ಸತ್ತು 4 ತಿಂಗಳ ಬಳಿಕ ಖಮೇನಿ ಅಂತ್ಯಕ್ರಿಯೆ: ಪ್ರಧಾನಿ ಮೋದಿಗೆ ವಿಶೇಷ ಆಹ್ವಾನ ನೀಡಿದ ಇರಾನ್​

Published : Jun 24, 2026, 07:07 PM IST
PM Narendra Modi

ಸಾರಾಂಶ

ನಾಲ್ಕು ತಿಂಗಳ ಹಿಂದೆ ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಹತ್ಯೆಯಾಗಿದ್ದಾರೆ ಎನ್ನಲಾದ ಇರಾನ್ ಸರ್ವೋಚ್ಛ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆ ಜುಲೈ 9 ರಂದು ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇರಾನ್ ಆಹ್ವಾನ ನೀಡಿದೆ ಎಂದು ವರದಿಯಾಗಿದೆ. ಯುದ್ಧದ ಕಾರಣದಿಂದಾಗಿ ವಿಳಂಬವಾಗಿದ್ದ ಈ ಅಂತ್ಯಕ್ರಿಯೆಯು ಖಮೇನಿ ಅವರ ಹುಟ್ಟೂರಾದ ಮಶಾದ್‌ನಲ್ಲಿ ನಡೆಯಲಿದೆ.

ಇರಾನ್‌ ಸರ್ವೋಚ್ಛ ನಾಯಕ ಆಯತೊಲ್ಲಾ ಅಲಿ ಖಮೇನಿ ಸತ್ತು ನಾಲ್ಕು ತಿಂಗಳಾಗಿದ್ದು, ಇದೀಗ ಅವರ ಅಂತ್ಯಕ್ರಿಯೆ ನೆರವೇರಿಸಲು ಇರಾನ್​ ಸಿದ್ಧತೆ ನಡೆಸಿದೆ. ಕಳೆದ ಫೆ.28ರಂದು ಅಮೆರಿಕ ಮತ್ತು ಇಸ್ರೇಲ್‌ ನಡೆಸಿದ ಜಂಟಿ ದಾಳಿಯಲ್ಲಿ, ಖಮೇನಿ ಹತ್ಯೆಗೀಡಾಗಿದ್ದರು. ಅವರ ಅಂತ್ಯಕ್ರಿಯೆಯನ್ನು ಜುಲೈ 9ರಂದು ನಡೆಸಲು ಸಿದ್ಧತೆ ನಡೆದಿದ್ದು, ಕುತೂಹಲ ಎನ್ನುವಂತೆ ಇದರಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇರಾನ್‌ ಆಹ್ವಾನ ನೀಡಿದೆ ಎನ್ನುವ ಸುದ್ದಿ ವರದಿಯಾಗಿದೆ. ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಆಹ್ವಾನ ನೀಡಿದ್ದಾರೆ ಎಂದು ರಾಜತಾಂತ್ರಿಕ ಮೂಲಗಳು ಬುಧವಾರ ತಿಳಿಸಿವೆ. ಖಮೇನಿ ಹುಟ್ಟೂರಾದ ಮಶಾದ್‌ ನಗರದಲ್ಲಿ ಅವರ ಅಂತ್ಯಕ್ರಿಯೆ ನೆರವೇರಲಿದ್ದು, ಇದಕ್ಕೆ ಭಾರತಕ್ಕೆ ಆಹ್ವಾನ ನೀಡಲಾಗಿದ್ದು, ಭಾರತ ಈ ಕುರಿತು ತನ್ನ ನಿರ್ಧಾರವನ್ನು ಇನ್ನಷ್ಟೇ ಪ್ರಕಟಿಸಬೇಕಿದೆ ಎನ್ನಲಾಗಿದೆ.

36 ವರ್ಷಗಳ ಪಯಣ

36 ವರ್ಷಗಳ ಕಾಲ ಇಸ್ಲಾಮಿಕ್ ಗಣರಾಜ್ಯದ ಸರ್ವೋಚ್ಚ ನಾಯಕರಾಗಿ ಸೇವೆ ಸಲ್ಲಿಸಿದ್ದ 86 ವರ್ಷದ ಆಯತೊಲ್ಲಾ ಅಲಿ ಖಮೇನಿ, ತಮ್ಮ ಆಡಳಿತದುದ್ದಕ್ಕೂ ಅಮೆರಿಕ ಮತ್ತು ಇಸ್ರೇಲ್‌ನ ವೈರತ್ವ ಎದುರಿಸುತ್ತಲೇ ಬಂದಿದ್ದರು. ಇವರು ಸಾವನ್ನಪ್ಪಿದ ಬಳಿಕ ಮಧ್ಯಪ್ರಾಚ್ಯದಲ್ಲಿ ಅಮೆರಿಕ ಮತ್ತು ಇರಾನ್‌ ನಡುವೆ ಸುದೀರ್ಘ ಯುದ್ಧ ಆರಂಭವಾಗಿತ್ತು. ಕಳೆದ ಮಾರ್ಚ್ ತಿಂಗಳಲ್ಲಿ ನಡೆಯಬೇಕಿದ್ದ ಖಮೇನಿ ಅಂತ್ಯಕ್ರಿಯೆಯನ್ನು ಸಂಘರ್ಷದಿಂದಾಗಿ ಮುಂದೂಡಲಾಗಿತ್ತು. ಈ ವೇಳೆ 1 ಕೋಟಿಗೂ ಅಧಿಕ ಜನ ಭಾಗಿಯಾಗುವ ನಿರೀಕ್ಷೆಯಿದೆ.

ಯುದ್ಧದಲ್ಲಿ ವಿನಾಯಿತಿ

ಇಸ್ಲಾಮಿಕ್ ಕಾನೂನಿನ ಪ್ರಕಾರ ಮೃತರನ್ನು ಸಾಧ್ಯವಾದಷ್ಟು ಬೇಗ ಮತ್ತು ಆದರ್ಶಪ್ರಾಯವಾಗಿ ಮರಣದ ಒಂದು ದಿನದೊಳಗೆ ಸಮಾಧಿ ಮಾಡಬೇಕೆಂದು ಆದೇಶಿಸಲಾಗಿದ್ದರೂ, ವಿಶೇಷವಾಗಿ ಯುದ್ಧದ ಸಮಯದಲ್ಲಿ ವಿನಾಯಿತಿಗಳನ್ನು ಅನುಮತಿಸಲಾಗಿದೆ. ಈ ಹಿನ್ನೆಲೆಯಲ್ಲಿ ಆಯತೊಲ್ಲಾ ಅಲಿ ಖಮೇನಿ ಅಂತ್ಯಕ್ರಿಯೆ ವಿಳಂಬ ಮಾಡಲಾಗಿದೆ ಎಂದು ಇರಾನ್‌ ಸರ್ಕಾರ ಸ್ಪಷ್ಟಪಡಿಸಿದೆ.

ವರದಿಗಳ ಪ್ರಕಾರ, ಅಯತೊಲ್ಲಾ ಖಮೇನಿಯ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕಾಗಿ ಟೆಹ್ರಾನ್‌ನ `ಗ್ರಾಂಡ್ ಮೊಸಲ್ಲಾ’ ಸಂಕೀರ್ಣದಲ್ಲಿ ಇರಿಸಲಾಗುವುದು. ಅಲ್ಲದೇ ಟೆಹ್ರಾನ್ ಮತ್ತು ಕೋಮ್ ನಗರಗಳಲ್ಲಿ ಬೃಹತ್ ಮೆರವಣಿಗೆ ನಡೆಯಲಿದ್ದು, ಇದರೊಂದಿಗೆ ಇರಾಕ್‌ನ ಪವಿತ್ರ ನಗರಗಳಾದ ನಜಾಫ್ ಮತ್ತು ಕರ್ಬಲಾದಲ್ಲೂ ವಿಶೇಷ ಪ್ರಾರ್ಥನೆ ನಡೆಯಲಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಹೆಚ್ಚು ಬಂದ ಕರೆಂಟ್​ ಬಿಲ್​: ನೋಡಿದ್ರೆ ಮನೆಯಲ್ಲಿ ಪತ್ತೆಯಾಯ್ತು 309 ಹೆಬ್ಬಾವುಗಳು- ಮೈ ಝುಂ ಎನ್ನೋ ಸ್ಟೋರಿ
Japan Caste System: ಜಪಾನ್‌ನಲ್ಲಿ ಜಾತಿ ವ್ಯವಸ್ಥೆ ಇದೆಯೇ? ಯೂಟ್ಯೂಬರ್ ಹೇಳಿದ ಸತ್ಯಗಳಿವು!