ನಾವು ಪರಮಾಣು ಯುದ್ಧ ನಿಲ್ಲಿಸಿದ್ದೇವೆ: ಕದನ ವಿರಾಮದ ಕ್ರೆಡಿಟ್ ತೆಗೆದುಕೊಂಡ ಟ್ರಂಪ್

Published : May 12, 2025, 07:50 PM ISTUpdated : May 12, 2025, 07:59 PM IST
ನಾವು ಪರಮಾಣು  ಯುದ್ಧ ನಿಲ್ಲಿಸಿದ್ದೇವೆ:  ಕದನ ವಿರಾಮದ ಕ್ರೆಡಿಟ್ ತೆಗೆದುಕೊಂಡ ಟ್ರಂಪ್

ಸಾರಾಂಶ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತ ಮತ್ತು ಪಾಕಿಸ್ತಾನದ ನಡುವೆ ಪರಮಾಣು ಸಂಘರ್ಷವನ್ನು ತಪ್ಪಿಸಲಾಗಿದೆ ಎಂದು ಹೇಳಿದ್ದಾರೆ. ಉಪರಾಷ್ಟ್ರಪತಿ ಜೆಡಿ ವ್ಯಾನ್ಸ್ ಮತ್ತು ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಅವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತ ಮತ್ತು ಪಾಕಿಸ್ತಾನದ ನಡುವಿನ ಪರಿಸ್ಥಿತಿ ಬಗ್ಗೆ ಮಾತನಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಮಾತನಾಡುವ ಮೊದಲೇ ಡೊನಾಲ್ಡ್ ಟ್ರಂಪ್ ಅಚ್ಚರಿಯ ಹೇಳಿಕೆಯನ್ನು ನೀಡಿದ್ದಾರೆ. ನಾವು ಪರಮಾಣು ಸಂಘರ್ಷವನ್ನು ನಿಲ್ಲಿಸಿದ್ದೇವೆ. ಅದು ಕೆಟ್ಟ ಪರಮಾಣು ಯುದ್ಧವಾಗಿರುತ್ತಿತ್ತು ಎಂದು ನಾನು ಭಾವಿಸುತ್ತೇನೆ. ಪರಮಾಣು ಯುದ್ದ ನಡೆದ್ರೆ ಲಕ್ಷಾಂತರ ಜನರು ಕೊಲ್ಲಲ್ಪಡುತ್ತಿದ್ದರು. ಇಂತಹ ಪರಮಾಣು ಯುದ್ಧವನ್ನು ನಾವು ನಿಲ್ಲಿಸಿದ್ದೇವೆ. ಭಾರತ ಮತ್ತು ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಶಮನ ಮಾಡುವಲ್ಲಿ ನಿರತರಾದ ಉಪರಾಷ್ಟ್ರಪತಿ ಜೆಡಿ ವ್ಯಾನ್ಸ್ ಮತ್ತು ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ  ನಾನು ಅವರಿಗೆ ಧನ್ಯವಾದ ಹೇಳುತ್ತೇನೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. 

ನಾವು ಪಾಕಿಸ್ತಾನದೊಂದಿಗೆ ಬಹಳಷ್ಟು ವ್ಯಾಪಾರ ಮಾಡಲಿದ್ದೇವೆ. ನಾವು ಭಾರತದೊಂದಿಗೆ ಬಹಳಷ್ಟು ವ್ಯಾಪಾರ ಮಾಡಲಿದ್ದೇವೆ. ನಾವು ಇದೀಗ ಭಾರತದೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ. ಶೀಘ್ರದಲ್ಲೇ ಪಾಕಿಸ್ತಾನದೊಂದಿಗೆ ಮಾತುಕತೆ ನಡೆಸಲಿದ್ದೇವೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಕದನ ವಿರಾಮ ಘೋಷಣೆ ಮಾಡದಿದ್ರೆ ಎರಡೂ ದೇಶಗಳ ಜೊತೆಗಿನ ವ್ಯಾಪಾರ ಬಂದ್ ಮಾಡೋದಾಗಿ ಹೇಳಿದ್ದೆ ಎಂದು ಹೇಳುವ ಮೂಲಕ ಕದನ ವಿರಾಮದ ಕ್ರೆಡಿಟ್‌ನ್ನು ಡೊನಾಲ್ಡ್ ಟ್ರಂಪ್ ತೆಗೆದುಕೊಂಡರು. ಆದ್ರೆ ಭಾನುವಾರ ಪ್ರಧಾನಿ ನರೇಂದ್ರ ಮೋದಿ, ನಮಗೆ ಯಾರ ಮಧ್ಯಸ್ಥಿಕೆಯೂ ಬೇಡ ಎಂಬ ಸಂದೇಶವನ್ನು ರವಾನಿಸಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿದ್ದವು. ಇತ್ತ  ಅಮೆರಿಕ ಮಧ್ಯಸ್ಥಿಕೆಯನ್ನು ಭಾರತದ ವಿರೋಧ ಪಕ್ಷದ ನಾಯಕರು ತೀವ್ರವಾಗಿ ವಿರೋಧಿಸಿದ್ದರು.  ಭಾರತ ಮತ್ತು ಪಾಕಿಸ್ತಾನದ ದೇಶಗಳ ನಡುವೆ  ಸಂಘರ್ಷ ನಡೆಯುವಾಗ ಮೂರನೇ  ದೇಶ ಮಧ್ಯೆ ಪ್ರವೇಶಿಸಿದ್ದು ಯಾಕೆ ಎಂದು ಕಾಂಗ್ರೆಸ್ ನಾಯಕರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನೆ ಮಾಡಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಟ್ರಂಪ್‌ ತೆರಿಗೆ ಶಾಕ್‌ಗೆ ಚೀನಾ ದಾಖಲೆಯ ತಿರುಗೇಟು
ಮೋದಿ ರೀತಿ ರೈತರಿಗೆ ಟ್ರಂಪ್‌ ಹಣ ವರ್ಗಾವಣೆ