
ಕಾಠಂಡು (ಅ.6): ನೇಪಾಳದಲ್ಲಿ ಕಳೆದೆರಡು ದಿನಗಳಿಂದ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಲವೆಡೆ ಭೀಕರ ಪ್ರವಾಹ ಮತ್ತು ಭೂಕುಸಿತ ಸಂಭವಿಸಿದೆ. ಈ ವೇಳೆ ಕನಿಷ್ಠ 52 ಮಂದಿ ಸಾವನ್ನಪ್ಪಿದ್ದು, 5 ಮಂದಿ ನಾಪತ್ತೆಯಾಗಿದ್ದಾರೆ.
ಶನಿವಾರ ರಾತ್ರಿ ಸುರಿದ ಭಾರೀ ಮಳೆಗೆ ಭೂಕುಸಿತವುಂಟಾಗಿ ಕೋಶಿ ಪ್ರಾಂತ್ಯದಇಲಾಮ್ ಜಿಲ್ಲೆಯ ವಿವಿಧ ಸ್ಥಳಗಳಲ್ಲಿ 37ಜನರುಸಾವನ್ನಪ್ಪಿದ್ದಾರೆ. ಭಾನುವಾರ ಬೆಳಿಗ್ಗೆ ರೌತಹತ್ ಜಿಲ್ಲೆ ಯಲ್ಲಿ ಸಿಡಿಲು ಬಡಿದು ಮೂವರು ಮರಣಿಸಿದ್ದಾರೆ. ಮಳೆ ಅವಾಂತರ ದಿಂದ ಕನಿಷ್ಠ 10 ಮಂದಿ ಗಾಯಗೊಂಡಿದ್ದಾರೆ. ರಸುವಾ ಜಿಲ್ಲೆಯಲ್ಲಿ ಪ್ರವಾಹಕ್ಕೆ ಸಿಲುಕಿ ನಾಲ್ವರು ನಾಪತ್ತೆಯಾಗಿದ್ದಾರೆ. ಪಂಚ ತಾರ್‌ಜಿಲ್ಲೆಯಲ್ಲಿ ಭೂಕುಸಿತದಲ್ಲಿ ವ್ಯಕ್ತಿಯೊಬ್ಬ ಸಮಾಧಿಯಾಗಿದ್ದಾರೆ ಎಂದು ರಾಷ್ಟ್ರೀಯ ವಿಪತ್ತು ಅಪಾಯ ಕಡಿತ ಮತ್ತು ನಿರ್ವಹಣಾ ಪ್ರಾಧಿಕಾರ (ಎನ್‌ಡಿಆರ್‌ಆರ್‌ಎಂಎ) ತಿಳಿಸಿದೆ.
ವಾಹನ ಓಡಾಟ, ವಿಮಾನಗಳಿಗೆ ನಿರ್ಬಂಧ:ಮುಂದಿನ 3 ದಿನಗಳವರೆಗೆ ಭೂಕುಸಿತದ ಸಾಧ್ಯತೆಯಿರುವ ಕಾರಣ ಕಾಡ್ಕೊಂಡು ಪ್ರದೇಶದಲ್ಲಿ ವಾಹನಗಳ ಪ್ರವೇಶ ಮತ್ತು ನಿರ್ಗಮನವನ್ನು ನಿರ್ಬಂಧಿಸಲಾಗಿದೆ. ಹವಾಮಾನ ವೈಪರೀತ್ಯ ದಿಂದಾಗಿ ದೇಶೀಯ ವಿಮಾನಗಳನ್ನು ಮುಂದಿನ ಸೂಚನೆಯವರೆಗೂ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನೇಪಾಳ ನೆರೆ ಸಂತ್ರಸ್ತರಿಗೆ ನೆರವು ನೀಡಲು ಭಾರತ ಸಿದ್ದ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ