
ಲಾಹೋರ್: 26/11 ಮುಂಬೈ ದಾಳಿಯ ಪ್ರಮುಖ ಸಂಚುಕೋರರಲ್ಲಿ ಒಬ್ಬನಾದ ಪಾಕಿಸ್ತಾನಿ ಉಗ್ರ ಸಾಜಿದ್ ಮೀರ್‌ಗೆ ಪಾಕಿಸ್ತಾನದ ಡೇರಾ ಘಾಜಿ ಖಾನ್ ನಗರದ ಜೈಲಲ್ಲೇ ವಿಷವುಣಿಸಲಾಗಿದೆ (poisoned). ಹೀಗಾಗಿ ಆತನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ದೃಢೀಕರಿಸದ ವರದಿಗಳು ಹೇಳಿವೆ.
ಕೆಲವು ತಿಂಗಳ ಹಿಂದೆ ಮೀರ್‌ನನ್ನು ಲಾಹೋರ್ (Lahore jail)ಸೆಂಟ್ರಲ್ ಜೈಲಿನಿಂದ ಡೇರಾ ಘಾಜಿ ಖಾನ್‌ನ ಸೆಂಟ್ರಲ್ (Dera Ghaji khan jail) ಸ್ಥಳಾಂತರಿಸಲಾಗಿತ್ತು. ಅಲ್ಲಿಯೇ ಆತನಿಗೆ ವಿಷವುಣಿಸಲಾಗಿದೆ ಎನ್ನಲಾಗಿದೆ. ಪಾಕಿಸ್ತಾನಿ ಅಧಿಕಾರಿಗಳು ಈ ಹಿಂದೆ ಮೀರ್ ಸತ್ತಿದ್ದಾನೆ ಎಂದು ಹೇಳಿದ್ದರು. ಆದರೆ ಪಾಶ್ಚಿಮಾತ್ಯ ದೇಶಗಳು ಈ ಹೇಳಿಕೆ ಪ್ರಶ್ನಿಸಿ, ಆತನ ಸಾವಿಗೆ ಸಾಕ್ಷ್ಯ ನೀಡುವಂತೆ ಆಗ್ರಹಿಸಿದ್ದವು.
ಸಾಜಿದ್ ಮೀರ್ ಯಾರು?:
ಸುಮಾರು 40ರ ಹರೆಯದ ಸಾಜಿದ್ ಮೀರ್ ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾ (Lashkar-e-Taiba) ಉಗ್ರ ಸಂಘಟನೆಯ ಹಿರಿಯ ಸದಸ್ಯನಾಗಿದ್ದು, 2008ರ 26/11ಮುಂಬೈ ದಾಳಿಗೆ ಕುಮ್ಮಕ್ಕು ನೀಡಿದ್ದಕ್ಕಾಗಿ ಭಾರತಕ್ಕೆ ಬೇಕಾಗಿದ್ದಾನೆ. ಈ ಹಿಂದೆ ಅಮೆರಿಕ ಕೂಡ ಆತನ ತಲೆಗೆ 5.5 ದಶಲಕ್ಷ ಡಾಲರ್ ಬಹುಮಾನ ಘೋಷಿಸಿತ್ತು.
2022ರ ಜೂನ್‌ನಲ್ಲಿ, ಪಾಕಿಸ್ತಾನದ ಉಗ್ರ ನಿಗ್ರಹ ನ್ಯಾಯಾಲಯವು ಭಯೋತ್ಪಾದನೆಗೆ ಸಂಬಂಧಿಸಿದ ಹಣಕಾಸಿನ ಪ್ರಕರಣದಲ್ಲಿ ಮೀರ್‌ಗೆ 15 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಅಂದಿನಿಂದ ಆತ ಜೈಲಿನಲ್ಲಿದ್ದಾನೆ. ಈ ವರ್ಷದ ಜೂನ್‌ನಲ್ಲಿ, ವಿಶ್ವಸಂಸ್ಥೆಯು ಮೀರ್‌ನನ್ನು ‘ಜಾಗತಿಕ ಭಯೋತ್ಪಾದಕ’ ಎಂದು ಘೋಷಿಸಲು ಮುಂದಾದಾಗ ಅದಕ್ಕೆ ಚೀನಾ ತಡೆ ಒಡ್ಡಿತ್ತು.
ಪಾಕ್‌ನಲ್ಲಿ ಲಷ್ಕರ್ ಉಗ್ರ ನೇಮಕಗಾರನ ನಿಗೂಢ ಹತ್ಯೆ: 1.5 ವರ್ಷದಲ್ಲಿ 19ನೇ ಉಗ್ರಗಾಮಿ ಸಾವು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ