
ನವದೆಹಲಿ: ಭಾರತ-ಪಾಕಿಸ್ತಾನದ ನಡುವೆ ಕದನ ವಿರಾಮ ಜಾರಿಗೊಳಿಸಿದ್ದು ತಾನೇ ಎಂದು ಹೇಳಿಕೊಳ್ಳುತ್ತಿರುವ ಅಮೆರಿಕ ಅಧ್ಯಕ್ಷ ಟ್ರಂಪ್, ಅದೇ ಮಾತನ್ನು ಮಂಗಳವಾರ 25ನೇ ಬಾರಿ ಪುನರುಚ್ಚರಿಸಿದ್ದಾರೆ. ಇತ್ತ, ಟ್ರಂಪ್ 25 ಬಾರಿ ಇದೇ ಮಾತನ್ನು ಹೇಳಿ ಬೆಳ್ಳಿ ಹಬ್ಬ ಆಚರಿಸುತ್ತಿದ್ದಾರೆ. ಆದರೆ ಪ್ರಧಾನಿ ಮೋದಿ ಮಾತ್ರ ವಿದೇಶ ಪ್ರವಾಸದಲ್ಲಿ ಬ್ಯುಸಿಯಾಗಿದ್ದಾರೆ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.
ಶ್ವೇತಭವನದಲ್ಲಿ ಮಾತನಾಡಿದ ಟ್ರಂಪ್, ‘ಯುದ್ಧ ನಿಲ್ಲಿಸದಿದ್ದರೆ ನಿಮ್ಮೊಂದಿಗೆ ವ್ಯಾಪಾರ ನಿಲ್ಲಿಸುತ್ತೇನೆ ಎಂದೆ. ಹಾಗಾಗಿ ಭಾರತ ಮತ್ತು ಪಾಕಿಸ್ತಾನ ಯುದ್ಧ ನಿಲ್ಲಿಸಿದವು’ ಎಂದಿದ್ದಾರೆ.
ಇದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್, ‘ಕಳೆದ 73 ದಿನಗಳಲ್ಲಿ 25 ಬಾರಿ ಇದೇ ಮಾತು ಹೇಳಿ ಟ್ರಂಪ್ ಬೆಳ್ಳಿ ಹಬ್ಬ ಆಚರಿಸುತ್ತಿದ್ದಾರೆ. ಆದರೆ ಪ್ರಧಾನಿ ಮೋದಿ ಮಾತ್ರ ಮೌನಕ್ಕೆ ಶರಣಾಗಿದ್ದಾರೆ’ ಎಂದರು.
‘ಕದನ ವಿರಾಮ ಜಾರಿಗೊಳಿಸಲು ಟ್ರಂಪ್ ಯಾರೂ ಅಲ್ಲ. ಆದರೆ ಮೋದಿ ಈ ಬಗ್ಗೆ ಒಂದೇ ಒಂದು ಬಾರಿಯೂ ಅವರಿಗೆ ಪ್ರತಿಕ್ರಿಯೆ ನೀಡಿಲ್ಲ’ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಹೇಳಿಕೆಯಿಂದ ವಿಶ್ವದಾದ್ಯಂತ ಚರ್ಚೆ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಹೇಳಿಕೆಯಿಂದ ವಿಶ್ವದಾದ್ಯಂತ ಚರ್ಚೆಯಲ್ಲಿದ್ದಾರೆ. ಅಮೆರಿಕ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್ ಕುರಿತು ನೀಡಿದ ಹೇಳಿಕೆ ಪರ-ವಿರೋಧ ಚರ್ಚೆಗಳು ಆರಂಭಗೊಂಡಿವೆ. ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಡೊನಾಲ್ಡ್ ಟ್ರಂಪ್ ಭಾಷಣದಲ್ಲಿ ತುಳಸಿ ಗಬ್ಬಾರ್ಡ್ ಅವರನ್ನು ಮನಸಾರೆ ಹೊಗಳುತ್ತಿದ್ದರು. ಸಭೆ ಕೋಣೆಯಲ್ಲಿ ತುಳಸಿ ಗಬ್ಬಾರ್ಡ್ ಅವರನ್ನು ನೋಡಿ ಮುಗಳ್ನಗುತ್ತಾ, ‘hottest in the room’ ಎಂದು ಕರೆದರು. ಈ ರೀತಿ ಖುಷಿಯಿಂದ ತುಳಸಿ ಗಬ್ಬಾರ್ಡ್ ಅವರ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ಸೂಚಿಸಿದರು ಎಂದು ವರದಿಯಾಗಿದೆ.
ಇತ್ತೀಚೆಗೆ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರ ಆಡಳಿತಾವಧಿಗೆ ಸಂಬಂಧಿಸಿದ ವರದಿಯೊಂದನ್ನು ತುಳಸಿ ಗಬ್ಬಾರ್ಡ್ ಬಿಡುಗಡೆಗೊಳಿಸಿದ್ದರು. ಈ ವರದಿಯಿಂದ ಖುಷಿಯಾಗಿರುವ ಡೊನಾಲ್ಡ್ ಟ್ರಂಪ್ ಬಹಿರಂವಾಗಿ ತುಳಸಿ ಗಬ್ಬಾರ್ಡ್ ಅವರನ್ನು ಹೊಗಳಿದ್ದಾರೆ ಎಂದು ಹೇಳಲಾಗುತ್ತಿದೆ. 2016ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ರಷ್ಯಾ ಹಸ್ತಕ್ಷೇಪ ಆರೋಪದ ಕುರಿತ ವಿಷಯವನ್ನು ಈ ವರದಿ ಒಳಗೊಂಡಿದೆ. ಈ ವರದಿಯಲ್ಲಿ ಡೊನಾಲ್ಡ್ ಟ್ರಂಪ್ ಅವರನ್ನು ಪದಚ್ಯುತಗೊಳಿಸಲು ಪ್ಲಾನ್ ಮಾಡಿಕೊಂಡಿದ್ದರು ಎಂಬುವುದು ಈ ವರದಿಯಲ್ಲಿ ಉಲ್ಲೇಖವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ