ಕಾಬೂಲ್: ಅಫ್ಘಾನಿಸ್ತಾನದ ಮಾಜಿ ಸಂಸದೆ ಮುರ್ಸಲ್ ನಬಿಝಾದಾ ಹಾಗೂ ಅವರ ಓರ್ವ ಅಂಗರಕ್ಷಕ ದುಷ್ಕರ್ಮಿಯೊಬ್ಬನ ಗುಂಡೇಟಿಗೆ ಶನಿವಾರ ತಡರಾತ್ರಿ ಬಲಿಯಾಗಿದ್ದಾರೆ. ಈ ದುರ್ಘಟನೆಯಲ್ಲಿ ಮುರ್ಸಲ್ ಅವರ ಸೋದರನಿಗೂ ಗಾಯಗಳಾಗಿವೆ. ಅಫ್ಘಾನಿಸ್ತಾನವನ್ನು ತಾಲಿಬಾನ್ ವಶಕ್ಕೆ ಪಡೆದುಕೊಳ್ಳುವವರೆಗೂ ಮುರ್ಸಲ್ ಸಂಸದೆಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇದಾದ ಬಳಿಕವೂ ದೇಶ ತೊರೆಯದೇ ಆಫ್ಘನ್ ಜನರಿಗಾಗಿ ಹೋರಾಟ ನಡೆಸುತ್ತಿದ್ದರು. ಶನಿವಾರ ತಡರಾತ್ರಿ ಮುರ್ಸಲ್ ಅವರ ಮನೆಗೆ ನುಗ್ಗಿದ ದುಷ್ಕರ್ಮಿ ಗುಂಡಿನ ದಾಳಿ ನಡೆಸಿದ್ದಾನೆ. ಈ ವೇಳೆ ಮುರ್ಸಲ್ ಹಾಗೂ ಓರ್ವ ಅಂಗರಕ್ಷಕ ಮೃತಪಟ್ಟಿದ್ದು, ಅವರ ಸೋದರ ಗಾಯಗೊಂಡಿದ್ದಾರೆ. ಈ ಪ್ರಕರಣವನ್ನು ತಾಲಿಬಾನ್ ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ನಡೆಸುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
1971ರ ಶರಣಾಗತಿ ಫೋಟೋ ತೋರ್ಸಿ ಪಾಕ್‌ಗೆ ತಾಲಿಬಾನ್ ಎಚ್ಚರಿಕೆ
ಅಫ್ಘಾನಿಸ್ತಾನದಲ್ಲಿ ವಿದ್ಯಾರ್ಥಿನಿಯರ ಓದಿಗೆ ಕೊಳ್ಳಿ: ಇರಾನಿನಲ್ಲಿ ಹಿಜಾಬ್ ವಾರ್
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ