
ಭಾರತದಲ್ಲಿ ನೀಟ್ ಪರೀಕ್ಷಾ ಅಕ್ರಮ, ಶಿಕ್ಷಣ ಸುಧಾರಣೆಗಾಗಿ ವಿದ್ಯಾರ್ಥಿಗಳ ಪ್ರತಿಭಟನೆಯಂತೆಯೇ ಇಟಲಿಯಲ್ಲಿ ಹಣದುಬ್ಬರ ಮತ್ತು ಹದಗೆಡುತ್ತಿರುವ ಶಿಕ್ಷಣ ವ್ಯವಸ್ಥೆ ವಿರುದ್ಧ ಆಕ್ರೋಶಗೊಂದ ಜನರು ಬೀದಿಗಿಳಿದಿದ್ದು ಪ್ರಧಾನಿ ಜಾರ್ಜಿಯಾ ಮೆಲೋನಿ ವಿರುದ್ಧ ಸಂಘರ್ಷ ಭುಗಿಲೆದ್ದಿದೆ.
ಹೌದು ತೀವ್ರಗೊಂಡಿರುವ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಕಾರ್ಮಿಕ ಸಂಘಟನೆಗಳು ಒಟ್ಟಾಗಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರ ಸರ್ಕಾರದ ವಿರುದ್ಧ ಪ್ರತಿಭಟನೆ ತೀವ್ರಗೊಳಿಸಿವೆ. ರೋಮ್ ಸೇರಿದಂತೆ ಹಲವು ನಗರಗಳಲ್ಲಿ ಶಾಲೆಗಳನ್ನು ವಶಕ್ಕೆ ಪಡೆಲಾಗಿದೆ. ಉದ್ರಿಕ್ತ ಜನರು ಪೊಲೀಸರೊಂದಿಗೆ ಘರ್ಷಣೆ ನಡೆಸುತ್ತಿದ್ದಾರೆ.
ಫ್ರಾನ್ಸ್, ಸ್ಪೇನ್ನಲ್ಲಿ ನಡೆಯುತ್ತಿರುವ ಹಿಂಸಾಚಾರ ಚಳವಳಿಗಳಿಂದ ಪ್ರೇರಿತರಾಗಿರುವ ಜನರು ಇಟಲಿಯಾದ್ಯಂತ ಸರಣಿ ಪ್ರತಿಭಟನೆಗಳು ನಡೆಸುತ್ತಿದ್ದಾರೆ ಎಂದು ವರದಿಯಾಗಿವೆ. ಆದರೆ ಈ ಎಲ್ಲಾ ಪ್ರತಿಭಟನೆ ಸಂಘರ್ಷ ಹಿಂಸಾಚಾರಗಳ ಹಿಂದಿರುವ ಉದ್ದೇಶವೊಂದೇ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರ ಬಲಪಂಥೀಯ ಸರ್ಕಾರವನ್ನು ವಿರೋಧಿಸುವುದಾಗಿದೆ.
ದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಗಳನ್ನು ಪ್ರಧಾನಿ ಮೆಲೋನಿ ತೀವ್ರವಾಗಿ ಖಂಡಿಸಿದ್ದಾರೆ. ಅಲ್ಲದೆ ದೇಶದಲ್ಲಿ ಹಿಂಸಾಚಾರ ಅರಾಜಕತೆ ಸೃಷ್ಟಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿರುವ ಅವರು ಇಂತಹ ಘಟನೆಗಳನ್ನು ಸಹಿಸಲು ಸಾಧ್ಯವಿಲ್ಲ ಎಂದು ಎಚ್ಚರಿಸಿದ್ದಾರೆ.
ಇಟಲಿಯಾದ್ಯಂತ ನಡೆಯುತ್ತಿರುವ ಪ್ರತಿಭಟನೆ, ಹಿಂಸಾಚಾರ ಕುರಿತಂತೆ 'X' ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೆಲೋನಿ, ಶಾಂತಿಯುತ ಪ್ರತಿಭಟನೆ ನಡೆಸುವ ಜನರ ಬಗ್ಗೆ ನನಗೆ ಅಪಾರ ಗೌರವವಿದೆ. ಆದರೆ ವಿದ್ಯಾರ್ಥಿಗಳ ನೆಪದಲ್ಲಿ ಹಿಂಸಾಚಾರ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟ ಮಾಡುವ ಕ್ಷುದ್ರ ಶಕ್ತಿಗಳ ಕೃತ್ಯವನ್ನು ಸಹಿಸಲು ಸಾಧ್ಯವಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಪೋಸ್ಟ್ನಲ್ಲಿ ಸಿಜಿಐಎಲ್ (CGIL) ಕರೆ ನೀಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿದವರು ಹಾಗೂ ಅದರಲ್ಲಿ ಪಾಲ್ಗೊಂಡಿದ್ದವರೆಲ್ಲ ಎಡಪಂಥೀಯ ನಾಯಕರೇ ಸೇರಿದ್ದಾರೆ. ಜನರು ಯಾವುದೇ ವಿಚಾರ ಅಥವಾ ಬೇಡಿಕೆಗಳಿಗೆ ಪ್ರತಿಭಟಿಸಲು ನಿರ್ಧರಿಸಿದರೂ ಸರಿ. ಆದ್ರೆ ಪ್ರಜಾಪ್ರಭುತ್ವ ಧಕ್ಕೆಯಾಗದಂತೆ ಸಾರ್ವಜನಿಕರು ಸಹಕಾರ ಮುಖ್ಯವಾಗಿದೆ ಎಂದಿದ್ದಾರೆ.
ಇಟಲಿಯ ಹಲವು ನಗರಗಳಲ್ಲಿ ಪ್ರತಿಭಟನೆ ನೆಪದಲ್ಲಿ ನಡೆದ ಹಿಂಸಾಚಾರಗಳು ಸಹಿಸಲು ಸಾಧ್ಯವಿಲ್ಲ ಎಂದಿರುವ ಪ್ರಧಾನಿ ಮೆಲೋನಿ, ಮಿಲನ್ನಲ್ಲಿ, ಇಟಾಲಿಯನ್ ಪೊಲೀಸರು ಮತ್ತು ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಈ ಹಿಂಸಾಚಾರದಲ್ಲಿ ಹಲವು ಅಧಿಕಾರಿಗಳು ಗಾಯಗೊಂಡಿದ್ದಾರೆ. ಪ್ರತಿಭಟನಾಕಾರರು ದಾಂಧಲೆ ಹಿಂಸಾಚಾರ ನಡೆಸಿದ್ದಾರೆ.
ಇನ್ನು ಟುರಿನ್ನಲ್ಲಿ ಕಿಟಕಿಗಳನ್ನು ಒಡೆಯಲು ಕಲ್ಲು, ಸುತ್ತಿಗೆಗಳನ್ನು ಕೊಂಡೊಯ್ಯುತ್ತಿದ್ದ ಕೆಲವರನ್ನ ವಶಕ್ಕೆ ಪಡೆಯಲಾಗಿದೆ. ಅದೇ ಸಮಯದಲ್ಲಿ, ಬೊಲೊಗ್ನಾದಲ್ಲಿ ಹಿಂಸಾಚಾರ ಮತ್ತು ಅಶಾಂತಿಯ ಕಾರಣದಿಂದಾಗಿ ಮುಂಜಾಗ್ರತೆಗಾಗಿ ರೈಲು ನಿಲ್ದಾಣವನ್ನು ಮುಚ್ಚಬೇಕಾಯಿತು. ಕೆಲವು ಸಮಾಜಘಾತುಕ ಶಕ್ತಿಗಳು ಪ್ರತಿಭಟನೆಗಳನ್ನು ದುರುಪಯೋಗಪಡಿಸಿಕೊಂಡು ಹಿಂಸಾಚಾರ ಸೃಷ್ಟಿಸಲು ಭದ್ರತಾ ಸಿಬ್ಬಂದಿ ಮೇಲೆ ದಾಳಿ ಮಾಡಲು ನಗರದಾದ್ಯಂತ ವ್ಯವಸ್ಥೆ ಹಾಳುಗೆಡವಲು ಯತ್ನಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
Europe's streets are on fire.
🇫🇷 France: ~7,000 detained, 86% minors. A teen lost a hand to a stun grenade
🇮🇹 Italy: Clashes at Milan's Duomo, stones and water cannon in Turin
🇧🇪 Belgium, 🇬🇷 Greece, 🇪🇸 Spain: students on the streets
The anger: crumbling schools, teacher shortages, cost of living.
— Siddhant Mishra (@siddhantvm) October 17, 2026
ಅದೇ ರೀತಿ ತಮ್ಮ ಪೋಸ್ಟ್ನಲ್ಲಿ ಪ್ರಧಾನಿಯವರು ಮೆಲೋನಿ ಅವರು, ಪ್ರತಿಯೊಬ್ಬ ವ್ಯಕ್ತಿಗೂ ಪ್ರತಿಭಟಿಸುವ ಹಕ್ಕಿದೆ, ಆದರೆ ನಗರಗಳಲ್ಲಿ ಹಿಂಸಾಚಾರ ಮತ್ತು ಬೆಂಕಿ ಹಚ್ಚುವ ಕೃತ್ಯಗಳನ್ನು ಎಸಗುವುದು ಪ್ರತಿಭಟನೆಯ ಹಕ್ಕು ಆಗಲಾರದು ಎಂದಿದ್ದಾರೆ.
ಈ ವಿಷಯದಲ್ಲಿ ಯಾವುದೇ ರೀತಿಯ ಹಿಂಸಾ ಸ್ವರೂಪದ ಪ್ರತಿಭಟನೆಗಳಿಗೆ ಬೆಂಬಲ ನೀಡದಂತೆ ನಾವು ಪಕ್ಷಗಳಿಗೆ ಮತ್ತೊಮ್ಮೆ ಮನವಿ ಮಾಡುತ್ತೇನೆ. ಇಂಥ ಹಿಂಸಾತ್ಮಕ ಘಟನೆಗಳನ್ನು ಖಂಡಿಸಬೇಕು, ಎಲ್ಲಾ ಪ್ರತಿಭಟನೆಗಳು ಶಾಂತಿಯುತವಾಗಿ ನಡೆಯುವಂತೆ ಸ್ಪಷ್ಟ ಕರೆ ನೀಡಬೇಕು. ಇಂತಹ ಸನ್ನಿವೇಶಗಳಲ್ಲಿ, ಎಲ್ಲರೂ ಒಗ್ಗಟ್ಟಾಗಿ ವಿರೋಧಿಸಬೇಕು. ಈ ವಿಷಯದಲ್ಲಿ ಪ್ರತಿಪಕ್ಷಗಳ ಮೌನ ವಹಿಸುವುದು ಅಥವಾ ಹಿಂಜರಿಯುವುದು ಹಿಂಸಾಚಾರಕ್ಕೆ ಬೆಂಬಲ ನೀಡಿದಂತಾಗುತ್ತದೆ. ಇಂತಹ ಸಂದರ್ಭಗಳಲ್ಲಿ ಮೌನವು ಸ್ವೀಕಾರಾರ್ಹವಲ್ಲ ಎಂದು ಪ್ರತಿಪಕ್ಷಗಳಿಗೂ ಎಚ್ಚರಿಕೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ