
ಲಂಡನ್ (ಆ.06): ಕೋರೋನಾ ವಿರುದ್ಧ ಹರ್ಡ್ ಇಮ್ಯುನಿಟಿ (ಸಮೂಹ ರೋಗ ನಿರೋಧಕ ಶಕ್ತಿ)ಯನ್ನು ಸಾಧಿಸುವುದು ನಮ್ಮ ಜೀವಿತಾವಧಿಯಲ್ಲಿ ಸಾಧ್ಯವಾಗದೇ ಇರಬಹುದು.
ಹೀಗಾಗಿ ಹರ್ಡ್ ಇಮ್ಯುನಿಟಿ ಬದಲು ಬ್ರಿಟನ್ ರೀತಿ ಲಸಿಕೆ ಪ್ರಮಾಣವನ್ನು ಹೆಚ್ಚಿಸಿ, ಜನರಿಗೆ ಓಡಾಟಕ್ಕೆ ಮುಕ್ತ ಅವಕಾಶ ಕಲ್ಪಿಸಬೇಕು ಎಂದು ದಕ್ಷಿಣ ಆಫ್ರಿಕಾದ ವಿಟ್ವಾಟರ್ಸ್‌ರಾಂಡ್ ವಿಶ್ವವಿದ್ಯಾಲಯದ ವೈರಾಣು ತಜ್ಞರೊಬ್ಬರು ಅಭಿಪ್ರಾಯ ಪಟ್ಟಿದ್ದಾರೆ.
ದೀರ್ಘಾವಧಿ ಕೋವಿಡ್ ಬಗ್ಗೆ ಡಬ್ಲ್ಯುಎಚ್‌ಒ ಕಳವಳ
ಕೊರೋನಾ ವಿರುದ್ಧ ಹರ್ಡ್ ಇಮ್ಯುನಿಟಿಯನ್ನು ಸಾಧಿಸಿದರೆ ಕೊರೋನಾವನ್ನು ನಿರ್ಮೂಲನೆ ಮಾಡಲು ಸಾಧ್ಯ ಎಂಬ ನಂಬಿಕೆ ಇದೆ. ಆದರೆ, ಈ ನಂಬಿಕೆ ತಪ್ಪು, ಕೊರೋನಾ ವೈರಸ್ ರೂಪಾಂತರಗೊಳ್ಳುತ್ತಾ, ಒಬ್ಬರಿಂದ ಒಬ್ಬರಿಗೆ ಹರಡುತ್ತಿದೆ. ಹೀಗಾಗಿ ಕೊರೋನಾ ವಿರುದ್ಧ ನಮ್ಮ ಜೀವಿತಾವಧಿಯಲ್ಲಿ ಹರ್ಡ್ ಇಮ್ಯುನಿಟಿ ಸಾಧಿಸಲು ಸಾಧ್ಯವಾಗುವುದಿಲ್ಲ ಎಂದು ಲೇಖನವೊಂದರಲ್ಲಿ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ