
ವಾಷಿಂಗ್ಟನ್: ಅಮೆರಿಕದ ಈಶಾನ್ಯ ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಹಿಮಪಾತ ಸಂಭವಿಸಿದೆ. ಪರಿಣಾಮ 11,000 ವಿಮಾನಗಳ ಹಾರಾಟ ರದ್ದುಗೊಂಡಿದೆ. ಮತ್ತೊಂದೆಡೆ ಸುಮಾರು 5 ಲಕ್ಷ ಮಂದಿ ವಿದ್ಯುತ್ ಸಂಪರ್ಕವಿಲ್ಲದೆ ಕತ್ತಲಿನಲ್ಲಿ ದಿನ ದೂಡುವಂತಾಗಿದೆ.
ವರ್ಜಿನಿಯಾದಿಂದ ಮಸಾಶುಸೆಟ್ಸ್‌ವರೆಗಿನ ಹಲವು ಪ್ರದೇಶಗಳಲ್ಲಿ ಹಿಮಪಾತವಾಗಿದ್ದು ಸುಮಾರು 4 ಕೋಟಿ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಸ್ಥಳೀಯಾಡಳಿತ ಸಾರ್ವಜನಿಕ ಸಾರಿಗೆ ಸೇವೆ ಸ್ಥಗಿತಗೊಳಿಸಿ, ಪ್ರಯಾಣ ನಿಷೇಧ ಹೇರಿದೆ. ಮತ್ತೊಂದೆಡೆ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಇನ್ನು ಫ್ಲೈಟ್‌ಅವೇರ್ ಅಂಕಿ ಅಂಶಗಳ ಪ್ರಕಾರ ಸೋಮವಾರ, ಮಂಗಳವಾರ ನ್ಯೂಯಾರ್ಕ್‌ನ ಪ್ರಮುಖ ಮೂರು ವಿಮಾನ ನಿಲ್ದಾಣಗಳಿಂದ 11,000ಕ್ಕೂ ಹೆಚ್ಚು ವಿಮಾನಗಳ ಹಾರಾಟ ಸ್ಥಗಿತಗೊಳಿಸಲಾಗಿದೆ. ಹಲವು ಕಡೆ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿದೆ. ಮಸಾಶುಸೆಟ್ಸ್, ನ್ಯೂಜೆರ್ಸಿ ಸೇರಿದಂತೆ ವಿವಿಧ ಕಡೆಗಳಲ್ಲಿ 5 ಲಕ್ಷಕ್ಕೂ ಹೆಚ್ಚು ಮಂದಿ ವಿದ್ಯುತ್ ಅಭಾವದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ