
ದಕ್ಷಿಣ ಕೊರಿಯಾ: ಅಜರ್‌ಬೈಜಾನ್ ಘಟನೆ ಮಾಸುವ ಮುನ್ನವೇ ಮತ್ತೊಂದು ವಿಮಾನ Jeju Air Flight 2216 ಪತನವಾಗಿದ್ದು, ಸುಮಾರು 28 ಪ್ರಯಾಣಿಕರು ಮೃತರಾಗಿರುವ ಬಗ್ಗೆ ವರದಿಯಾಗಿದೆ. ದಕ್ಷಿಣ ಕೊರಿಯಾದ ಮುವಾನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದುರಂತ ಸಂಭವಿಸಿದ್ದು, ಪ್ಲೇನ್ ರನ್‌ವೇಯಿಂದ ಕೆಳಗಿಳಿದು ಸ್ಫೋಟವಾಗುವ ಭಯಾನಕ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ನೋಡುಗರನ್ನು ಬೆಚ್ಚಿ ಬೀಳಿಸುತ್ತಿದೆ. ಈ ಸ್ಪೋಟದ ಪರಿಣಾಮ 28 ಪ್ರಯಾಣಿಕರು ಮೃತರಾಗಿದ್ದಾರೆ ಎಂದು ಹೇಳಲಾಗಿದೆ.
ಪತನಕ್ಕೊಳಗಾದ ವಿಮಾನದಲ್ಲಿ 175 ಪ್ರಯಾಣಿಕರು, ಮತ್ತು 6 ಸಿಬ್ಬಂದಿ ಇದ್ದರು ಎಂದು ಯೋನ್ಹಾಫ್ ವರದಿ ಮಾಡಿದೆ. ಸ್ಥಳೀಯ ಮಾಧ್ಯಮಗಳ ವರದಿ ಪ್ರಕಾರ, ವಿಮಾನ ಪತನ ಮತ್ತು ರನ್‌ವೇಯಿಂದ ಕೆಳಗೆ ಇಳಿದು ಕಾಕ್‌ಪಿಟ್ ಸ್ಪೋಟಗೊಂಡಿದೆ. ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಪ್ರಯಾಣಿಕನೋರ್ವ ಹೊರಗೆ ಬರುತ್ತಿರೋದನ್ನು ಗಮನಿಸಬಹುದು. ಮುವಾನ ಕಾಲಮಾನದ ಪ್ರಕಾರ ಬೆಳಗ್ಗೆ 9.0ಕ್ಕೆ ಈ ಘಟನೆ ಸಂಭವಿಸಿದೆ.
ಇದನ್ನೂ ಓದಿ: ವಿಮಾನ ಪತನಕ್ಕೂ ಮುನ್ನ ಪ್ರಯಾಣಿಕರ ಪ್ರಾರ್ಥನೆ ವಿಡಿಯೋ ಸೆರೆ, ದುರಂತ ಘಟನೆಯ ಚಿತ್ರಣ!
ಮುವಾನ್ ವಿಮಾನನಿಲ್ದಾಣ ದಕ್ಷಿಣ ಕೊರಿಯಾದ ಜಿಯೊಲ್ಲಾ ಪ್ರಾಂತ್ಯದ ಕರಾವಳಿ ಭಾಗದಲ್ಲಿದೆ. ವಿಮಾನ ಪತನವಾಗುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈ ಏರ್‌ಪೋರ್ಟ್‌ನಲ್ಲಿ ನಡೆದ ದುರಂತ ಇದಾಗಿದೆ. ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ಶಿಫ್ಟ್ ಮಾಡುವ ಕೆಲಸ ನಡೆಯುತ್ತಿದ್ದು, ಸದ್ಯ ಮುವಾನ್ ಏರ್‌ಪೋರ್ಟ್ ಎಲ್ಲಾ ವಿಮಾನಗಳ ಕಾರ್ಯಚರಣೆಯನ್ನು ತಾತ್ಕಲಿಕವಾಗಿ ತಡೆ ಹಿಡಿಯಲಾಗಿದೆ ಎನ್ನಲಾಗಿದೆ. ವಿಮಾನ ಬ್ಯಾಂಕಾಕ್‌ನಿಂದ ಮುವಾನ್‌ಗೆ ಬಂದಿತ್ತು.
ಇದನ್ನೂ ಓದಿ: Breaking: ಅಜೆರ್ಬೈಜಾನ್ ವಿಮಾನ ದುರಂತಕ್ಕೆ ರಷ್ಯಾ ಕಾರಣ, ಕ್ಷಮೆ ಕೇಳಿದ ವ್ಲಾಡಿಮಿರ್ ಪುಟಿನ್!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ