
ಲಾಹೋರ್: ವಿವಿಧ ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ (73) ಅವರನ್ನು ಜೈಲಿನೊಳಗೆ ಹತ್ಯೆ ಮಾಡಲಾಗಿದೆ/ ಅವರು ಸಾವನ್ನಪ್ಪಿದ್ದಾರೆ ಎಂಬ ವರದಿಗಳನ್ನು ಪಾಕಿಸ್ತಾನ ಸರ್ಕಾರ ಸ್ಪಷ್ಟವಾಗಿ ಅಲ್ಲಗಳೆದಿದೆ.
ಈ ಕುರಿತು ಹೇಳಿಕೆ ನೀಡಿರುವ ಖಾನ್ ಬಂಧನದಲ್ಲಿರುವ ಅದಿಯಾಲಾ ಜೈಲಿನ ಅಧಿಕಾರಿಗಳು,‘ತೆಹ್ರೀಕ್ ಎ ಇನ್ಸಾಫ್ ಪಕ್ಷದ ಮುಖ್ಯಸ್ಥ ಇಮ್ರಾನ್ ಖಾನ್ ಆರೋಗ್ಯವಾಗಿದ್ದಾರೆ. ಅವರಿಗೆ ಎಲ್ಲಾ ರೀತಿಯ ಸೌಕರ್ಯಗಳನ್ನು ಒದಗಿಸಲಾಗಿದೆ. ಅವರ ಕುರಿತ ಎಲ್ಲಾ ವರದಿಗಳು ಸುಳ್ಳು. ಈ ಕುರಿತು ಅವರ ಪಕ್ಷದ ನಾಯಕರಿಗೆ ಸೂಕ್ತ ಮಾಹಿತಿ ನೀಡಲಾಗಿದೆ’ ಎಂದು ಸ್ಪಷ್ಟನೆ ನೀಡಿದ್ದಾರೆ.
ಇಮ್ರಾನ್ ಖಾನ್ ಭೇಟಿಗೆ ಅವರ ಸೋದರಿಗೆ ಸತತ 6 ವಾರಗಳಿಂದ ಅನುಮತಿ ನಿರಾಕರಣೆ ಹಿನ್ನೆಲೆಯಲ್ಲಿ ಅವರ ಆರೋಗ್ಯದ ಬಗ್ಗೆ ನಾನಾ ವದಂತಿ ಹಬ್ಬಿತ್ತು.
ಈ ನಡುವೆ ಇಮ್ರಾನ್ ಖಾನ್ ಸುರಕ್ಷಿತವಾಗಿದ್ದರೆ ಅವರ ಭೇಟಿಗೆ ಅವಕಾಶ ನೀಡಿ ಎಂದು ಅವರ ಪಕ್ಷದ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಅಲ್ಲದೆ ಜೈಲಿನ ಮುಂದೆ ಪ್ರತಿಭಟನೆ ನಡೆಸುವ ಯತ್ನ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ