
ನವದೆಹಲಿ(ಆ.01): ಜನವರಿ 1, 2021ರಿಂದ ಡಿಸೆಂಬರ್ 31, 2022ರವರೆಗೆ ಭಾರತ ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಖಾಯಂ ಅಲ್ಲದ ಸದಸ್ಯ ರಾಷ್ಟ್ರವಾಗಿದೆ. ಈ ಹಿನ್ನೆಲೆಯಲ್ಲಿ ಭಾರತದ ಈ ಎರಡು ವರ್ಷದ ಈ ಸದಸ್ಯತ್ವದ ಅವಧಿಯಲ್ಲಿ ಮೊದಲ ಬಾರಿಗೆ ಭದ್ರತಾ ಮಂಡಳಿಯ ಅಧ್ಯಕ್ಷ ಸ್ಥಾನವನ್ನು ಭಾರತ ಆ.1 ರಿಂದ ಒಂದು ತಿಂಗಳ ಕಾಲ ವಹಿಸಿಕೊಳ್ಳಲಿದೆ. 2022ರ ಡಿಸೆಂಬರ್‌ನಲ್ಲಿ ಮತ್ತೊಮ್ಮೆ ಅಧ್ಯಕ್ಷ ಸ್ಥಾನ ಮತ್ತೊಮ್ಮೆ ಭಾರತಕ್ಕೆ ದೊರೆಯಲಿದೆ.
‘ಭಾರತದ ದೇಶವು ತನ್ನ 75ನೇ ಸ್ವಾತಂತ್ರ್ಯೋತ್ಸವ ಆಚರಿಸಿಕೊಳ್ಳುತ್ತಿರುವ ಸಮಯದಲ್ಲೇ ಭದ್ರತಾ ಮಂಡಳಿಯ ಅಧ್ಯಕ್ಷ ಸ್ಥಾನ ಸಿಕ್ಕಿರುವುದು ಬಹಳ ಹೆಮ್ಮೆ ತಂದಿದೆ. ಭಾರತವು ಎಂದಿನಂತೆ ಕಡಲ ಭದ್ರತೆ, ಶಾಂತಿ ಪಾಲನೆ ಮತ್ತು ಭಯೋತ್ಪಾದೆನಯ ವಿರುದ್ಧದ ಹೋರಾಟಕ್ಕೆ ಹೆಚ್ಚಿನ ಒತ್ತು ನೀಡಲಿದೆ ಎಂದು ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ಟಿ.ಎಸ್. ತಿರುಮೂರ್ತಿ ವಿಡಿಯೋ ಸಂದೇಶದಲ್ಲಿ ಹೇಳಿದ್ದಾರೆ.
ಸದಸ್ಯತ್ವದ ಈ ಅವಧಿಯಲ್ಲಿ ಆ.2ರಂದು ಮೊದಲ ಬಾರಿಗೆ ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಭಾರತದ ನಿಲುವುಗಳ ಕುರಿತು ಟಿ.ಎಸ್.ತಿರುಮೂರ್ತಿ ಅವರು ಭಾಷಣ ಮಾಡಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ