ನೇಪಾಳದಲ್ಲಿ ಪೊಲೀಸರಿಂದಲೇ ಹಿಂಸೆ, ರೇ*: ಆರೋಪ

Kannadaprabha News   | Kannada Prabha
Published : Sep 10, 2025, 04:13 AM IST
nepal violence latest photo

ಸಾರಾಂಶ

ಸಾಮಾಜಿಕ ಜಾಲತಾಣ ನಿಷೇಧದ ವಿರುದ್ಧ ಆರಂಭವಾದ ಪ್ರತಿಭಟನೆಯು ನೇಪಾಳದಲ್ಲಿ ಹಿಂಸಾಚಾರಕ್ಕೆ ತಿರುಗಿದ್ದು, ಅಲ್ಲಿನ ಪೊಲೀಸರೇ ಆಸ್ಪತ್ರೆ, ಶಾಲೆಗೆ ನುಗ್ಗಿ ಗುಂಡಿನ ಮಳೆಗರೆದಿದ್ದಾರೆ, ಮನೆಗಳಿಗೆ ನುಗ್ಗಿ ಅತ್ಯಾ*ರವೆಸಗಿದ್ದಾರೆ ಎಂದು ಅಲ್ಲಿನ ಸಾಮಾಜಿಕ ಜಾಲತಾಣದ ಪ್ರಭಾವಿಗಳು ಆರೋಪಿಸಿದ್ದಾರೆ.

ಕಾಠ್ಮಂಡು: ಸಾಮಾಜಿಕ ಜಾಲತಾಣ ನಿಷೇಧದ ವಿರುದ್ಧ ಆರಂಭವಾದ ಪ್ರತಿಭಟನೆಯು ನೇಪಾಳದಲ್ಲಿ ಹಿಂಸಾಚಾರಕ್ಕೆ ತಿರುಗಿದ್ದು, ಅಲ್ಲಿನ ಪೊಲೀಸರೇ ಆಸ್ಪತ್ರೆ, ಶಾಲೆಗೆ ನುಗ್ಗಿ ಗುಂಡಿನ ಮಳೆಗರೆದಿದ್ದಾರೆ, ಮನೆಗಳಿಗೆ ನುಗ್ಗಿ ಅತ್ಯಾ*ರವೆಸಗಿದ್ದಾರೆ ಎಂದು ಅಲ್ಲಿನ ಸಾಮಾಜಿಕ ಜಾಲತಾಣದ ಪ್ರಭಾವಿಗಳು ಆರೋಪಿಸಿದ್ದಾರೆ.

‘ಪ್ರತಿಭಟನೆಯು ಕೇವಲ ಸಾಮಾಜಿಕ ಜಾಲತಾಣದ ನಿಷೇಧದ ವಿರುದ್ಧವಾಗಿರಲಿಲ್ಲ. ಬದಲಿಗೆ ಭ್ರಷ್ಟ ಸರ್ಕಾರದ ವಿರುದ್ಧವಾಗಿತ್ತು. ಪ್ರತಿಭಟನೆ ನಡೆಸುತ್ತಿದ್ದ ‘ಝೆನ್‌ ಜೀ’ಗಳು ಯಾವುದೇ ಆಯುಧಗಳನ್ನು ಹೊಂದದೆ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದರು. ಆದರೆ ಪೊಲೀಸರು ರಬ್ಬರ್ ಗುಂಡುಗಳನ್ನು ಬಳಸುವ ಬದಲು, ನಿಜವಾದ ಬುಲೆಟ್‌ಗಳನ್ನು ಬಳಸಿ ದಾಳಿ ಮಾಡಿದರು.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರನ್ನು ನುಗ್ಗಿ ಹೊಡೆದು ಕೊಂದರು. ಶಾಲಾ ಮಕ್ಕಳ ಮೇಲೆ ದಾಳಿ ಮಾಡಿ ಕೊಂದರು. ಮನೆಗಳಿಗೆ ನುಗ್ಗಿ ಅತ್ಯಾ*ರವೆಸಗಿದರು. ವಿಶ್ವ ಸಂಸ್ಥೆಯ ಪೊಲೀಸ್‌ ನಿಯಮಗಳಿಗೆ ವಿರುದ್ಧವಾಗಿ ನಡೆದುಕೊಂಡರು.

ಜನರನ್ನು ರಕ್ಷಿಸಬೇಕಿದ್ದವರೇ ಕೊ* ಮಾಡುತ್ತಿದ್ದಾರೆ’ ಎಂದು ಇನ್‌ಫ್ಲುಯೆನ್ಸರ್‌ ರುತ್ ಕಾಡಾ ಆರೋಪಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ವಿಶ್ವದ ಅತಿ ಬಲಿಷ್ಠ ಕರೆನ್ಸಿಗಳಿವು: ಭಾರತದ ರುಪಾಯಿ ಮುಂದೆ ಘರ್ಜಿಸುವ ಡಾಲರ್ ಈ ದೇಶದ ಕರೆನ್ಸಿ ಮುಂದೆ ಡಮ್ಮಿ!
ರಾಜಮೌಳಿ-ಜೇಮ್ಸ್ ಕ್ಯಾಮರೂನ್ ಹೊಸ ಹೆಜ್ಜೆ, ನಟ ಮಹೇಶ್ ಬಾಬುಗೆ ಪ್ಯಾನ್ ವರ್ಲ್ಡ್ ಪಟ್ಟ..!