಡಲಾಗಿದೆ. ಒಂದು ಮೇ 1ರಿಂದ ಯುವಕರಿಗೂ ಲಸಿಕೆ ನೀಡಲಾಗುತ್ತದೆ. ಎರಡನೆಯದು ಜುಲೈ 4. ಈ ಬಾರಿಯೂ ಅಮೆರಿಕನ್ನರು ಮನೆಯಲ್ಲೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಬೇಕಿದೆ.
ಆದರೆ ಈ ಸ್ವಾತಂತ್ರ್ಯೋತ್ಸವನ್ನು ವಿಭಿನ್ನವಾಗಿ ಆಚರಿಸೋಣ. ಕೊರೋನಾದಿಂದಲೂ ಸ್ವತಂತ್ರರಾಗೋಣ’ ಎಂದು ಹೇಳಿದರು. ಅಮೆರಿಕದಲ್ಲಿ ಈವರೆಗೆ 2.99 ಕೋಟಿ ಮಂದಿಗೆ ಸೋಂಕು ತಗುಲಿದ್ದು, ಒಟ್ಟು 5.43 ಲಕ್ಷ ಮಂದಿ ಸಾವಿಗೀಡಾಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ