ಇಲ್ಲಿ ತಮಿಳುನಾಡು ಹಾಗೂ ಕೇರಳದ 195 ಕಾರ್ಮಿಕರು ವಾಸವಾಗಿದ್ದರು. ಬೆಂಕಿ ದುರಂತಕ್ಕೆ ಆಘಾತ ವ್ಯಕ್ತಪಡಿಸಿರುವ ವಿದೇಶಾಂಗ ಸಚಿವ ಎಸ್.ಜೈಶಂಕರ್, ಭಾರತದ ರಾಯಭಾರಿ ಕಚೇರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ ಎಂದು ಹೇಳಿದ್ದಾರೆ.
ಕುವೈತ್: ಬಹುಮಹಡಿ ಕಟ್ಟಡದ ಬೆಂಕಿ ಅವಘಡವೊಂದರಲ್ಲಿ ಭಾರತೀಯರು ಸೇರಿದಂತೆ 41 ಜನರು ಸಾವನ್ನಪ್ಪಿರುವ ಘಟನೆ ಕುವೈತ್‌ನ ದಕ್ಷಿಣದ ಮಂಗಾಫ್ ಜಿಲ್ಲೆಯಲ್ಲಿ (Southern Mangaf district of Kuwait) ನಡೆದಿದೆ. ಇಂದು ಬೆಳಗ್ಗೆ ಅಡುಗೆಮನೆಯೊಂದರಲ್ಲಿ ಕಾಣಿಸಿಕೊಂಡ ಬೆಂಕಿ ನೋಡ ನೋಡುತ್ತಿದ್ದಂತೆ ಕಟ್ಟಡದ ತುಂಬೆಲ್ಲಾ ಆವರಿಸಿಕೊಂಡಿದೆ. ಈ ಬೆಂಕಿ ದುರಂತದಲ್ಲಿ 41 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಕುವೈತ್ ಉಪ ಪ್ರಧಾನಿ ಮಾಹಿತಿ ನೀಡಿದ್ದಾರೆ. ವರದಿ ಪ್ರಕಾರ, ಬೆಂಕಿ ಅವಘಡದಲ್ಲಿ ಕೇರಳ ಮೂಲದ ಐವರು ಮೃತರಾಗಿದ್ದಾರೆ. ಕೇರಳ ಮೂಲದ ಉದ್ಯಮಿ ಕೆ.ಜಿ. ಅಬ್ರಾಹಾಂ ಒಡೆತನದ ಕಟ್ಟಡ ಇದಾಗಿದ್ದು, ಇಲ್ಲಿ ತಮಿಳುನಾಡು ಹಾಗೂ ಕೇರಳದ 195 ಕಾರ್ಮಿಕರು ವಾಸವಾಗಿದ್ದರು. ಬೆಂಕಿ ದುರಂತಕ್ಕೆ ಆಘಾತ ವ್ಯಕ್ತಪಡಿಸಿರುವ ವಿದೇಶಾಂಗ ಸಚಿವ ಎಸ್.ಜೈಶಂಕರ್, ಭಾರತದ ರಾಯಭಾರಿ ಕಚೇರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ ಎಂದು ಹೇಳಿದ್ದಾರೆ.
40 ಸಾವು, 50ಕ್ಕೂ ಅಧಿಕ ಜನರಿಗೆ ಗಾಯ
undefined
ಈ ಕುರಿತು ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡಿರುವ ಕೇಂದ್ರ ಸಚಿವ ಎಸ್.ಜೈಶಂಕರ್, ಕುವೈತ್ ಸಿಟಿಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ 40 ಜನರು ಸಾವನ್ನಪ್ಪಿದ್ದಾರೆ. 50ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ರತದ ರಾಯಭಾರಿ ಕಚೇರಿಯ ಅಧಿಕಾರಿಗಳು ಸ್ಥಳದಲ್ಲಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ಮೃತರ ಸಾವಿಗೆ ಸಂತಾಪ ಸೂಚಿಸಿರುವ ಕೇಂದ್ರ ಸಚಿವರು, ಕುಟುಂಬಸ್ಥರಿಗೆ ದುಃಖ ತಡೆದುಕೊಳ್ಳುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ. ನಮ್ಮ ರಾಯಭಾರಿ ಕಚೇರಿಯಿಂದ ಸಂಪೂರ್ಣ ಸಹಾಯ ಸಿಗಲಿದೆ ಎಂದು ಜೈಶಂಕರ್ ಭರವಸೆಯನ್ನು ನೀಡಿದ್ದಾರೆ.
ಉಕ್ರೇನ್ ಜೊತೆಗಿನ ಸಂಘರ್ಷದಲ್ಲಿ ರಷ್ಯಾ ಸೇನೆಯಲ್ಲಿದ್ದ ಇಬ್ಬರು ಭಾರತೀಯರ ಸಾವು
ತುರ್ತು ಸಹಾಯವಾಣಿ ಸಂಖ್ಯೆ ಹೀಗಿದೆ
ಘಟನೆಯಲ್ಲಿ 30ಕ್ಕೂ ಹೆಚ್ಚು ಭಾರತೀಯರು ಗಾಯಗೊಂಡಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಅಧಿಕಾರಿಗಳು ಗಾಯಾಳುಗಳನ್ನು ಭೇಟಿಯಾಗಿದ್ದಾರೆ. ರಾಯಭಾರ ಕಚೇರಿ ಎಲ್ಲರಿಗೂ ನೆರವು ನೀಡಲಿದೆ ಎಂದು ಕುವೈತ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಎಕ್ಸ್ ಪೋಸ್ಟ್‌ನಲ್ಲಿ ಮಾಹಿತಿ ನೀಡಿದೆ. ಅಗ್ನಿ ಅವಘಡಕ್ಕೆ ಸಂಬಂಧಿಸಿದಂತೆ ಭಾರತದ ಕುಟುಂಬಸ್ಥರು ತುರ್ತು ಸಹಾಯವಾಣಿ ಸಂಖ್ಯೆ 965-65505246ಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ. ಸಾಧ್ಯವಿರೋ ಎಲ್ಲಾ ಸಹಾಯ ಮಾಡಲು ರಾಯಭಾರಿ ಕಚೇರಿ ಬದ್ಧವಾಗಿದೆ ಎಂದು ಅಧಿಕಾರಿಗಳು ಹೇಳಿಕೊಂಡಿದ್ದಾರೆ.
ಸದ್ಯ ಬೆಂಕಿ ನಿಯಂತ್ರಣಕ್ಕೆ ಬಂದಿದ್ದು, ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಕಟ್ಟಡ ಕಾರ್ಮಿಕರು ಇಲ್ಲಿ ವಾಸವಾಗಿದ್ದರು. ದಟ್ಟ ಹೊಗೆ ಕಟ್ಟಡದ ತುಂಬೆಲ್ಲಾ ಆವರಿಸಿದ್ದರಿಂದ ಉಸಿರಾಡಲು ಸಾಧ್ಯವಾಗದೇ ಜನರು ಸಾವನ್ನಪ್ಪಿರೋದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಸಾಮಾರ್ಥ್ಯಕ್ಕಿಂತ ಹೆಚ್ಚಿನ ಕಾರ್ಮಿಕರನ್ನು ಕಟ್ಟಡದಲ್ಲಿ ಇರಿಸಲಾಗಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ.
ದೇವಾಲಯದ ಮಂಗಳಾರತಿ ತಟ್ಟೆ ದೀಪದಲ್ಲಿ ಸಿಗರೇಟ್ ಹಚ್ಚಿಕೊಂಡು ಸೇದಿದ ಯುವತಿ
ಕಟ್ಟಡ ಮಾಲೀಕರ ಬಂಧನಕ್ಕೆ ಆದೇಶ
ಕಾರ್ಮಿಕರು ಕೆಲಸ ಮಾಡುವ ಸ್ಥಳದ ಮಾಹಿತಿ ನೀಡದೇ ಅನಧಿಕೃತವಾಗಿ ಕಟ್ಟದಲ್ಲಿ ಇರಿಸಲಾಗುತ್ತದೆ. ಈ ಬಗ್ಗೆ ಸ್ಥಳೀಯ ಪೊಲೀಸರು ಎಚ್ಚರಿಕೆ ನೀಡುತ್ತಿರುತ್ತಾರೆ. ಕಟ್ಟಡದ ಮಾಲೀಕರನ್ನು ಬಂಧಿಸುವಂತೆ ಕುವೈತ್‌ನ ಆಂತರಿಕ ಸಚಿವ ಶೇಖ್ ಫಹಾದ್ ಅಲ್-ಯೂಸುಫ್ ಅಲ್-ಸಬಾಹ್ ಆದೇಶ ನೀಡಿದ್ದಾರೆ ಎಂದು ಕುವೈತ್ ಟೈಮ್ಸ್ ವರದಿ ಮಾಡಿದೆ.
Deeply shocked by the news of the fire incident in Kuwait city. There are reportedly over 40 deaths and over 50 have been hospitalized. Our Ambassador has gone to the camp. We are awaiting further information.
Deepest condolences to the families of those who tragically lost…