
ಟೋಕಿಯೋ(ಫೆ.25): ಜಪಾನಿನಲ್ಲಿ ಕೊರೋನಾ ವೈರಸ್‌ನಿಂದಾಗಿ ಜನರು ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆಯಂತೆ. ಈ ಹಿನ್ನೆಲೆಯಲ್ಲಿ ಜನರ ಒಂಟಿತನ ನಿವಾರಿಸಲು ಹೊಸದೊಂದು ಸಚಿವ ಹುದ್ದೆಯನ್ನು ಸೃಷ್ಟಿಸಲಾಗಿದೆ.
2018ರಲ್ಲಿ ಬ್ರಿಟನ್ ಇಂತಹುದೇ ಒಂದು ಸಚಿವ ಹುದ್ದೆಯನ್ನು ಸೃಷ್ಟಿಸಿತ್ತು. ಅದನ್ನೇ ಉದಾಹರಣೆಯನ್ನಾಗಿ ಇಟ್ಟುಕೊಂಡು ಜಪಾನ್ ಈಗ ಹೆಚ್ಚುತ್ತಿರುವ ಆತ್ಮಹತ್ಯೆ ಪ್ರಕರಣಗಳ ನಿಯಂತ್ರಣಕ್ಕೆ ತೆಸುಶಿ ಸಕಾಮೊಟೊ ಎನ್ನುವವರನ್ನು ಒಂಟಿತನ ನಿವಾರಣಾ ಸಚಿವರನ್ನಾಗಿ ನೇಮಿಸಿದೆ.
ಇದೇ ವೇಳೆ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿರುವ ಸಚಿವ ಸಕಾಮೊಟೊ, ಜನರು ಖಿನ್ನತೆಗೆ ಒಳಗಾಗುತ್ತಿರುವ ಬಗ್ಗೆ ಅಧ್ಯಯನ ನಡೆಸಿ ಸಾಮಾಜಿಕ ಏಕಾಂಗಿತವನ್ನು ನಿವಾರಿಸಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಜನರ ಮಧ್ಯೆ ಸಂಬಂಧವನ್ನು ಬಲಗೊಳಿಸಲು ಆದ್ಯತೆ ನೀಡಲಾಗುವುದು ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ