
ಇಸ್ಲಾಮಾಬಾದ್(ಡಿ.24): ಕಾಶ್ಮೀರ ವಿಷಯದಲ್ಲಿ ಎಂದಿಗೂ ರಾಜಿ ಆಗುವುದಿಲ್ಲ ಎಂದು ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಖಮರ್ ಜಾವೇದ್ ಬಜ್ವಾ ಹೇಳಿದ್ದಾರೆ.
ಪಾಕ್ ಆಕ್ರಮಿತ ಕಾಶ್ಮೀರದ ರಾಜಧಾನಿ ಮುಜಾಫರ್’ ಬಾದ್’ನ ಮಿಲಿಟರಿ ಆಸ್ಪತ್ರೆಗೆ ಭೇಟಿ ನೀಡಿದ್ದ ಬಜ್ವಾ, ಪಾಕ್ ಸೈನಿಕರನ್ನು ಉದ್ದೇಶಿಸಿ ಮಾತನಾಡಿದರು.
ಭಾರತ ಮತ್ತೆ ನಮ್ಮ ಮೇಲೆ ದಾಳಿ ಮಾಡಬಹುದು: ವಿಶ್ವಸಂಸ್ಥೆಗೆ ಪಾಕ್
ಪಾಕಿಸ್ತಾನ ಕಾಶ್ಮೀರ ವಿಷಯದಲ್ಲಿ ಎಂದಿಗೂ ರಾಜಿ ಆಗುವುದಿಲ್ಲ. ಶಾಂತಿಗಾಗಿನ ನಮ್ಮ ಸಹನೆಯನ್ನು ದೌರ್ಬಲ್ಯ ಎಂದು ತಪ್ಪಾಗಿ ಭಾವಿಸಬಾರದು ಎಂದು ಬಜ್ವಾ ಭಾರತಕ್ಕೆ ಎಚ್ಚರಿಕೆ ನೀಡಿದರು.
ಕಾಶ್ಮೀರ ಗಡಿಗೆ ಇಮ್ರಾನ್, ಪಾಕ್ ಯುದ್ಧ ಸಿದ್ಧತೆ?
ನಮ್ಮ ತಾಯ್ನಾಡಿನ ರಕ್ಷಣೆಗಾಗಿ ಯಾವುದೇ ಆಕ್ರಮಣವನ್ನು ತಡೆಯಲು ನಾವು ಸಮರ್ಥರಾಗಿದ್ದೇವೆ ಎಂದು ಇದೇ ವೇಳೆ ಬಜ್ವಾ ಸ್ಪಷ್ಟಪಡಿಸಿದರು.
ಗುಂಡು, ಉಸಿರಿರುವವರೆಗೂ ಕಾಶ್ಮೀರಕ್ಕಾಗಿ ಹೋರಾಟ: ಪಾಕ್ ಸೇನಾ ಮುಖ್ಯಸ್ಥ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ