
ವಾಷಿಂಗ್ಟನ್ ಡಿಸಿ (ಡಿಸೆಂಬ್ 23, 2023): ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಖಲಿಸ್ತಾನಿ ಪರ ಘೋಷಣೆಗಳನ್ನು ಬರೆದು ಹಿಂದೂ ದೇವಾಲಯವನ್ನು ವಿರೂಪಗೊಳಿಸಲಾಗಿದೆ. ಕ್ಯಾಲಿಫೋರ್ನಿಯಾದ ನೆವಾರ್ಕ್ ನಗರದಲ್ಲಿ ಈ ಘಟನೆ ನಡೆದಿದೆ.
ಅಮೆರಿಕದ ಸ್ವಾಮಿನಾರಾಯಣ ಮಂದಿರ ವಸನಾ ಸಂಸ್ಥೆಯ ಗೋಡೆಗಳ ಮೇಲೆ ಗೀಚಿದ ಘೋಷಣೆಗಳನ್ನು ತೋರಿಸುವ ಚಿತ್ರಗಳನ್ನು ಹಿಂದೂ ಅಮೆರಿಕನ್ ಫೌಂಡೇಶನ್ X ನಲ್ಲಿ (ಈ ಹಿಂದಿನ ಟ್ವಿಟ್ಟರ್) ನಲ್ಲಿ ಹಂಚಿಕೊಂಡಿದೆ. ದೇವಾಲಯದ ಗೋಡೆಯ ಮೇಲೆ ಭಾರತ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ದ್ವೇಷಪೂರಿತ ಘೋಷಣೆಗಳನ್ನು ಚಿತ್ರಗಳು ತೋರಿಸಿವೆ.
ಇದನ್ನು ಓದಿ: ಕೋಳಿ ಅಂಗಡಿಯಾದ ಪಾಕಿಸ್ತಾನದ ಪ್ರಸಿದ್ಧ ರಾಮ-ಸೀತೆ ದೇವಸ್ಥಾನ!
ಘಟನೆಯನ್ನು ದ್ವೇಷದ ಅಪರಾಧವೆಂದು ತನಿಖೆ ಮಾಡಬೇಕು ಎಂದು ಪ್ರತಿಷ್ಠಾನ ಒತ್ತಾಯಿಸಿದ್ದು, ನೆವಾರ್ಕ್ ಪೊಲೀಸ್ ಇಲಾಖೆ ಮತ್ತು ನ್ಯಾಯಾಂಗ ನಾಗರಿಕ ಹಕ್ಕುಗಳ ವಿಭಾಗಕ್ಕೆ ಈ ಬಗ್ಗೆ ತಿಳಿಸಲಾಗಿದೆ ಎಂದೂ ಹೇಳಿದರು. ಇನ್ನು, ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ದೂತಾವಾಸ ಕಚೇರಿ ಸ್ವಾಮಿನಾರಾಯಣ ಮಂದಿರ ವಸನಾ ಸಂಸ್ಥೆಯ ವಿರೂಪಗೊಳಿಸುವಿಕೆಯನ್ನು ಖಂಡಿಸಿದೆ ಮತ್ತು ದುಷ್ಕರ್ಮಿಗಳ ವಿರುದ್ಧ ತ್ವರಿತ ತನಿಖೆ ಮತ್ತು ತ್ವರಿತ ಕ್ರಮಕ್ಕಾಗಿ ಯುಎಸ್ ಅಧಿಕಾರಿಗಳಿಗೆ ಒತ್ತಡ ಹೇರಿದ್ದೇವೆ ಎಂದು ಹೇಳಿದರು.
ಈ ಸಂಬಂಧ ಸ್ಯಾನ್ ಫ್ರಾನ್ಸಿಸ್ಕೋದ ಭಾರತೀಯ ಕಾನ್ಸುಲೇಟ್ ಟ್ವೀಟ್ ಮಾಡಿದ್ದು, ಕ್ಯಾಲಿಫೋರ್ನಿಯಾದ ನೆವಾರ್ಕ್‌ನಲ್ಲಿರುವ ಎಸ್‌ಎಂವಿಎಸ್ ಶ್ರೀ ಸ್ವಾಮಿನಾರಾಯಣ ಮಂದಿರವನ್ನು ಭಾರತ ವಿರೋಧಿ ಗೀಚುಬರಹದ ಮೂಲಕ ವಿರೂಪಗೊಳಿಸಿರುವುದನ್ನು ನಾವು ಬಲವಾಗಿ ಖಂಡಿಸುತ್ತೇವೆ. ಈ ಘಟನೆಯು ಭಾರತೀಯ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದೆ. ಈ ವಿಚಾರವಾಗಿ ಯುಎಸ್ ಅಧಿಕಾರಿಗಳಿಂದ ತ್ವರಿತ ಕ್ರಮಕ್ಕಾಗಿ ನಾವು ಆಗ್ರಹಿಸಿದ್ದೇವೆ ಎಂದೂ ಪೋಸ್ಟ್ ಮಾಡಿದೆ.
ದೇವಸ್ಥಾನದೊಳಗೆ ನುಗ್ಗಿ ಶಿವಲಿಂಗದ ಎದುರೇ ಮೂತ್ರ ವಿಸರ್ಜನೆ : ಮುಸ್ಲಿಂ ಯುವಕನ ಬಂಧನ
ಆದರೆ, ಅಮೆರಿಕದಲ್ಲಿ ಹಿಂದೂ ದೇವಾಲಯವನ್ನು ವಿರೂಪಗೊಳಿಸಿದ್ದು ಇದೇ ಮೊದಲಲ್ಲ. ಇಂತಹ ಘಟನೆಗಳು ಈ ಹಿಂದೆಯೂ ಯುಎಸ್ ಹಾಗೂ ನೆರೆಯ ಕೆನಡಾದಲ್ಲಿಯೂ ನಡೆದಿವೆ.
ಕೆನಡಾದ ಸರ್ರೆ ನಗರದಲ್ಲಿನ ದೇವಾಲಯವನ್ನು ಮಧ್ಯರಾತ್ರಿಯಲ್ಲಿ ಕಿಡಿಗೇಡಿಗಳು ಧ್ವಂಸಗೊಳಿಸಿದರು. ಅಲ್ಲದೆ, ದೇವಸ್ಥಾನದ ಮುಖ್ಯ ಬಾಗಿಲಿಗೆ ಸಾರ್ವಜನಿಕ ಸಭೆಗೆ ಸಂಬಂಧಿಸಿದ ಪೋಸ್ಟರ್‌ಗಳನ್ನು ಅಂಟಿಸಲಾಗಿದ್ದು, ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯನ್ನುಖಂಡಿಸಿ ಈ ಕೃತ್ಯ ಮಾಡಿದಂತೆ ಇತ್ತು.
ವಿದೇಶದ ಅತಿ ದೊಡ್ಡ ಹಿಂದೂ ದೇಗುಲ ಅಮೆರಿಕದಲ್ಲಿ ಉದ್ಘಾಟನೆ: ಆ.18ರಿಂದ ಭಕ್ತರಿಗೆ ಮುಕ್ತ ಪ್ರವೇಶ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ