
ಪ್ಯಾರಿಸ್(ಆ. 21) ಫ್ರಾನ್ಸ್ ಅಧ್ಯಕ್ಷ ಇಮ್ಯಾನುಲ್ ಮಾಕ್ರೋನ್ ಮತ್ತು ಜರ್ಮನಿ ಛಾನ್ಸಲರ್ ಅಂಗೆಲಾ ಮಾರ್ಕೆಲ್ ಭಾರತದ ನಮಸ್ಕಾರದ ಮೂಲಕ ಒಬ್ಬರಿಗೊಬ್ಬರು ಉಭಯಕುಶಲೋಪರಿ ವಿಚಾರಿಸಿಕೊಂಡಿದ್ದಾರೆ. ಉಭಯ ನಾಯಕರು ರಾಜಕೀಯ ವಿಚಾರಗಳನ್ನು ಚರ್ಚೆ ಮಾಡಲು ಸೇರಿದ್ದರು.
ಕೊರೋನಾ ಕಾರಣಕ್ಕೆ ಹಸ್ತಲಾಘವ ಮಾಡುವುದನ್ನು ಅನೇಕ ನಾಯಕರು ತ್ಯಜಿಸಿದ್ದಾರೆ. ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಆದ್ಯತೆ ನೀಡುತ್ತಿದ್ದಾರೆ. ಇದೀಗ ಇಬ್ಬರು ಪರಸ್ಪರ ನಮಸ್ಕಾರ ಮಾಡಿಕೊಳ್ಳುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಭಾರತೀಯರು ಈ ವಿಡಿಯೋಕ್ಕೆ ಪ್ರತಿಕ್ರಿಯೆ ನೀಡಿದ್ದು ದೇಶದ ಹಿರಿಮೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮತ್ತೊಮ್ಮೆ ರಾರಾಜಿಸಿದೆ ಎಂದಿದ್ದಾರೆ. ಒಟ್ಟಿನಲ್ಲಿ ಕೊರೋನಾ ಎಂಬ ಮಹಮಾರಿ ಜಗತ್ತನ್ನು ಆವರಿಸಿದ ಸಂದರ್ಭದಲ್ಲಿ ಭಾರತದ ಚಿಂತನೆಗಳು ಜಗತ್ತನ್ನೇ ಆವರಿಸುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ