ಸುಡಾನ್‌ ಫ್ಯಾಕ್ಟರಿಯಲ್ಲಿ ಸ್ಫೋಟ: 18 ಭಾರತೀಯರು ಸೇರಿ 23 ಜನರ ದುರ್ಮರಣ!

Published : Dec 04, 2019, 06:06 PM IST
ಸುಡಾನ್‌ ಫ್ಯಾಕ್ಟರಿಯಲ್ಲಿ ಸ್ಫೋಟ: 18 ಭಾರತೀಯರು ಸೇರಿ 23 ಜನರ ದುರ್ಮರಣ!

ಸಾರಾಂಶ

ಸುಡಾನ್ ಎಲ್‌ಪಿಜಿ ಟ್ಯಾಂಕರ್ ಸ್ಫೋಟ ದುರಂತ| 18 ಭಾರತೀಯರು ಸೇರಿ 23 ಜನರ ದುರ್ಮರಣ| ಸುಡಾನ್‌ನ ಸೆರಾಮಿಕ್ ಕಾರ್ಖಾನೆ ಬಳಿ ಗ್ಯಾಸ್ ಟ್ಯಂಕರ್ ಸ್ಫೋಟ| ಘಟನೆ ಕುರಿತು ಮಾಹಿತಿ ಕೇಳಿದ ಕೇಂದ್ರ ಸರ್ಕಾರ| ಸುಡಾನ್ ಜತೆ ಕೇಂದ್ರ ಸರ್ಕಾರ ಚರ್ಚೆ| ಸಂತ್ರಸ್ತರ ನೆರವಿಗೆ ಕೇಂದ್ರದಿಂದ ಸಹಾಯವಾಣಿ| +249-921917471 ಕರೆ ಮಾಡಲು ಮನವಿ|

ಖರ್ತೋಮ್(ಡಿ.04): ಸುಡಾನ್ ಫ್ಯಾಕ್ಟರಿಯೊಂದರಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, 18 ಭಾರತೀಯರು ಸೇರಿದಂತೆ ಒಟ್ಟು 23 ಜನರು ದುರ್ಮರಣಕ್ಕೀಡಾಗಿದ್ದಾರೆ.

ಫ್ಯಾಕ್ಟರಿ ಬಳಿ ಗ್ಯಾಸ್ ಟ್ಯಾಂಕರ್ ಸ್ಫೋಟಗೊಂಡ ಪರಿಣಾಮ ಇಡೀ ಕಾರ್ಖಾನೆ ಬೆಂಕಿಯ ಕೆನ್ನಾಲಿಗೆಗೆ ಸಿಕ್ಕು ಭಸ್ಮವಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಕಾರ್ಖಾನೆಯಲ್ಲಿ ಸುಮಾರು 50 ಭಾರತೀಯರು ಕೆಲಸ ಮಾಡುತ್ತಿದ್ದು, ಈ ಪೈಕಿ 18 ಕಾರ್ಮಿಕರು ದುರ್ಮರಣಕ್ಕೀಡಾಗಿದ್ದಾರೆ ಎಂದು ರಕ್ಷಣಾ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ರನ್’ವೇಯಲ್ಲೇ ವಿಮಾನ ಪತನ; ಪ್ರಯಾಣಿಕರು ಪವಾಡಸದೃಶ ಪಾರು

ಇನ್ನು ಸುಡಾನ್ ಸ್ಫೋಟದ ಮಾಹಿತಿ ಪಡೆದ ಕೇಂದ್ರ ಸರ್ಕಾರ, ಸುಡಾನ್‌ ಜೊತೆ ನಿರಂತರ ಸಂಪರ್ಕದಲ್ಲಿದ್ದು, ಕ್ಷಣ ಕ್ಷಣದ ಮಾಹಿತಿ ಪಡೆಯುತ್ತಿದೆ.

ಸಂತ್ರಸ್ತ ಕುಟುಂಬಸ್ಥರ ನೆರವಿಗಾಗಿ ವಿದೇಶಾಂಗ ಇಲಾಖೆ ಈಗಾಗಲೇ ಸಹಾಯವಾಣಿ ಕೇಂದ್ರ ತೆರೆದಿದ್ದು, +249-921917471 ನಂಬರ್‌ಗೆ ಕರೆ ಮಾಡಿ ಮಾಹಿತಿ ಪಡೆಯುವಂತೆ ಮನವಿ ಮಾಡಿದೆ.

ಈ ಕುರಿತು ಟ್ವಿಟ್ ಮಾಡಿರುವ ವಿದೇಶಾಂಗ ಸಚಿವ ಜೈ ಶಂಕರ್, ಭಾರತೀಯರ ರಕ್ಷಣೆಗಾಗಿ ಸರ್ಕಾರ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಭರವಸೆ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮೋದಿ ಅವಧಿಯಲ್ಲಿ ವಾಕ್‌ ಸ್ವಾತಂತ್ರ್ಯಕ್ಕೆ ಕಡಿವಾಣ : ಸಲ್ಮಾನ್‌ ರಶ್ದಿ ಆರೋಪ
ಆಸೀಸ್‌ನಲ್ಲಿ ಮಕ್ಕಳಿಗೆ ಜಾಲತಾಣ ಬಳಕೆ ನಿಷೇಧ : ನಾಳೆಯಿಂದ ಜಾರಿ