Nepal Gen Z Protest: ಫೇಸ್‌ಬುಕ್,ವ್ಯಾಟ್ಸಾಪ್ ಸೇರಿ ಸೋಶಿಯಲ್ ಮೀಡಿಯಾ ಬ್ಯಾನ್, ನೇಪಾಳದಲ್ಲಿ ಭಾರಿ ಪ್ರತಿಭಟನೆ

Published : Sep 08, 2025, 03:00 PM IST
Nepal Gen Z Revolution - Protests Over Social Media Ban

ಸಾರಾಂಶ

ಫೇಸ್‌ಬುಕ್, ಇನ್‌ಸ್ಟಾಗ್ರಾಂ ಸೇರಿದಂತೆ ಸೋಶಿಯಲ್ ಮೀಡಿಯಾ ಸಂಪೂರ್ಣ ಬ್ಯಾನ್ ಮಾಡಿರುವ ನೇಪಾಳ ಸರ್ಕಾರದ ನಿರ್ಧಾರ ವಿರುದ್ಧ ವಿದ್ಯಾರ್ಥಿಗಳು ಸೇರಿದಂತೆ ಝೆನ್‌ಜಿ ಸಮೂಹ ಭಾರಿ ಪ್ರತಿಭಟನೆ ನಡೆಸುತ್ತಿದೆ.

ಕಾಠ್ಮಂಡು (ಸೆ.08) ನೇಪಾಳದ ಬೀದಿ ಬೀದಿಯಲ್ಲಿ ವಿದ್ಯಾರ್ಥಿಗಳು, ಯುವ ಸಮೂಹ ಸೇರಿದಂತೆ ಭಾರಿ ಜನಸ್ತೋಮ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದೆ. ಇದಕ್ಕೆ ಮುಖ್ಯ ಕಾರಣ ನೇಪಾಳದಲ್ಲಿ ಎಲ್ಲಾ ಸೋಶಿಯಲ್ ಮೀಡಿಯಾ ಬ್ಯಾನ್ ನಿರ್ಧಾರ. ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ಸರ್ಕಾರ ಕಳೆದ ವಾರ ಫೇಸ್‌ಬುಕ್, ಇನ್‌ಸ್ಟಾಗ್ರಾಂ, ಎಕ್ಸ್ ಸೇರಿದಂತೆ ಸೋಶಿಯಲ್ ಮೀಡಿಯಾಗಳನ್ನು ಬ್ಯಾನ್ ಮಾಡಲಾಗಿದೆ. ಈ ಬ್ಯಾನ್ ತೆರವುಗೊಳಿಸಬೇಕು ಎಂದು ಪ್ರತಿಭಟನೆ ತೀವ್ರಗೊಂಡಿದೆ. ಲಾಠಿ ಚಾರ್ಜ್, ಆಶ್ರುವಾಯು ಸಿಡಿಸಿ ಪ್ರತಿಭಟನಕಾರರನ್ನು ನಿಯಂತ್ರಿಸುವ ಪ್ರಯತ್ನ ಮಾಡಲಾಗಿದೆ. ಈ ಘರ್ಷಣೆಯಲ್ಲಿ ಓರ್ವ ಮೃತಪಟ್ಟಿದ್ದರೆ, 80ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಆದರೆ ಕೆಪಿ ಒಲಿ ಶರ್ಮ ತಮ್ಮ ನಿರ್ಧಾರ ಸಮರ್ಥಿಸಿದ್ದಾರೆ.

ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ಮಾಡಿದ್ದೇಕೆ?

ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ಮಾಡಿ ಒಂದು ವಾರ ಕಳೆದಿದೆ. ಕಳೆದ ವಾರ ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ನಿರ್ಧಾರ ಜಾರಿಗೆ ಬಂದಿದೆ. ನೇಪಾಳ ಸುಪ್ರೀಂ ಕೋರ್ಟ್ ಆದೇಶದಂತೆ, ಕೆಪಿ ಒಲಿ ಶರ್ಮಾ ಸೋಶಿಯಲ್ ಮೀಡಿಯಾ ಬ್ಯಾನ್ ಮಾಡಿದ್ದಾರೆ. ಸೋಶಿಯಲ್ ಮೀಡಿಯಾ ಸಂಸ್ಥೆಗಳು ನೇಪಾಳ ಕಮ್ಯೂನಿಕೇಶನ್ ಹಾಗೂ ಐಟಿ ನಿಯಮದ ಪ್ರಕಾರ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯ. ಇದೇ ವೇಳೆ ದೂರು ಹಾಗೂ ಸಮಸ್ಯೆಗೆ ಪರಿಹರಿಸಲು ಗ್ರಿವೆನ್ಸ್ ಅಧಿಕಾರಿ ನೇಮಕ ಸೇರಿದಂತೆ ಹಲವು ಕಟ್ಟು ನಿಟ್ಟಿನ ಕ್ರಮ ಸರ್ಕಾರ ಕೈಗೊಂಡಿದೆ. ನೋಂದಣಿ ಮಾಡಲು ಒಂದು ವಾರದ ಗಡುವು ನೀಡಲಾಗಿತ್ತು. ಆದರೆ ಮೆಟಾ, ಲಿಂಕ್ಡ್‌ಇನ್, ಗೂಗಲ್ ಸೇರಿದಂತೆ ಯಾವುದೇ ಸೋಶಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್ ನೋಂದಣ ಮಾಡಲು ಹಿಂದೇಟು ಹಾಕಿತ್ತು. ಹೀಗಾಗಿ ನೇಪಾಳ ಸರ್ಕಾರ ಗಡುವು ಮುಗಿಯುತ್ತಿದ್ದಂತೆ ಸೋಶಿಯಲ್ ಮೀಡಿಯಾ ಬ್ಯಾನ್ ಮಾಡಿದೆ.

ಭಾರತ ಮಾತ್ರವಲ್ಲ ಮೊನಾಲಿಸಾಗೆ ಮನಸೋತ ನೇಪಾಳ, ಭರ್ಜರಿ ಸ್ಟೆಪ್ಸ್ ಹಾಕಿದ ವೈರಲ್ ಬೆಡಗಿ

ಆಗಸ್ಟ್ 28 ರಿಂದ 7 ದಿನಗಳ ಸಮಯ ನೀಡಲಾಗಿತ್ತು. ಕಳೆದ ಬುಧವಾರ ಡೆಡ್‌ಲೈನ್ ಮುಗಿದಿತ್ತು. ಅವಧಿ ಮುಗಿದ ಬಳಿಕವೂ ಯಾವುದೇ ಸಂಸ್ಥೆಗಳು ನೋಂದಣಿ ಮಾಡಿಕೊಂಡಿಲ್ಲ. ಹೀಗಾಗಿ ಸೋಶಿಯಲ್ ಮೀಡಿಯಾ ಸಂಸ್ಥೆಗಳ ಮೇಲೆ ನೇಪಾಳ ಸರ್ಕಾರ ನಿರ್ಬಂಧ ಹೇರಿದೆ. ಮೆಟಾ (ಫೇಸ್‌ಬುಕ್, ಇನ್‌ಸ್ಟಾಗ್ರಾಂ, ವ್ಯಾಟ್ಸ್ಆ್ಯಪ್) ಆಲ್ಫಾಬೆಟ್ (ಯೂಟ್ಯೂಬ್ ) ಎಕ್ಸ್ (ಟ್ವಿಟರ್), ರೆಡ್ಡಿಟ್, ಲಿಂಕ್ಡ್‌ಇನ್ ಸೇರಿದಂತೆ ಸೋಶಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್ ಬ್ಯಾನ್ ಮಾಡಲಾಗಿದೆ.

ಪ್ರತಿಭಟನೆ ಬೆನ್ನಲ್ಲೇ ಖಡಕ್ ವಾರ್ನಿಂಗ್ ನೀಡಿದ ಪ್ರಧಾನಿ

ನೇಪಾಳ ರಾಜಧಾನಿ ಸೇರಿದಂತೆ ಎಲ್ಲೆಡೆ ಭಾರಿ ಪ್ರತಿಭಟನೆಗಳು ನಡೆಯುತ್ತಿದೆ. ಇದರ ಬೆನ್ನಲ್ಲೇ ಕೆಪಿ ಒಲಿ ಶರ್ಮಾ ಪ್ರತಿಕ್ರಿಯೆ ನೀಡಿದ್ದಾರೆ. ದೇಶದ ನಿಯಮ ಪಾಲನೆ ಅತ್ಯಗತ್ಯ. ಸ್ವತಂತ್ರ ದೇಶದಲ್ಲಿ ಎಲ್ಲರೂ ನಿಯಮ ಪಾಲನೆ ಮಾಡಬೇಕು. ನಿಮಯಕ್ಕಿಂತ ಮಿಗಿಲು ಯಾರೂ ಇಲ್ಲ ಎಂದಿದ್ದಾರೆ. ದೇಶದ ಸಾರ್ವಭೌಮತ್ವ, ಐಕ್ಯತೆ, ಸುರಕ್ಷತೆಗೆ ಧಕ್ಕೆಯಾಗಲು ಬಿಡುವುದಿಲ್ಲ. ಸೋಶಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್ ಸಂಸ್ಥೆಗಳು ನೇಪಾಳ ನಿಯಮ ಪಾಲನೆ ಅನಿವಾರ್ಯ ಎಂದು ಕೆಪಿ ಶರ್ಮಾ ಹೇಳಿದ್ದಾರೆ. ಪ್ರತಿಭಟನೆಗೆ ಅವಕಾಶವಿದೆ. ಆದರೆ ಪ್ರತಿಭಟನೆ ಹೆಸರಿನಲ್ಲಿ ಗಲಭೆ, ಹಿಂಸಾಚಾರ, ಆಸ್ತಿ ಪಾಸ್ತಿ ನಾಶ ಮಾಡಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಎಸ್‌ಟಿಡಿ ಟೆಸ್ಟ್ ಮಾಡುವಂತೆ ಪದೇ ಪದೇ ಪೀಡಿಸುತ್ತಿದ್ದ ಗರ್ಲ್‌ಫ್ರೆಂಡ್‌ ಕತೆ ಮುಗಿಸಿದ ವಿದ್ಯಾರ್ಥಿ
ಟ್ರಂಪ್‌ ತೆರಿಗೆ ಶಾಕ್‌ಗೆ ಚೀನಾ ದಾಖಲೆಯ ತಿರುಗೇಟು