
ಪೋರ್ಟ್ ಲೂಯಿಸ್[ಜ.15]: ಇಂದು ಸಡಗರದ ಸಂಕ್ರಾಂತಿ ಹಬ್ಬ. ಇದು ಈ ವರ್ಷದ ಮೊದಲ ಹಬ್ಬವಾಗಿದ್ದು, ದೇಶದೆಲ್ಲೆಡೆ ಇದನ್ನು ಬಹಳಷ್ಟು ಸಂಭ್ರಮದಿಂದ ಆಚರಿಸಲಾಗುತ್ತಿದೆ ಹೀಗಿರುವಾಗ ಭಾರತೀಯರ ಈ ಹಬ್ಬಕ್ಕೆ ಮಾರಿಷಸ್ ಪ್ರಧಾನಿ ಪ್ರವೀಂದ್ ಜುಗ್ನಾಥ್ ಕೂಡಾ ವಿಭಿನ್ನವಾಗಿ ಶುಭ ಕೋರಿದ್ದಾರೆ.
ಸಂಕ್ರಾಂತಿ ಹಬ್ಬದ ವಿಶೇಷತೆ ಏನು? ಆಚರಣೆ ಹೇಗೆ? ಇಲ್ಲಿದೆ ಎಲ್ಲಾ ಮಾಹಿತಿ
ಹೌದು ಭಾರತದಲ್ಲಿ ಸಂಕ್ರಾಂತಿಗೆ ಬಹಳ ವಿಶೇಷ ಸ್ಥಾನವಿದೆ. ಭಾರತೀಯರೆಲ್ಲರೂ ವರ್ಷದ ಮೊದಲ ಹಬ್ಬವನ್ನು ಅದ್ಧೂರಿಯಾಗಿ ಬರ ಮಾಡಿಕೊಳ್ಳುತ್ತಾರೆ. ಹೀಗಿರುವಾಗ ಮಾರಿಷಸ್ ಪ್ರಧಾನಿ ಪ್ರವೀಂದ್ ಜುಗ್ನಾಥ್ ಟ್ವೀಟ್ ಮೂಲಕ ಎಲ್ಲರಿಗೂ ಹಬ್ಬಕ್ಕೆ ಶುಭ ಕೋರಿದ್ದಾರೆ.
ತಮ್ಮ ಪತ್ನಿ ಜೊತೆ ಪೂಜೆ ಮಾಡುವ ಫೋಟೋ ಶೇರ್ ಮಾಡಿರುವ ಮಾರಿಷಸ್ ಪ್ರಧಾನಿ ಪ್ರವೀಂದ್ ಜುಗ್ನಾಥ್ 'ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯಗಳು' ಎಂದು ಬರೆದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ