
ಚೆನ್ನೈ: ಚೆನ್ನೈನಲ್ಲಿರುವ ಅಮೆರಿಕ ಕಾನ್ಸುಲೇಟ್ ಜನರಲ್‌ನ ಕಾನ್ಸಲ್ ಆಗಿ ಮರಿಯಾನಾ ಎಲ್. ನೈಶುಲರ್ ಅವರು ಸೋಮವಾರ ಅಧಿಕಾರ ವಹಿಸಿಕೊಂಡರು.
ಅಧಿಕಾರ ಸ್ವೀಕರಿಸಿದ ನಂತರ ಮಾತನಾಡಿದ ಕಾನ್ಸಲ್ ಜನರಲ್ ನೈಶುಲರ್ ಅವರು, ‘ನಮ್ಮ ದ್ವಿಪಕ್ಷೀಯ ಸಂಬಂಧದ ನಿರ್ಣಾಯಕ ಘಟ್ಟದಲ್ಲಿ ದಕ್ಷಿಣ ಭಾರತದಲ್ಲಿ ಅಮೆರಿಕವನ್ನು ಪ್ರತಿನಿಧಿಸುತ್ತಿರುವುದು ನನಗೆ ಸಂದ ಗೌರವ ಎಂದೇ ಭಾವಿಸುತ್ತೇನೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಕಾರ್ಯದರ್ಶಿ ರೂಬಿಯೋ ಮತ್ತು ರಾಯಭಾರಿ ಸರ್ಗಿಯೋ ಗೋರ್ ಅವರ ನೇತೃತ್ವದಲ್ಲಿ, ಅಮೆರಿಕನ್ನರು ಮತ್ತು ಭಾರತೀಯರಿಬ್ಬರಿಗೂ ಪಾಲುದಾರಿಕೆಯನ್ನು ಬಲಪಡಿಸುವತ್ತ ನಾವು ಗಮನ ಕೇಂದ್ರೀಕರಿಸಿದ್ದೇವೆ. ವ್ಯಾಪಾರ ಸಂಬಂಧಗಳನ್ನು ವಿಸ್ತರಿಸಲು, ಅಮೆರಿಕನ್ ಉದ್ಯಮಗಳನ್ನು ಬೆಂಬಲಿಸಲು ಮತ್ತು ನಮ್ಮ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸಲು ಎದುರು ನೋಡುತ್ತಿದ್ದೇನೆ‘ ಎಂದು ಹೇಳಿದರು.
ಚೆನ್ನೈಗೆ ಬರುವ ಮೊದಲು, ಕಾನ್ಸಲ್ ಜನರಲ್ ನೈಶುಲರ್ ತಾಷ್ಕೆಂಟ್‌ನಲ್ಲಿರುವ ಯುಎಸ್ ರಾಯಭಾರ ಕಚೇರಿಯಲ್ಲಿ ರಾಜಕೀಯ ಮತ್ತು ಆರ್ಥಿಕ ವ್ಯವಹಾರಗಳ ಕೌನ್ಸಿಲರ್ ಆಗಿ ಸೇವೆ ಸಲ್ಲಿಸಿದ್ದರು. ಅವರು ಈ ಹಿಂದೆ ಜೆರುಸಲೇಂ ಮತ್ತು ಆಮ್ಮನ್ ರಾಯಭಾರ ಕಚೇರಿಗಳಲ್ಲಿ ಉಪ ಆರ್ಥಿಕ ಕೌನ್ಸಿಲರ್ ಆಗಿ, ಹಾಗೆಯೇ ವಾಷಿಂಗ್ಟನ್ , ದುಬೈ, ಸ್ಕೋಪೆ ಯೆ ಮತ್ತು ಮಾಸ್ಕೋಗಳಲ್ಲಿಯೂ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದಾರೆ.
ಮರಿಯಾನಾ ಅವರು ಅವರು ತಮಿಳುನಾಡು, ಕರ್ನಾಟಕ, ಕೇರಳ ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಾದ ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ಅಮೆರಿಕದ ಹಿತಾಸಕ್ತಿ ಮತ್ತು ಅಮೆರಿಕ-ಭಾರತ ಸಂಬಂಧಗಳನ್ನು ಮುನ್ನಡೆಸಲಿದ್ದಾರೆ. ಮರಿಯಾನಾ ಪತಿ ಪೀಟರ್ ಕೂಡ ವಿದೇಶಾಂಗ ಸೇವೆ ಅಧಿಕಾರಿಯಾಗಿದ್ದು ವಾರ್ಸಾದ ಅಮೆರಿಕ ರಾಯಭಾರಿ ಕಚೇರಿಯಲ್ಲಿ ರಾಜಕೀಯ ಸಲಹೆಗಾರರಾಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ