ಫ್ರಾನ್ಸ್ ಕಂಪನಿಗಳ ಜೊತೆ ಕೈಗಾರಿಕಾ ಸಚಿವ ಎಂಬಿ ಪಾಟೀಲ ಮಹತ್ವದ ಮಾತುಕತೆ, ಹೂಡಿಕೆ ಆಕರ್ಷಣೆ

Published : Sep 10, 2026, 06:47 PM IST
MB Patil Holds Talks with French Firms

ಸಾರಾಂಶ

ಸಚಿವ ಎಂ‌ ಬಿ ಪಾಟೀಲ ಫ್ರಾನ್ಸ್ ಪ್ರವಾಸದಲ್ಲಿ ಪ್ರತಿಷ್ಠಿತ ಕಂಪನಿಗಳ ಜೊತೆ ಮಹತ್ವದ ಮಾಕುಕತೆ ನಡೆಸಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಹೂಡಿಕೆ ವಿಸ್ತರಣೆ ಹಾಗೂ ಉದ್ಯೋಗ ಸೃಷ್ಟಿ ಕುರಿತು ಫಲಪ್ರದ ಚರ್ಚೆ ನಡೆಸಿದ್ದಾರೆ.

ಬೆಂಗಳೂರು (ಸೆ.10) : ರಾಜ್ಯದ ಕೈಗಾರಿಕಾ ಕ್ಷೇತ್ರಕ್ಕೆ ಹೆಚ್ಚಿನ ಬಂಡಾವಳ ಹೂಡಿಕೆ ಸೆಳೆಯುವ ಉದ್ದೇಶದೊಂದಿಗೆ ಫ್ರಾನ್ಸ್ ಪ್ರವಾಸದಲ್ಲಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಅವರು ಮೂರನೆಯ ದಿನವಾದ ಬುಧವಾರ ಲಿಸಿ ಏರೋಸ್ಪೇಸ್, ಆಬರ್ಟ್ ಅಂಡ್ ಡುವಲ್‌ ಮತ್ತು ಆರ್ಕೆಮಾ ಕಂಪನಿಗಳ ಜತೆ ಮಹತ್ತ್ವದ ಮಾತುಕತೆ ನಡೆಸಿದ್ದಾರೆ. ಈ ಬಗ್ಗೆ ಪ್ಯಾರಿಸ್ ನಿಂದ ಮಾಹಿತಿ ನೀಡಿರುವ ಅವರು, ಸಂಕೀರ್ಣ ಮೆಟಾಲಿಕ್ ಮೆಟೀರಿಯಲ್ ಕ್ಷೇತ್ರದಲ್ಲಿ ಅಗ್ರ ಕಂಪನಿಯಾಗಿರುವ ಆಬರ್ಟ್ ಅಂಡ್ ಡುವಲ್ ಕಂಪನಿಗೆ ಬೆಳಗಾವಿಯಲ್ಲಿ ಈಗಾಗಲೇ ಇರುವ ತನ್ನ ಉತ್ಪಾದನಾ ಘಟಕದ ಸಾಮರ್ಥ್ಯವನ್ನು ಹೆಚ್ಚಿಸುವಂತೆ ಕೋರಲಾಗಿದೆ ಎಂದಿದ್ದಾರೆ.

ಹೂಡಿಕೆ ಆಕರ್ಷಣೆ ಕುರಿತು ಚರ್ಚೆ

ಕಂಪನಿಯು ಬೆಳಗಾವಿಯಲ್ಲಿನ ಏಕಸ್ ಏರೋಸ್ಪೇಸ್ ವಿಶೇಷ ಆರ್ಥಿಕ ವಲಯದಲ್ಲಿ ನೆಲೆಯೂರಿದೆ. ಕಂಪನಿಯು ಮತ್ತಷ್ಟು ಹೂಡಿಕೆ ಮಾಡುವ ಕುರಿತು ಏಕಸ್ ಜತೆ ಚರ್ಚಿಸಬೇಕಾದ ಅಗತ್ಯವನ್ನು ರಾಜ್ಯ ಸರಕಾರ ಮತ್ತು ಕಂಪನಿಯ ಪ್ರತಿನಿಧಿಗಳು ಒಪ್ಪಿಕೊಂಡಿದ್ದಾರೆ. ಕಂಪನಿಯು ರಾಜ್ಯದಲ್ಲಿ ಸ್ಕ್ವಾಡ್ ಫೋರ್ಜಿಂಗ್ ಇಂಡಿಯಾ ಜತೆಯಲ್ಲೂ ಸಹಭಾಗಿತ್ವ ಹೊಂದಿದೆ

ಎಂದು ಅವರು ತಿಳಿಸಿದ್ದಾರೆ. ಲಿಸಿ ಏರೋಸ್ಪೇಸ್ ಕಂಪನಿಯು ಬಿಡಿಭಾಗಗಳ ತಯಾರಿಕೆಯಲ್ಲಿ ಪರಿಣತಿ ಹೊಂದಿದ್ದು, ಬೆಂಗಳೂರಿನಲ್ಲಿ ತಯಾರಿಕಾ ಘಟಕವನ್ನು ಹೊಂದಿದೆ. ಕಂಪನಿಯು ತನ್ನ ಭವಿಷ್ಯದ ಹೂಡಿಕೆ ಯೋಜನೆಗಳನ್ನು ಹಂಚಿಕೊಂಡಿದೆ. ನಾವು ರಾಜ್ಯದಲ್ಲೇ ಹೂಡಿಕೆ ಮಾಡುವಂತೆ ಹೇಳಿದ್ದೇವೆ ಎಂದು ಅವರು ನುಡಿದಿದ್ದಾರೆ.

ಬೆಂಗಳೂರಿನಲ್ಲಿ ತನ್ನ ತಯಾರಿಕಾ ಸ್ಥಾವರ ಹೊಂದಿರುವ ಮೆಟೀರಿಯಲ್ಸ್ ಕ್ಷೇತ್ರದ ಆರ್ಕೆಮಾ ಕಂಪನಿಯೊಂದಿಗಿನ ಮಾತುಕತೆಯೂ ಸಕಾರಾತ್ಮಕವಾಗಿ ನಡೆಯಿತು. ಮುಖ್ಯವಾಗಿ ಬ್ಯಾಟರಿ ಉತ್ಪಾದನೆಗೆ ಇರುವ ಸದವಕಾಶಗಳ ಬಗ್ಗೆ ಮನದಟ್ಟು ಮಾಡಿಕೊಡಲಾಗಿದೆ ಎಂದು ಪಾಟೀಲ ಮಾಹಿತಿ ನೀಡಿದ್ದಾರೆ. ಮಾತುಕತೆಯಲ್ಲಿ ಲಿಸಿ ಏರೋಸ್ಪೇಸ್ ಕಂಪನಿಯ ಉನ್ನತ ಪ್ರತಿನಿಧಿಗಳಾದ ಫ್ರಾಂಕೋಯಿಸ್ ಕ್ಸೇವಿಯರ್, ಭಾರತದ ವಿಭಾಗದ ಮುಖ್ಯಸ್ಥ ಅನಿಲ್ ಚೌಧರಿ, ಆರ್ಕೆಮಾ ಕಂಪನಿಯ ಉಪಾಧ್ಯಕ್ಷ ಅಬ್ದುಲ್ ಖಾದರ್ ಕದ್ರಿ, ಮಾಥ್ಯೂ ಲಾರೆಂಟ್, ವರ್ಜಿನ್ ಗುರಿನ್, ಆಬರ್ಟ್ ಅಂಡ್ ಡುವನ್ ಸಿಎಫ್‌ಒ ಪ್ಯಾಟ್ರಿಕ್ ಭಾಗವಹಿಸಿದ್ದರು.

ಫ್ರಾನ್ಸ್ ಕನ್ನಡ ಬಳಗದ ಭೇಟಿ

ಪ್ಯಾರಿಸ್‌ನಲ್ಲಿ ಸಕ್ರಿಯವಾಗಿರುವ 'ಫ್ರಾನ್ಸ್ ಕನ್ನಡ ಬಳಗ'ದ ಪದಾಧಿಕಾರಿಗಳು ಸಚಿವ ಎಂ ಬಿ ಪಾಟೀಲ ಅವರನ್ನು ಬುಧವಾರ ಭೇಟಿಯಾಗಿದ್ದರು. ಈ ಸಂದರ್ಭದಲ್ಲಿ ಬಳಗದ ಸದಸ್ಯರು ಫ್ರಾನ್ಸ್ ಮತ್ತು ಕರ್ನಾಟಕದ ಬಲವರ್ಧನೆಗೆ ಅನೇಕ ಚಿಂತನೆಗಳನ್ನು ಹಂಚಿಕೊಂಡರು. ಜತೆಗೆ ಫ್ರಾನ್ಸ್ ನಲ್ಲಿ ಕನ್ನಡ ಸಂಸ್ಕೃತಿ, ಭಾಷೆ, ಸಾಂಸ್ಕೃತಿಕ ವಿನಿಮಯ, ವಿದ್ಯಾರ್ಥಿಗಳಿಗೆ ಒದಗಿಸಬೇಕಾದ ಅವಕಾಶ ಇತ್ಯಾದಿಗಳ ಬಗ್ಗೆ ವಿಚಾರ ವಿನಿಮಯ ನಡೆಸಲಾಯಿತು ಎಂದು ಸಚಿವರು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಾಯುತ್ತಿರುವ ನಕ್ಷತ್ರದ ಕಥೆ ಬಿಚ್ಚಿಟ್ಟ ಜೇಮ್ಸ್ ವೆಬ್, ದೂರದರ್ಶಕದಿಂದ ಲಯನ್ ನೀಹಾರಿಕೆಯ ವಿಸ್ಮಯಕಾರಿ ಚಿತ್ರ ಸೆರೆ!
ಸುಡುತ್ತಿದೆ ಭೂಮಿ.. ಕುದಿಯುತ್ತಿದೆ ಸಾಗರ..! ಗ್ಲೋಬಲ್ ವಾರ್ಮಿಂಗ್ ಬಗ್ಗೆ ಆ ಶಾಕಿಂಗ್ ವರದಿಯಲ್ಲೇನಿದೆ?