
ಅರಬರ ನಾಡಿನಲ್ಲಿ ಕನ್ನಡ ಡಿಂಡಿಮ ಮೊಳಗಿದೆ. ಮುಂದಿನ ಪೀಳಿಗೆಗೆ ಕನ್ನಡ ಉಳಿಸಲು ಪಣ ತೊಟ್ಟ ದುಬೈ ಕನ್ನಡಿಗರಿಂದ ಆರಂಭವಾಗಿದ್ದೇ ದುಬೈ ಕನ್ನಡ ಪಾಠಶಾಲೆ. ಅನಿವಾಸಿ ಭಾರತೀಯರಿಗೆ ವಿಶ್ವದ ಅತಿದೊಡ್ಡ ಉಚಿತ ಕನ್ನಡ ಶಾಲೆ ಇದಾಗಿದ್ದು, 870 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಲಿಯುತ್ತಿದ್ದು 19 ಶಿಕ್ಷಕರು, 60 ಸ್ವಯಂಸೇವಕರು ಕಾರ್ಯನಿರ್ವಹಿಸುತ್ತಿದ್ದಾರೆ.
ಕನ್ನಡಮಿತ್ರರ ‘ಕನ್ನಡ ಪಾಠಶಾಲೆ’ಗೆ ಈಗ ದಶಮಾನೋತ್ಸವ ಸಂಭ್ರಮ. ಈ ಹಿನ್ನೆಲೆಯಲ್ಲಿ ಕನ್ನಡ ಭಾಷೆ ಬೆಳವಣಿಗೆಗೆ ಕೊಡುಗೆ ನೀಡಿದವರಿಗೆ ‘ಕನ್ನಡ ಮಿತ್ರ’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕನ್ನಡಪ್ರಭ-ಸುವರ್ಣ ನ್ಯೂಸ್ ಚೀಫ್ ಮೆಂಟರ್ ರವಿ ಹೆಗಡೆ ಅವರಿಗೆ ಕನ್ನಡ ಮಿತ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ದುಬೈ ಕನ್ನಡ ಮಿತ್ರರು ಸಮಿತಿ ಅಧ್ಯಕ್ಷ ಶಶಿಧರ್ ನಾಗರಾಜಪ್ಪ, ಉಪಾಧ್ಯಕ್ಷ ಸಿದ್ದಲಿಂಗೇಶ್ ಬಿ.ಆರ್, ಮುಖ್ಯ ಕಾರ್ಯದರ್ಶಿ ಸುನೀಲ್ ಗವಾಸ್ಕರ್, ಖಜಾಂಜಿ ನಾಗರಾಜ್ ರಾವ್, ಜಂಟಿ ಕಾರ್ಯದರ್ಶಿ ಶಿವಶರಣಪ್ಪ ಮೇಟಿ ಹಾಜರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ