
ಮುಂಬೈ(ಜೂ.23): ಮುಂಬೈ ದಾಳಿಯ ರೂವಾರಿ, ಲಷ್ಕರ್ ಕಮಾಂಡರ್ ಹಫೀಜ್ ಸಯೀದ್ ಮನೆ ಬಳಿ ಬಾಂಬ್ ಸ್ಫೋಟ ಸಂಭವಿಸಿದೆ. ಪಾಕಿಸ್ತಾನದ ಲಾಹೋರ್ನಲ್ಲಿ ನಡೆದ ಸ್ಫೋಟದಲ್ಲಿ ಇಬ್ಬರು ಮೃತಪಟ್ಟಿದ್ದು, 16ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.
ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಆಗಿದ್ದ ಜಮಾತ್-ಉದ್-ದಾವಾ ಮುಖ್ಯಸ್ಥ ಹಫೀಜ್ ಸಯೀದ್ ನಿವಾಸದಿಂದ 120 ಮೀಟರ್ ದೂರದಲ್ಲಿ, ಲಾಹೋರ್ನ ಜೋಹರ್ ಪಟ್ಟಣದ ಬಳಿ ಈ ಸ್ಪೋಟ ಸಂಭವಿಸಿದೆ. ಸ್ಫೋಟ ಸಂಭವಿಸಿದ ಬೆನ್ನಲ್ಲೇ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ಆರಂಭಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡರವನ್ನು ಲಾಹೋರ್ನ ಜಿನ್ನಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ವರದಿಗಳ ಅನ್ವಯ ಇದೊಂದು ಗ್ಯಾಸ್ ಪೈಪ್ ಲೈನ್ ಸ್ಫೋಟದಂತಿದೆ ಎಂದು ಹೆಳಲಾಗಿದೆ. ಬೆಳಗ್ಗೆ ಸುಮಾರು 11ಗಂಟೆಗೆ ಈ ಸ್ಫೋಟ ಸಂಭವಿಸಿರುವುದಾಗಿ ಹೇಳಿದೆ. ಮತ್ತೊಂದು ವರದಿಯ ಪ್ರಕಾರ, ಈ ಸ್ಫೋಟ ಲಾಹೋರ್ ನ ಜೋಹಾರ್ ನಗರದ ಆಸ್ಪತ್ರೆ ಸಮೀಪ ಸಂಭವಿಸಿದೆ ಎಂದು ಹೇಳಲಾಗಿದೆ. ಹೀಗಿದ್ದರೂ ಈ ಸ್ಫೋಟ ಸಂಭವಿಸಲು ನಿಖರವಾದ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ.
ಇನ್ನು ಸ್ಫೋಟದಿಂದ ಇಲ್ಲಿನ ಮನೆಗಳ ಕಿಟಕಿ ಗಾಜುಗಳು ಪುಡಿ, ಪುಡಿಯಾಗಿರುವುದಾಗಿ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಸ್ಫೋಟದ ಸದ್ದು ಭೀಕರವಾಗಿದ್ದು, ಇದು ಹಲವು ಕಿಲೋ ಮೀಟರ್‌ವರೆಗೆ ಕೇಳಿಸಿರುವುದಾಗಿ ವರದಿ ವಿವರಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ