ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಹಸೀನಾಗೆ ಗಲ್ಲು? : ಇಂದು ತೀರ್ಪು

Kannadaprabha News   | Kannada Prabha
Published : Nov 17, 2025, 05:45 AM IST
hasina

ಸಾರಾಂಶ

ಭಾರತದ ರಾಜಾಶ್ರಯದಲ್ಲಿರುವ ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್‌ ಹಸೀನಾ ಹಾಗೂ ಅವರ ಆಪ್ತರ ವಿರುದ್ಧ ಹೂಡಲಾಗಿದ್ದ ನರಮೇಧ ಸೇರಿ ವಿವಿಧ ಆರೋಪಗಳಿಗೆ ಸಂಬಂಧಿಸಿದಂತೆ ನ.17ರಂದು ಬಾಂಗ್ಲಾ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ (ಐಸಿಟಿ-ಬಿಡಿ) ತೀರ್ಪು ಪ್ರಕಟಿಸಲಿದೆ.

ಢಾಕಾ : ಭಾರತದ ರಾಜಾಶ್ರಯದಲ್ಲಿರುವ ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್‌ ಹಸೀನಾ ಹಾಗೂ ಅವರ ಆಪ್ತರ ವಿರುದ್ಧ ಹೂಡಲಾಗಿದ್ದ ನರಮೇಧ ಸೇರಿ ವಿವಿಧ ಆರೋಪಗಳಿಗೆ ಸಂಬಂಧಿಸಿದಂತೆ ನ.17ರಂದು ಬಾಂಗ್ಲಾ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ (ಐಸಿಟಿ-ಬಿಡಿ) ತೀರ್ಪು ಪ್ರಕಟಿಸಲಿದೆ.

ಕೋರ್ಟ್‌ ಸಮ್ಮತಿಸಿ ಗಲ್ಲು ಶಿಕ್ಷೆ ನೀಡಲಿದೆಯೇ

‘ಹಸೀನಾ ಹಾಗೂ ಆಪ್ತರು ಸಾವಿರಾರು ಜನರ ಸಾವಿಗೆ ಕಾರಣರಾಗಿರುವುದರಿಂದ ಮರಣ ದಂಡನೆಯನ್ನೇ ವಿಧಿಸಬೇಕು’ ಎಂದು ಸರ್ಕಾರದ ವಕೀಲರು ವಾದ ಮಂಡಿಸಿದ್ದಾರೆ. ಇದಕ್ಕೆ ಕೋರ್ಟ್‌ ಸಮ್ಮತಿಸಿ ಗಲ್ಲು ಶಿಕ್ಷೆ ನೀಡಲಿದೆಯೇ ಎಂಬುದು ಚರ್ಚೆಯ ವಿಷಯವಾಗಿದೆ.

ಹಸೀನಾ, ಮಾಜಿ ಗೃಹಸಚಿವ ಅಸಾದುಜ್ಜಾಮಾನ್‌ ಖಾನ್‌ ಕಮಲ್‌ ಹಾಗೂ ಮಾಜಿ ಐಜಿಪಿ ಚೌಧರಿ ಅಬ್ದುಲ್ಲಾ ಅಲ್‌ ಮುಮುನ್‌ ಅವರ ವಿರುದ್ಧದ ಪ್ರಕರಣಗಳ ವಿಚಾರಣೆಯನ್ನು ಐಸಿಟಿ-ಬಿಡಿ ಅ.23ರಂದು ಪೂರ್ಣಗೊಳಿಸಿತ್ತು.

ಹಸೀನಾ ಮೇಲಿನ ಆರೋಪವೇನು?:

ತಮ್ಮ ಸರ್ಕಾರದ ಪತನಕ್ಕೆ ಕಾರಣವಾದ ವಿದ್ಯಾರ್ಥಿಗಳ ದಂಗೆಯನ್ನು ಹತ್ತಿಕ್ಕಲು ಆದೇಶಿಸಿ ಸಾವಿರಾರು ಜನರ ಸಾವಿಗೆ ಕಾರಣವಾದ ಆರೋಪವನ್ನು ಹಸೀನಾ ಹೊತ್ತಿದ್ದಾರೆ. ಆದರೆ ದಂಗೆಯನ್ನು ತಡೆಯಲು ಆಗದೇ 2024ರ ಆ.5ರಂದು ಹಸೀನಾ ದೇಶ ಬಿಟ್ಟು ಓಡಿ ಹೋಗಿ, ಭಾರತದ ರಾಜಧಾನಿ ದೆಹಲಿಯಲ್ಲಿ ಆಶ್ರಯ ಪಡೆದಿದ್ದಾರೆ.

ಭಾರಿ ಭದ್ರತೆ:ತೀರ್ಪು ಪ್ರಕಟಣೆಯ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರ ವಹಿಸಲು ದೇಶಾದ್ಯಂತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ವಿಶ್ವದ ಅತಿ ಬಲಿಷ್ಠ ಕರೆನ್ಸಿಗಳಿವು: ಭಾರತದ ರುಪಾಯಿ ಮುಂದೆ ಘರ್ಜಿಸುವ ಡಾಲರ್ ಈ ದೇಶದ ಕರೆನ್ಸಿ ಮುಂದೆ ಡಮ್ಮಿ!
ರಾಜಮೌಳಿ-ಜೇಮ್ಸ್ ಕ್ಯಾಮರೂನ್ ಹೊಸ ಹೆಜ್ಜೆ, ನಟ ಮಹೇಶ್ ಬಾಬುಗೆ ಪ್ಯಾನ್ ವರ್ಲ್ಡ್ ಪಟ್ಟ..!