
ನ್ಯೂಯಾರ್ಕ್(ಮೇ.10) ಅತ್ಯಾಚಾರ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಹಲವು ಕಾನೂನುಗಳನ್ನು ರಚಿಸಿದ್ದರೂ ಪ್ರಮಾಣ ಕಡಿಮೆಯಾಗುತ್ತಿಲ್ಲ. ಇದೀಗ ಮಹಿಳೆ ಮೇಲೆ ಹಿಂಬದಿಯಿಂದ ಬೆಲ್ಟ್ ಮೂಲಕ ದಾಳಿ ನಡೆಸಿ, ಆಕೆಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ ಭೀಕರ ಘಟನೆ ಸಿಸಿಟಿವಿಯಲ್ಲಿ ದಾಖಲಾಗಿದೆ. ಈ ಘಟನೆ ಹೆಚ್ಚು ನ್ಯೂಯಾರ್ಕ್ ನಗರದಲ್ಲಿ ನಡೆದಿದೆ. ಅಪರಿಚಿತನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದು, ಯಾವುದೇ ಮಾಹಿತಿ ಲಭ್ಯವಾಗಿಲ್ಲ.
45 ವರ್ಷದ ಮಹಿಳೆ, ಕಾರು ಪಾರ್ಕಿಂಗ್ ಪಕ್ಕದಲ್ಲಿರುವು ಫುಟ್‌ಪಾಥ್ ಮೇಲೆ ನಡೆದುಕೊಂಡು ಹೋಗುತ್ತಿರುವಾಗ ಈ ಘಟನೆ ನಡೆದಿದೆ. ಹಿಂಬದಿಯಿಂದ ಆಗಮಿಸಿದ ಅಪರಿಚಿತ, ಮುಖಕ್ಕೆ ಮಾಸ್ಕ್ ಹಾಕಿಕೊಂಡು ದಾಳಿ ಮಾಡಿದ್ದಾರೆ. ಬೆಲ್ಟ್‌ನ್ನು ಕುಣಿಕೆ ರೀತಿ ಮಾಡಿ, ಮಹಿಳೆ ಮೇಲೆ ದಾಳಿ ಮಾಡಿದ್ದಾರೆ. ಮಹಿಳೆ ಕುತ್ತಿತಿಗೆ ಬೆಲ್ಟ್ ಹಾಕಿ ಹಿಡಿದೆಳೆದಿದ್ದಾನೆ. ದಾಳಿಯ ಪರಿಣಾಮ ಮಹಿಳೆ ಏಕಾಏಕಿ ನೆಲಕ್ಕುರುಳಿದ್ದಾಳೆ.
ಸಂಸದ ಪ್ರಜ್ವಲ್‌ರಂಥವರ ಬಗ್ಗೆ ಸಹಿಷ್ಣುತೆ ಇರಬಾರದು, ಕಠಿಣ ಕ್ರಮ ಕೈಗೊಳ್ಳಬೇಕು : ಮೋದಿ
ಬಿಡಿಸಿಕೊಳ್ಳುವ ಪ್ರಯತ್ನ ಮಾಡಿದರೂ ಸಾಧ್ಯವಾಗಿಲ್ಲ. ಅಷ್ಟರೊಳಗೆ ಬೆಲ್ಟ್ ಕುಣಿಕೆ ಬಿಗಿಯಾಗಿದೆ. ಮಹಿಳೆಯ ಪ್ರಜ್ಞೆ ತಪ್ಪಿದೆ. ಬೆಲ್ಟ್ ಮೂಲಕ ಮಹಿಳೆಯನ್ನು ಎಳೆದೊಯ್ಯಲಾಗಿದೆ. ಎರಡು ಕಾರು ಪಾರ್ಕಿಂಗ್ ಮಾಡಿರುವ ನಡುವಿನ ಸ್ಥಳಕ್ಕೆ ಮಹಿಳೆಯನ್ನು ಎಳೆದೊಯ್ದು, ಆಕೆಯಲ್ಲಿದ್ದ ವಸ್ತುಗಳು, ಹಣವನ್ನು ಎಗರಿಸಲಾಗಿದೆ. ಬಳಿಕ ಆಕೆಯ ಮೇಲೆ ಅತ್ಯಾಚಾರ ಎಸಗಲಾಗಿದೆ.
ಪ್ರಜ್ಞಾಹೀನ ಸ್ಥಿತಿಯಲ್ಲಿ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಸ್ಥಳದಿಂದ ಪರಾರಿಯಾಗಿದ್ದಾನೆ. ಇತ್ತ ಮಹಿಳೆಯನ್ನು ಕಾರು ಪಾರ್ಕಿಂಗ್‌ನಲ್ಲಿ ಬಿದ್ದಿರುವುದನ್ನುಗಮನಿಸಿದ ಸ್ಥಳೀಯರು ನೆರವಿಗೆ ಧಾವಿಸಿದ್ದಾರೆ. ಪರಿಸ್ಥಿತಿ ಅರಿತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಮಹಿಳೆಯನ್ನು ಆಸ್ಪತ್ರೆ ದಾಖಲಿಸಿದ್ದಾರೆ. ಸದ್ಯ ಮಹಿಳೆ ಆರೋಗ್ಯ ಸ್ಥಿರವಾಗಿದೆ. ಆದರೆ ಆರೋಪಿ ಪರಾರಿಯಾಗಿದ್ದಾನೆ.
ಮಹಿಳೆ ಕುಟುಂಬಸ್ಥರು ದೂರು ದಾಖಲಿಸಿದ್ದಾರೆ. ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ. ಇತ್ತ ಮಹಿಳೆ ತೀವ್ರ ಆಘಾತಕ್ಕೊಳಾಗಿದ್ದು, ಚೇಕರಿಕೆಗೆ ಸುದೀರ್ಘ ದಿನಗಳ ಅವಶ್ಯಕತೆ ಇದೆ ಎಂದು ವೈದ್ಯರು ಹೇಳಿದ್ದಾರೆ. ನ್ಯೂಯಾರ್ಕ್‌ನಲ್ಲಿ ಇದೇ ರೀತಿ ಕೆಲ ಘಟನೆಗಳು ನಡೆದಿರುವ ಸಾಧ್ಯತೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ವ್ಯವಸ್ಥಿತ ಗ್ಯಾಂಗ್ ಇದರ ಹಿಂದೆ ಇರುವ ಅನುಮಾನವನ್ನು ವ್ಯಕ್ತಪಡಿಸಿದ್ದಾರೆ.
ರೇಪ್ ಮಾಡಿಸಿಕೊಳ್ಳಲು ಹುಡುಗಿಯರ ಕ್ಯೂ: ಫಿಲ್ಮ್ ಇಂಡಸ್ಟ್ರಿಯ ಭಯಾನಕ ರೂಪ ಎಕ್ಸ್ಪೋಸ್ ಮಾಡಿದ ರಾಖಿ!
ನ್ಯೂಯಾರ್ಕ್ ಪೊಲೀಸರು ಹಲವು ಸಿಸಿಟಿವಿ ಪರಿಶೀಲಿಸಿದ್ದಾರೆ. ಆದರೆ ಖತರ್ನಾಕ್ ಆರೋಪಿ ವೇಷ ಬದಲಿಸಿ ಎಸ್ಕೇಪ್ ಆಗಿದ್ದಾನೆ. ಇದೀಗ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ನ್ಯೂಯಾರ್ಕ್ ನಗರದಲ್ಲಿ ಇದೀಗ ಆತಂಕ ಹೆಚ್ಚಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ