
ವಾಷಿಂಗ್ಟನ್( 20) ಅಮೆರಿಕದ ನೂತನ ಅಧ್ಯಕ್ಷರಾಗಿ ಜೋ ಬೈಡನ್ ಪದಗ್ರಹಣ ಮಾಡಿದ್ದಾರೆ. ಉಪಾಧ್ಯಕ್ಷರಾಗಿ ಭಾರತೀಯ ಮೂಲದ ಕಮಲಾ ಹ್ಯಾರೀಸ್ ಅಧಿಕಾರ ಸ್ವೀಕರಿಸಿದ್ದಾರೆ.
ಜೋ ಬೈಡೆನ್ 46ನೇ ಅಧ್ಯಕ್ಷರಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸದರು. ಅಮೆರಿಕಾದಲ್ಲಿ. ಅಮೆರಿಕ ಕಂಡ ಅತ್ಯಂತ ಹಿರಿಯ ಅಧ್ಯಕ್ಷ ಎಂಬ ದಾಖಲೆಗೆ ಬೈಡೆನ್ ಪಾತ್ರವಾದರೆ ಉಪಾಧ್ಯಕ್ಷ ಹುದ್ದೆ ಏರಿದ ಮೊದಲ ಮಹಿಳೆ ಎಂಬ ಹಿರಿಮೆಗೆ ಕಮಲಾ ಹ್ಯಾರಿಸ್ ಪಾತ್ರವಾದರು.
ಅಮೆರಿಕ ಅಧ್ಯಕ್ಷೀಯ ಚುನಾವಣೆ ಇಡೀ ಪ್ರಪಂಚದ ಗಮನ ಸೆಳೆದಿತ್ತು. ಚುನಾವಣೆಯಲ್ಲಿ ಸೋತರೂ ಟ್ರಂಪ್ ಅಧಿಕಾರ ಬಿಟ್ಟುಕೊಡಲು ಮೊಂಡಾಟ ಮಾಡುತ್ತಲೇ ಬಂದಿದ್ದರು.
ಬೈಡನ್‌ಗೆ ಕಿಮ್ ರಿಂದ ಬೆದರಿಕೆ ಬಂತು
ಇದರೊಂದಿಗೆ ಅಮೆರಿಕದಲ್ಲಿ ಹೊಸ ಅಧಿಕಾರ ಆರಂಭವಾಗಲಿದೆ. ಇದು ಪ್ರಪಂಚದ ಮೇಲೆಯೂ ಪರಿಣಾಮ ಬೀರಲಿದೆ. ಕೊರೋನಾ, ಆರ್ಥಿಕತೆ ಸವಾಲುಗಳು ಹೊಸ ಆಡಳಿತಗಾರರ ಮುಂದೆ ಇದೆ.
ಡೊನಾಲ್ಡ್ ಟ್ರಂಪ್ ವಿವಿಧ ಮುಸ್ಲಿಂ ಬಾಹುಳ್ಯ ದೇಶಗಳ ಮೇಲಿನ ಪ್ರಯಾಣಿಕರಿಗೆ ವಿಧಿಸಿದ್ದ ನಿರ್ಬಂಧವನ್ನು ಬೈಡನ್ ತೆರವುಗೊಳಿಸಲಿದ್ದಾರೆ ಎನ್ನಲಾಗಿದ್ದು ಇದರೊಂದಿಗೆ ಜತೆಗೆ ಅಕ್ರಮ ವಲಸಿಗರು ದೇಶಕ್ಕೆ ಬರುವುದನ್ನು ತಡೆಯಲು ಅಮೆರಿಕ-ಮೆಕ್ಸಿಕೋ ಗಡಿಯಲ್ಲಿ ಗೋಡೆ ನಿರ್ಮಾಣಕ್ಕೆ ಟ್ರಂಪ್ ನೀಡಿದ್ದ ಆದೇಶವನ್ನು ಕೂಡ ರದ್ದು ಮಾಡುವ ಸಾಧ್ಯತೆ ಇದೆ.
ಭಾರತೀಯ ಕಾಲಮಾನ ರಾತ್ರಿ 10.30ಕ್ಕೆ ಪ್ರಮಾಣ ತೆಗೆದುಕೊಂಡಿದ್ದು ಪ್ರಧಾನಿ ನರೇಂದ್ರ ಮೋದಿ ಶುಭಾಶಯ ತಿಳಿಸಿದ್ದಾರೆ. ಪ್ರಜಾಪ್ರಭುತ್ವಕ್ಕೆ ಗೆಲುವಾಗಿದೆ ಎಂದು ಬೈಡನ್ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ