
ಅಮೆರಿಕ (ನ.14): ವಾಯು ಸಂಚಾರ ನಿಯಂತ್ರಣ ಕೇಂದ್ರಗಳ ನಡುವಿನ ಸಂವಹನ ವ್ಯವಸ್ಥೆಯಲ್ಲಿ ತಾಂತ್ರಿಕ ಸಮಸ್ಯೆಯಾಗಿರುವ ಹಿನ್ನೆಲೆ ದೇಶಾದ್ಯಂತ 11000 ಕ್ಕೂ ಹೆಚ್ಚು ವಿಮಾನಗಳ ಹಾರಾಟಕ್ಕೆ ತತ್ಕಾಲಿಕ ತಡೆ ನೀಡಿ ಅಮೆರಿಕದ ಫೆಡರಲ್ ಏವಿಯೇಷನ್ ಅಡ್ಮಿನಿಸ್ಟ್ರೇಷನ್ (FAA) ಈ ಮಹತ್ವದ ಆದೇಶ ಹೊರಡಿಸಿದೆ.
ಆದೇಶದಲ್ಲಿ ಉಲ್ಲೇಖಿಸಿರುವಂತೆ ವಾಯು ಸಂಚಾರ ನಿಯಂತ್ರಣ ವ್ಯವಸ್ಥೆಯಲ್ಲಿನ ತೊಂದರೆ, ಹಾಗೂ ಸುರಕ್ಷತಾ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ. ಸಾರಿಗೆ ಸಚಿವ ಸೀನ್ ಡಫಿ ಈ ಬಗ್ಗೆ ಪ್ರತಿಕ್ರಿಯಿಸಿದ್ದು ಮುಂದಿನ ಸೂಚನೆ ನೀಡುವವರೆಗೂ ಎಲ್ಲ ವಿಮಾನ ನಿಲ್ದಾಣಗಳಲ್ಲಿನ ವಿಮಾನಗಳನ್ನು ಲ್ಯಾಂಡ್ ಮಾಡಿರುವಂತೆ ಸೂಚಿಸಿದೆ.
ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿರುವ ಸಾರಿಗೆ ಸಚಿವ ಸೀನ್ ಡಫಿ ಅವರು, ತಾಂತ್ರಿಕ ಸಮಸ್ಯೆ ಬಗ್ಗೆ ಸಿಬ್ಬಂದಿ ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಬರುವವರೆಗೆ ಕಾಯುವಂತೆ ಪ್ರಯಾಣಿಕರಿಗೆ ತಿಳಿಸಿದ್ದು ಶೀಘ್ರದಲ್ಲೇ ಸಮಸ್ಯೆ ಬಗೆಹರಿಸುವ ಬಗ್ಗೆ ಹೇಳಿದ್ದಾರೆ. ಹೆಚ್ಚಿನ ಮಾಹಿತಿ ಸಿಕ್ಕ ಬಳಿಕ ಮಾಹಿತಿ ನೀಡಲಾಗುವುದು ಅಲ್ಲಿಯವರೆಗೆ ಸಹಕರಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.
ಇನ್ನು ಅಮೆರಿಕದ ಗೃಹ ಭದ್ರತಾ ಸಚಿವ ಮಾರ್ಕ್ವೇನ್ ಮುಲ್ಲಿನ್ ಕೂಡ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಎಫ್ಎಎ ಸಂವಹನ ವ್ಯವಸ್ಥೆಯಲ್ಲಿ ಉಂಟಾದ ಈ ಸಮಸ್ಯೆಯಿಂದಾಗ ದೇಶಾದ್ಯಂತ ವಿಮಾನ ಹಾರಾಟ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಕಾರಣ ಎಂದು ತಿಳಿಸಿದ್ದಾರೆ ಎಂದು
ಇದು ಅಮೆರಿಕದ ಜನರಿಗೆ ಯಾವುದೇ ಸುರಕ್ಷತಾ ಬೆದರಿಕೆಯಲ್ಲ. 9/11ರಂತಹ ಮತ್ತೊಂದು ದಾಳಿಯೂ ಇದಲ್ಲ ಎಂದು ಅವರು ಭರವಸೆ ನೀಡಿದ್ದಾರೆ. ಈ ಘಟನೆಯನ್ನು 9/11 ದಾಳಿಗೆ ಹೋಲಿಕೆ ಮಾಡಲಾಗುತ್ತಿದೆ. ಆದರೆ, ಅಂತಹ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಯುಎಸ್ಎ ಟುಡೇ ವರದಿ ಮಾಡಿದೆ.
ಇದು ಉದ್ದೇಶಪೂರ್ವಕವಾಗಿ ನಡೆಸಿರುವ ದಾಳಿಯಾಗಿರಬಹುದೇ ಎಂಬುದಕ್ಕೆ ಯಾವುದೇ ಪುರಾವೆ ಇಲ್ಲ. ಆದ್ರೂ ಮುಂಜಾಗ್ರತ ಕ್ರಮವಾಗಿ ಸಂಚಾರ ವ್ಯವಸ್ಥೆ ಸ್ಥಗಿತಗೊಳಿಸಲಾಗಿದೆ ಎಂದು ಮುಲ್ಲಿನ್ ತಿಳಿಸಿದ್ದಾರೆ.
ವಿಮಾನಗಳ ಹಾರಾಟದ ಮಾಹಿತಿ ನೀಡುವ ಫ್ಲೈಟ್ರಾಡಾರ್24(Flightradar24) ಸಂಸ್ಥೆಯೂ ಉಪಕರಣಗಳಲ್ಲಿನ ತಾಂತ್ರಿಕ ದೋಷದಿಂದಾಗಿ ಎಫ್ಎಎ ಈ ಆದೇಶ ಹೊರಡಿಸಿದೆ. ಅಮೆರಿಕದ ರಾಷ್ಟ್ರೀಯ ವಾಯುಪ್ರದೇಶ ವ್ಯವಸ್ಥೆಯ ವಿವಿಧ ಆವರ್ತನಗಳಲ್ಲಿಯೂ (ಫ್ರೀಕ್ವೆನ್ಸಿ) ಸಮಸ್ಯೆ ಕಾಣಿಸಿಕೊಂಡಿದೆ ಎಂದು ಎಫ್ಎಎ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಆದರೆ ಈಗಾಗಲೇ ಆಕಾಶದಲ್ಲಿ ಹಾರಾಟ ನಡೆಸುತ್ತಿರುವ ವಿಮಾನಗಳನ್ನು ತಕ್ಷಣವೇ ಕೆಳಗಿಳಿಸುವಂತೆ ಯಾವುದೇ ಆದೇಶ ನೀಡಿಲ್ಲ. ಅಮೆರಿಕದತ್ತ ಪ್ರಯಾಣಿಸುತ್ತಿರುವ ಅಂತರರಾಷ್ಟ್ರೀಯ ವಿಮಾನಗಳ ಬಗ್ಗೆ ಆಯಾ ಸಂದರ್ಭಕ್ಕೆ ಅನುಗುಣವಾಗಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಎಫ್ಎಎ ತಿಳಿಸಿದೆ.
The Federal Aviation Administration (FAA) has issued a nationwide ground stop for all U.S. airports following a major communication issue impacting all Air Route Traffic Control Centres (ARTCCs).
On X, U.S. Transportation Secretary Sean Duffy said, "The Federal Aviation Administration issued a nationwide ground stop for all U.S. airports following a communication issue impacting all Air Route Traffic Control Centers. FAA technicians are investigating the issue. We will provide immediate updates as we have them."
— ANI (@ANI) November 13, 2026
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ