
ಮೊಸುಲ್ (ಇರಾಕ್): ವಿವಾಹ ಕಾರ್ಯಕ್ರಮದ ವೇಳೆ ಸಂಭ್ರಮಕ್ಕಾಗಿ ಹಚ್ಚಿದ ಪಟಾಕಿಯಿಂದ ಬೆಂಕಿ ಹೊತ್ತಿಕೊಂಡು ಬರೋಬ್ಬರಿ 100 ಜನರು ಸಾವನ್ನಪ್ಪಿ, 150 ಜನರು ಗಾಯಗೊಂಡಿರುವ ಭೀಕರ ಘಟನೆ ಇರಾಕ್‌ನಲ್ಲಿ ನಡೆದಿದೆ. ಇಲ್ಲಿನ ನಿವೆವೆ ಪ್ರದೇಶದ ಹಮ್ದಾನಿಯಾದಲ್ಲಿ ನಡೆಯುತ್ತಿದ್ದ ಕ್ರಿಶ್ಚಿಯನ್ ಸಂಪ್ರದಾಯದ ಮದುವೆ ಸಮಾರಂಭದಲ್ಲಿ ಬೆಂಕಿ ದುರಂತ ಸಂಭವಿಸಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚುವ ಭೀತಿ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮದುವೆ ಸಮಾರಂಭದಲ್ಲಿ ವಧುವರರು ನೃತ್ಯ ಮಾಡಲು ಪ್ರಾರಂಭಿಸುತ್ತಿದ್ದಂತೆ ಸಿಡಿಮದ್ದುಗಳ ಬೆಂಕಿಯು ಸೀಲಿಂಗ್‌ಗೆ ತಾಗಿ ಕೆಲವೇ ಸೆಕೆಂಡುಗಳಲ್ಲಿ ಇಡೀ ಸಭಾಂಗಣಕ್ಕೆ ಬೆಂಕಿ ಹೊತ್ತಿಕೊಂಡಿತು’ ಎಂದು ಗಾಯಾಳುಗಳು ತಿಳಿಸಿದ್ದಾರೆ.
ರಾಜಧಾನಿಯಲ್ಲಿ ದೀಪಾವಳಿಗೆ ಪಟಾಕಿ ಸಂಪೂರ್ಣ ನಿಷೇಧ, ಮಾರಾಟ-ಸಿಡಿಸಲು ಅವಕಾಶವಿಲ್ಲ!
ಮೃತಪಟ್ಟವರಲ್ಲಿ ಮಕ್ಕಳೂ ಸೇರಿದ್ದು, ವಧುವರರ ಆರೋಗ್ಯ ಸ್ಥತಿಗತಿ ಕುರಿತು ತಕ್ಷಣಕ್ಕೆ ಯಾವುದೇ ಮಾಹಿತಿ ಇಲ್ಲ. ಇನ್ನು ಘಟನೆ ಕುರಿತು ತನಿಖೆಗೆ ಆದೇಶಿಸಿರುವ ಇರಾಕ್ ಪ್ರಧಾನಿ ಸಂಸತ್ರಸ್ತರಿಗೆ ಪರಿಹಾರ ಘೋಷಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಶೃಂಗಾರಕ್ಕಾಗಿ ದಹನಕಾರಿ ವಸ್ತುಗಳನ್ನು ಬಳಸಿದ್ದ ಕಾರಣ ಬೆಂಕಿ ಬಹುಬೇಗ ಹಬ್ಬಿ ಭಾರೀ ಅನಾಹುತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹಾವೇರಿ ಪಟಾಕಿ ಗೋದಾಮಿಗೆ ಬೆಂಕಿ, 4 ಮಂದಿ ಸಜೀವದಹನ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ