
ವೆಲ್ಲಿಂಗ್ಟನ್ (ಏ.09): ಭಾರತದಲ್ಲಿ ಕೋವಿಡ್ ಸೋಂಕು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ನ್ಯೂಜಿಲೆಂಡ್ ಇದೇ ಮೊದಲ ಬಾರಿಗೆ ತನ್ನ ದೇಶದವರೂ ಸೇರಿ ಭಾರತದಿಂದ ಪ್ರಯಾಣಿಸುವ ಎಲ್ಲಾ ಪ್ರಯಾಣಿಕರಿಗೆ ನಿಷೇಧ ಹೇರಿದೆ.
ಏ.11ರಿಂದ 2 ವಾರಗಳ ಕಾಲ ನಿಷೇಧ ಹೇರಿದೆ. ನಿಷೇಧ ಭಾನುವಾರದಿಂದ ಏ.28ರ ವರೆಗೆ ಜಾರಿಯಲ್ಲಿರಲಿದೆ.
ಬ್ರೇಕಿಂಗ್ : ಕೊರೊನಾಗೆ ಹೊಸ ಔಷಧ, ಮಹಾಮಾರಿಯ ಮರಣಶಾಸನ! ..
ನ್ಯೂಜಿಲೆಂಡ್‌ನಲ್ಲಿ ಗುರುವಾರ ಹೊಸದಾಗಿ 23 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಈ ಪೈಕಿ 17 ಮಂದಿ ಭಾರತೀಯರಾಗಿದ್ದಾರೆ.
ಭಾರತದಲ್ಲಿ ಈಗಾಗಲೇ ಪ್ರತಿದಿನವೂ ಸಾವಿರಾರು ಪ್ರಕರಣಗಳು ಹೆಚ್ಚಾಗುತ್ತಿವೆ. ಮೊದಲ ಅಲೆಗಿಂತ ಎರಡನೆ ಅಲೆ ಹೆಚ್ಚು ವ್ಯಾಪಕವಾಗಿ ಹರಡುತ್ತಿದ್ದು ಆತಂಕ ಮನೆ ಮಾಡಿದೆ. ಅಲ್ಲದೇ ಈಗಾಗಲೇ ಸಾಕಷ್ಟು ಕಠಿಣ ಕ್ರಮಗಳನ್ನು ಜಾರಿ ಮಾಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ