ಶೀಘ್ರ ಇರಾನ್‌ ತೊರೆಯಿರಿ : ಭಾರತೀಯರಿಗೆ ಸೂಚನೆ

Kannadaprabha News   | Kannada Prabha
Published : Jan 15, 2026, 04:28 AM IST
S Jaishankar

ಸಾರಾಂಶ

ಇರಾನ್‌ನಲ್ಲಿ ಕಳೆದ 18 ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ದಾಳಿಯ ಬೆದರಿಕೆ ಹಾಕುತ್ತಿರುವ ಕಾರಣ, ಇರಾನ್‌ನಲ್ಲಿರುವ ಭಾರತೀಯರಿಗೆ ಆದಷ್ಟು ಬೇಗ ದೇಶ ತೊರೆಯುವಂತೆ ಭಾರತ ಸರ್ಕಾರ ಸೂಚಿಸಿದೆ.

ನವದೆಹಲಿ: ಇರಾನ್‌ನಲ್ಲಿ ಕಳೆದ 18 ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ದಾಳಿಯ ಬೆದರಿಕೆ ಹಾಕುತ್ತಿರುವ ಕಾರಣ, ಇರಾನ್‌ನಲ್ಲಿರುವ ಭಾರತೀಯರಿಗೆ ಆದಷ್ಟು ಬೇಗ ದೇಶ ತೊರೆಯುವಂತೆ ಭಾರತ ಸರ್ಕಾರ ಸೂಚಿಸಿದೆ.

ಭಾರತೀಯ ರಾಯಭಾರ ಕಚೇರಿ ಮಾರ್ಗಸೂಚಿ

ಈ ಬಗ್ಗೆ ಟೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ‘ಪ್ರಸ್ತುತ ಇರಾನ್‌ನಲ್ಲಿರುವ ಭಾರತೀಯರು (ವಿದ್ಯಾರ್ಥಿಗಳು, ಯಾತ್ರಿಕರು, ಉದ್ಯಮಿಗಳು, ಪ್ರವಾಸಿಗರು) ವಾಣಿಜ್ಯ ವಿಮಾನ ಸೇರಿದಂತೆ ಲಭ್ಯವಿರುವ ಸಾರಿಗೆ ಮೂಲಕ ದೇಶವನ್ನು ತೊರೆಯಿರಿ’ ಎಂದು ಒತ್ತಾಯಿಸಿದೆ.

ತುರ್ತು ಸಂದರ್ಭದಲ್ಲಿ ಸಂಪರ್ಕಿಸಲು ತಿಳಿಸಿದೆ

ಜತೆಗೆ, ತುರ್ತು ಸಂದರ್ಭದಲ್ಲಿ 989128109115; 989128109109; 989128109102; 989932179359 ಅಥವಾ cons.tehran@mea.gov.in ಮೂಲಕ ತಮ್ಮನ್ನು ಸಂಪರ್ಕಿಸಲು ತಿಳಿಸಿದೆ. ಒಂದು ಕಡೆ ಪ್ರತಿಭಟನಾಕಾರರನ್ನು ಹತ್ತಿಕ್ಕಲು ಸರ್ಕಾರ ಬಲಪ್ರಯೋಗ, ಬಂಧನ, ಗಲ್ಲುಶಿಕ್ಷೆಯ ಬೆದರಿಕೆಯಂತಹ ಕ್ರಮಗಳನ್ನು ಕೈಗೊಳ್ಳುತ್ತಿದ್ದರೆ, ಇನ್ನೊಂದು ಕಡೆ ಅಮೆರಿಕ ಅಧ್ಯಕ್ಷ ಟ್ರಂಪ್‌ ದಾಳಿಯ ಎಚ್ಚರಿಕೆ ನೀಡುತ್ತಿದ್ದಾರೆ. ಹೀಗಾಗಿ ಭಾರತ ಈ ಎಚ್ಚರಿಕೆ ನೀಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಗ್ರೀನ್‌ಲ್ಯಾಂಡ್‌ ಪ್ರಧಾನಿ ಜತೆ ಟ್ರಂಪ್‌ ವಾಗ್ಯುದ್ಧ
ಟ್ರಂಪ್‌ ತೆರಿಗೆ ಬಗ್ಗೆ ಇಂದು ಅಮೆರಿಕ ಸುಪ್ರೀಂ ಕೋರ್ಟ್‌ ನಿರ್ಧಾರ, ಸೋತರೆ ದೇಶ ದಿವಾಳಿ ಗ್ಯಾರಂಟಿ ಎಂದ ಅಧ್ಯಕ್ಷ!