ಲಂಕಾ ಮಾಜಿ ಅಧ್ಯಕ್ಷ ವಿಕ್ರಮ ಸಿಂಘೆ ಬಂಧನ

Kannadaprabha News   | Kannada Prabha
Published : Aug 23, 2025, 04:36 AM IST
Ranil Wickremesinghe

ಸಾರಾಂಶ

ಸರ್ಕಾರಿ ಹಣ ದುರ್ಬಳಕೆ ಆರೋಪದ ಮೇಲೆ ಶ್ರೀಲಂಕಾ ಮಾಜಿ ಅಧ್ಯಕ್ಷ ರನಿಲ್‌ ವಿಕ್ರಮಸಿಂಘೆ ಅವರನ್ನುಶುಕ್ರವಾರ ಬಂಧಿಸಿ, ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

ಕೊಲಂಬೋ : ಸರ್ಕಾರಿ ಹಣ ದುರ್ಬಳಕೆ ಆರೋಪದ ಮೇಲೆ ಶ್ರೀಲಂಕಾ ಮಾಜಿ ಅಧ್ಯಕ್ಷ ರನಿಲ್‌ ವಿಕ್ರಮಸಿಂಘೆ ಅವರನ್ನುಶುಕ್ರವಾರ ಬಂಧಿಸಲಾಗಿದೆ.

ರನಿಲ್‌ ಅವರು 2023ರಲ್ಲಿ ಅಮೆರಿಕಕ್ಕೆ ಅಧಿಕೃತ ಭೇಟಿದ್ದರು. ಅಲ್ಲಿಂದ ಸ್ವದೇಶಕ್ಕೆ ಮರಳುವ ವೇಳೆ ಖಾಸಗಿ ಕಾರ್ಯಕ್ರಮವಾದರೂ ಸರ್ಕಾರಿ ಹಣದಲ್ಲಿ ಬ್ರಿಟನ್‌ಗೆ ತೆರಳಿದ್ದರು ಹಾಗೂ ತಮ್ಮ ಪತ್ನಿ ಪ್ರೊ. ಮೈತ್ರಿ ಅವರ ಕಾಲೇಜಿನ ಘಟಿಕೋತ್ಸವದಲ್ಲಿ ಭಾಗಿಯಾಗಿದ್ದರು. ಹೀಗಾಗಿ ಲಂಕಾ ಸಿಐಡಿ, ವಿಕ್ರಮಸಿಂಘೆ ಅವರನ್ನು ಶುಕ್ರವಾರ ವಿಚಾರಣೆ ನಡೆಸಿ ಬಂಧಿಸಿತು. ಬಳಿಕ ಕೋರ್ಟು ಅವರನ್ನು ಆ.26ರವರೆಗೆ ನ್ಯಾಯಾಂಗ ವಶಕ್ಕೆ ಒಪ್ಪಿಸಿದೆ. ಇದರ ಬೆನ್ನಲ್ಲೇ ಕೋಳ ತೊಡಿ​ಸಿ ಜೈಲಿ​ಗ​ಟ್ಟ​ಲಾ​ಗಿ​ದೆ.

6 ಬಾರಿ ಲಂಕಾ ಪ್ರಧಾನಿಯಾಗಿದ್ದ ವಿಕ್ರಮಸಿಂಘೆ ಅವರು, ಶ್ರೀಲಂಕಾ ಸಂಕಷ್ಟದಲ್ಲಿದ್ದಾಗ 2022ರಿಂದ 2024ರವರೆಗೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ವಿಶ್ವದ ಅತಿ ಬಲಿಷ್ಠ ಕರೆನ್ಸಿಗಳಿವು: ಭಾರತದ ರುಪಾಯಿ ಮುಂದೆ ಘರ್ಜಿಸುವ ಡಾಲರ್ ಈ ದೇಶದ ಕರೆನ್ಸಿ ಮುಂದೆ ಡಮ್ಮಿ!
ರಾಜಮೌಳಿ-ಜೇಮ್ಸ್ ಕ್ಯಾಮರೂನ್ ಹೊಸ ಹೆಜ್ಜೆ, ನಟ ಮಹೇಶ್ ಬಾಬುಗೆ ಪ್ಯಾನ್ ವರ್ಲ್ಡ್ ಪಟ್ಟ..!