
ಇಸ್ಲಾಮಾಬಾದ್(ಜ.10): ಇರಾನ್-ಅಮೆರಿಕ ನಡುವಿನ ಯುದ್ಧೋನ್ಮಾದ ಇಡೀ ಜಗತ್ತನ್ನು ತಲ್ಲಣಗೊಳಿಸಿರುವುದು ದಿಟ. ಬಿಕ್ಕಟ್ಟು ಶಮನಕ್ಕೆ ಮಧ್ಯಸ್ಥಿಕೆವಹಿಸುವಂತೆ ಇರಾನ್ ಈಗಾಗಲೇ ಭಾರತವನ್ನು ಕೋರಿದೆ.
ಆದರೆ ಇರಾನ್-ಅಮೆರಿಕ ನಡುವೆ ತಾನು ಮಧ್ಯಸ್ಥಿಕೆ ವಹಿಸುವುದಾಗಿ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದು, ಯಾರೋಬ್ಬರ ಯುದ್ಧದಲ್ಲೂ ಭಾಗಿಯಾಗದೇ ಎರಡೂ ದೇಶಗಳ ನಡುವಿನ ಭಿನ್ನಾಭಿಪ್ರಾಯ ಬಗೆಹರಿಸಲು ಪ್ರಯತ್ನಿಸುವುದಾಗಿ ಸ್ಪಷ್ಟಪಡಿಸಿದ್ದಾರೆ.
ಇರಾನ್ ಮಿಸೈಲ್ ದಾಳಿಗೆ 80 'ಅಮೆರಿಕನ್ ಭಯೋತ್ಪಾದಕರ' ಸಾವು?: ಏನಾಗಿಲ್ಲ ಎಂದ ಟ್ರಂಪ್!
ನಾವು ಎರಡೂ ದೇಶಗಳ ಪರವಹಿಸುವುದಿಲ್ಲ, ಬದಲಿಗೆ ಎರಡೂ ದೇಶಗಳ ನಡುವಿನ ಬಿಕ್ಕಟ್ಟು ಶಮನಕ್ಕಾಗಿ ಶ್ರಮಿಸುವುದಾಗಿ ಇಮ್ರಾನ್ ಖಾನ್ ಹೇಳಿದ್ದಾರೆ.
ನಾವು ಇರಾನ್ ಮತ್ತು ಅಮೆರಿಕ ನಡುವಿನ ಸ್ನೇಹ ಬಾಂಧವ್ಯ ಪುನರ್ ಸ್ಥಾಪಿಸಲು ಪ್ರಯತ್ನಿಸುತ್ತೇವೆ. ಅಮೆರಿಕ ಮತ್ತು ಇರಾನ್ ನಡುವಿನ ಭಿನ್ನಾಭಿಪ್ರಾಯಗಳನ್ನು ಬಗೆಹರಿಯುವಂತಾಗಲು ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಲು ಸಿದ್ಧವಾಗಿದೆ ಎಂದು ಪಾಕ್ ಪ್ರಧಾನಿ ನುಡಿದಿದ್ದಾರೆ.
ಮಧ್ಯಪ್ರಾಚ್ಯಕ್ಕೆ ಹೋದವರಿಗೆ, ಹೋಗುವವರಿಗೆ ವಿದೇಶಾಂಗ ಇಲಾಖೆ ಸಲಹೆ!
ಪಾಕಿಸ್ತಾನ ಈ ಹಿಂದೆ ಮತ್ತೊಂದು ದೇಶದ ಯುದ್ಧದಲ್ಲಿ ಭಾಗಿಯಾಗಿ ತಪ್ಪು ಮಾಡಿರುವುದರಿಂದ, ಮತ್ತೆ ಈ ತಪ್ಪು ಮಾಡಲು ತಯಾರಿಲ್ಲ ಎಂದು ಪರೋಕ್ಷವಾಗಿ ಇಮ್ರಾನ್ ಅಫ್ಘಾನಿಸ್ತಾನ ಯುದ್ಧವನ್ನು ಪ್ರಸ್ತಾಪಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ