
ಟೊರೊಂಟೊ(ಮಾ.14): ಶನಿವಾರ, ಕೆನಡಾದ ಟೊರೊಂಟೊ ನಗರದ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 5 ಭಾರತೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಟೊರೊಂಟೊದಲ್ಲಿರುವ ಕಾನ್ಸುಲೇಟ್ ಜನರಲ್ ಆಫ್ ಇಂಡಿಯಾ ತಂಡವು ಸಹಾಯಕ್ಕಾಗಿ ಸಂತ್ರಸ್ತರ ಸ್ನೇಹಿತರೊಂದಿಗೆ ಸಂಪರ್ಕದಲ್ಲಿದೆ. ಕೆನಡಾದಲ್ಲಿರುವ ಭಾರತದ ಹೈಕಮಿಷನರ್ ಅಜಯ್ ಬಿಸಾರಿಯಾ ಈ ಮಾಹಿತಿ ನೀಡಿದ್ದಾರೆ.
ಮೃತರನ್ನು ಹರ್‌ಪ್ರೀತ್ ಸಿಂಗ್, ಜಸ್ಪಿಂದರ್ ಸಿಂಗ್, ಕರಣ್‌ಪಾಲ್ ಸಿಂಗ್, ಮೋಹಿತ್ ಚೌಹಾಣ್ ಮತ್ತು ಪವನ್ ಕುಮಾರ್ ಎಂದು ಗುರುತಿಸಲಾಗಿದೆ. ಅವರ ವಯಸ್ಸು 21 ರಿಂದ 24 ವರ್ಷ. ಅವರೆಲ್ಲರೂ ಗ್ರೇಟರ್ ಟೊರೊಂಟೊ ಮತ್ತು ಮಾಂಟ್ರಿಯಲ್ ಪ್ರದೇಶದ ವಿದ್ಯಾರ್ಥಿಗಳು ಎಂದು ಪೊಲೀಸರು ಹೇಳುತ್ತಾರೆ. ಅವರು ಹೆದ್ದಾರಿಯಲ್ಲಿ ಪ್ರಯಾಣಿಕರ ವ್ಯಾನ್‌ನಲ್ಲಿ ಪಶ್ಚಿಮಕ್ಕೆ ಪ್ರಯಾಣಿಸುತ್ತಿದ್ದರು. ಶನಿವಾರ ಬೆಳಗಿನ ಜಾವ 3:45ರ ಸುಮಾರಿಗೆ ಟ್ರ್ಯಾಕ್ಟರ್-ಟ್ರೇಲರ್ ಪರಸ್ಪರ ಡಿಕ್ಕಿ ಹೊಡೆದಿದ್ದು, ಈ ದುರಂತದಲ್ಲಿ ಇವರು ಸಾವನ್ನಪ್ಪಿದ್ದಾರೆ.
ಅಪಘಾತದ ನಂತರ ಗಂಭೀರವಾಗಿ ಗಾಯಗೊಂಡ ಇತರ ಇಬ್ಬರು ಪ್ರಯಾಣಿಕರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಪೊಲೀಸರು ಹೇಳಿದ್ದಾರೆಯಾದರೂ, ಅವರ ಆರೋಗ್ಯ ಸ್ಥಿತಿಯ ಹೇಗಿದೆ ಎಂಬ ಬಗ್ಗೆ ಇನ್ನೂ ಮಾಹಿತಿ ನೀಎಇಲ್ಲ. ಅಪಘಾತದ ತನಿಖೆ ಮುಂದುವರಿದಿದೆ. ಈ ಪ್ರಕರಣದಲ್ಲಿ ಇಲ್ಲಿಯವರೆಗೆ ಯಾವುದೇ ಪ್ರಕರಣ ದಾಖಲಿಸಲಾಗಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ