ಪಾಕ್‌ ಆಕ್ರಮಿತ ಕಾಶ್ಮೀರದಲ್ಲೂಈಗ ಜೆನ್‌ಜೀಗಳ ಪ್ರತಿಭಟನೆ

Kannadaprabha News   | Kannada Prabha
Published : Nov 07, 2025, 04:21 AM IST
PoK protest

ಸಾರಾಂಶ

ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಪಾಕ್‌ ಸರ್ಕಾರದ ದುರಾಡಳಿತ, ತಾರತಮ್ಯದ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿ ಶೆಹಬಾಜ್‌ ಷರೀಫ್‌ ಸರ್ಕಾರ ಸುಧಾರಿಸಿಕೊಳ್ಳುವ ಹೊತ್ತಿನಲ್ಲೇ ಮತ್ತೊಂದು ಪ್ರತಿಭಟನೆಯ ಕಹಳೆ ಮೊಳಗಿದೆ. ಜೆನ್‌ಜೀ ಸಮುದಾಯ ಶೈಕ್ಷಣಿಕ ವ್ಯವಸ್ಥೆ ಸುಧಾರಣೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

ಇಸ್ಲಾಮಾಬಾದ್‌: ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ನಡೆದ, ಪಾಕ್‌ ಸರ್ಕಾರದ ದುರಾಡಳಿತ, ತಾರತಮ್ಯದ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿ ಶೆಹಬಾಜ್‌ ಷರೀಫ್‌ ಸರ್ಕಾರ ಸುಧಾರಿಸಿಕೊಳ್ಳುವ ಹೊತ್ತಿನಲ್ಲೇ ಮತ್ತೊಂದು ಪ್ರತಿಭಟನೆಯ ಕಹಳೆ ಮೊಳಗಿದೆ.

ದೇಶದಲ್ಲಿ ಶೈಕ್ಷಣಿಕ ವ್ಯವಸ್ಥೆಯಲ್ಲಿ ಸುಧಾರಣೆಯಾಗಬೇಕು ಎಂದು ಆಗ್ರಹ

ಈ ಬಾರಿ ಪಾಕ್‌ನ ಜೆನ್‌ಜೀ ಸಮುದಾಯದವರು ಬೀದಿಗಿಳಿದಿದ್ದು, ದೇಶದಲ್ಲಿ ಶೈಕ್ಷಣಿಕ ವ್ಯವಸ್ಥೆಯಲ್ಲಿ ಸುಧಾರಣೆಯಾಗಬೇಕು ಎಂದು ಆಗ್ರಹಿಸಿದ್ದಾರೆ.ಮುಜಾಫರನಗರದಲ್ಲಿ ವಿವಿಯಲ್ಲಿ ಉನ್ನತ ವ್ಯಾಸಂಗಕ್ಕೆ ವಿಧಿಸಿರುವ ಶುಲ್ಕದ ವಿರುದ್ಧ ವಿದ್ಯಾರ್ಥಿಗಳು ಸಿಡಿದೆದ್ದು, ಬೀದಿಗಿಳಿದಿದ್ದಾರೆ.

ನಾನಾ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ

ಇದರ ಜತೆಗೆ ಶಿಕ್ಷಣದಲ್ಲಿ ಡಿಜಿಟಲ್‌ ವ್ಯವಸ್ಥೆ, ಕ್ಷಿಪ್ರಗತಿಯಲ್ಲಿ ಫಲಿತಾಂಶ ಪ್ರಕಟ ಸೇರಿದಂತೆ ನಾನಾ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ. ಈ ನಡುವೆ ಪ್ರತಿಭಟನೆಯಲ್ಲಿ ನಿರತರಾಗಿದ್ದ ವಿದ್ಯಾರ್ಥಿ ಮೇಲೆ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸುತ್ತಿರುವ ವಿಡಿಯೋ ವೈರಲ್ ಆಗಿದ್ದು, ಇದು ಹಿಂಸಾಚಾರದ ಸ್ವರೂಪವನ್ನು ಪಡೆದಿದೆ.

ಪ್ರತಿಭಟನಾನಿರತ ವಿದ್ಯಾರ್ಥಿಗಳು ಟೈರ್‌ಸುಟ್ಟು ಬೆಂಕಿ ಹಚ್ಚಿ, ಸರ್ಕಾರದ ವಿರುದದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶವನ್ನು ಹೊರ ಹಾಕಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ಬರ್ಬರ ಹತ್ಯೆ
17 ವರ್ಷಗಳ ಬಳಿಕ ತಾರಿಕ್ ರೆಹಮಾನ್ ಬಾಂಗ್ಲಾಕ್ಕೆ ಎಂಟ್ರಿ; ಭುಗಿಲೆದ್ದ ರಾಜಕೀಯ ಸಂಘರ್ಷ, ಯೂನಸ್ ಸರ್ಕಾರಕ್ಕೆ ಭಾರೀ ಹಿನ್ನಡೆ