
ಪ್ಯಾರಿಸ್: ವಿದೇಶಿ ಕೃಷಿ ಉತ್ಪನ್ನಗಳ ಆಮದಿನಿಂದ ತಮಗೆ ಬೆಲೆಯೇ ಸಿಗುತ್ತಿಲ್ಲ ಎಂದು ಆರೋಪಿಸಿ ಫ್ರಾನ್ಸ್‌ನಲ್ಲಿ ರೈತರು ಪ್ರತಿಭಟನೆಗೆ ಇಳಿದಿದ್ದಾರೆ. ಮಂಗಳವಾರ ಅನ್ನದಾತರು ಸುಮಾರು 350 ಟ್ರ್ಯಾಕ್ಟರ್‌ಗಳನ್ನು ಸಂಸತ್ ಕಡೆಗೆ ಚಲಾಯಿಸಿ ಆಕ್ರೋಶ ವ್ಯಕ್ತಪಡಿಸಿದರು. ಇದು 5 ವರ್ಷಗಳ ಹಿಂದೆ ಭಾರತದಲ್ಲಿ ನಡೆದ ರೈತ ಚಳವಳಿ ನೆನಪಿಸುವಂತಿದೆ.
ಫ್ರಾನ್ಸ್ ವಿದೇಶಗಳಿಂಧ ಅಗ್ಗದ ಆಮದನ್ನು ಮಾಡಿಕೊಳ್ಳುತ್ತಿದೆ. ಇದರಿಂದ ತಮಗೆ ಆರ್ಥಿಕ ನಷ್ಟ ವಾಗುತ್ತಿದೆ. ಜೀವನ ನಿರ್ವಹಣೆಗೆ ಅಪಾಯವಾಗುತ್ತಿದೆ ಎಂದು ಆರೋಪಿಸಿ ರೈತರು ಸರ್ಕಾರದ ವಿರುದ್ಧ ತಿರುಗಿ ಬಿದ್ದಿದ್ದಾರೆ. ಈ ಬಗ್ಗೆ ಫ್ರಾನ್ಸ್ ಸರ್ಕಾರ ಕೂಡ ಪ್ರತಿಕ್ರಿಯಿಸಿದ್ದು, ರೈತರ ಸಮಸ್ಯೆ ಪರಿಹರಿಸಲು ಶೀಘ್ರದಲ್ಲೇ ಹೊಸ ಘೋಷಣೆಗಳನ್ನು ಮಾಡಲಿದ್ದೇವೆ ಎಂದಿದ್ದಾರೆ.
2021ರ ಗಣರಾಜ್ಯೋತ್ಸವ ದಿನದಂದು ಭಾರತದಲ್ಲಿಯೂ ಇದೇ ರೀತಿ ಟ್ರ್ಯಾಕ್ಟರ್ ಚಳುವಳಿ ನಡೆದಿತ್ತು. ಕೃಷಿ ಕಾಯ್ದೆ ವಿರೋಧಿಸಿ ಪಂಜಾಬ್‌ನ ಸಾವಿರಾರು ರೈತರು ಕೆಂಪುಕೋಟೆಗೆ ಟ್ಯಾಕ್ಟರ್ ನುಗ್ಗಿಸಲು ಯತ್ನಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ