
ಸ್ಟಾಕ್‌ಹೋಮ್ (ಅ.10): ಮಹಿಳಾ ಕಾರ್ಮಿಕರ ಕುರಿತು ಸಂಶೋಧನೆ ನಡೆಸಿದ ಅಮೆರಿಕದ ಹಾರ್ವರ್ಡ್ ವಿಶ್ವವಿದ್ಯಾಲಯದ ಪ್ರೊಫೆಸರ್ ಕ್ಲಾಡಿಯಾ ಗೋಲ್ಡಿನ್ ಎಂಬುವರಿಗೆ ಈ ಸಾಲಿನ ಪ್ರತಿಷ್ಠಿತ ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿ ಘೋಷಿಸಲಾಗಿದೆ.
ಜಾಗತಿಕ ಕಾರ್ಮಿಕ ಮಾರುಕಟ್ಟೆಯಲ್ಲಿ ಮಹಿಳೆಯರ ಪಾತ್ರದ ಕುರಿತು ಕ್ಲಾಡಿಯಾ (77) ಸಂಶೋಧನೆ ನಡೆಸಿದ್ದಾರೆ. ಇವರು ಜಗತ್ತಿನಲ್ಲೇ ಅರ್ಥಶಾಸ್ತ್ರದ ನೊಬೆಲ್ ಪಡೆಯುತ್ತಿರುವ 3ನೇ ಮಹಿಳೆಯಾಗಿದ್ದಾರೆ. ಸ್ಟಾಕ್‌ಹೋಮ್‌ನ ರಾಯಲ್ ಸ್ವೀಡಿಶ್ ಅಕಾಡೆಮಿ ಆಫ್ ಸೈನ್ಸಸ್ 8 ಕೋಟಿ ರು. ಮೊತ್ತದ ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿ ನೀಡುತ್ತದೆ.
31 ವರ್ಷ ಶಿಕ್ಷೆಗೊಳಗಾಗಿ ಜೈಲಲ್ಲಿರುವ ಇರಾನ್ ಮಹಿಳಾ ಹಕ್ಕುಗಳ ಹೋರಾಟಗಾರ್ತಿಗೆ ನೊಬೆಲ್
ಸಂಶೋಧನೆ ಏನು?: ‘ಕಾರ್ಮಿಕ ಮಾರುಕಟ್ಟೆಯಲ್ಲಿ ಮಹಿಳೆಯರ ಪಾತ್ರವನ್ನು ಅರ್ಥ ಮಾಡಿಕೊಳ್ಳುವುದು ಸಮಾಜಕ್ಕೆ ಬಹಳ ಮುಖ್ಯ. ಮಹಿಳೆಯರಿಗೆ ಈ ವಿಷಯದಲ್ಲಿ ಆಗುತ್ತಿರುವ ತಾರತಮ್ಯದ ಬಗ್ಗೆ ಕ್ಲಾಡಿಯಾ ಅತ್ಯಂತ ಮುಖ್ಯವಾದ ಸಂಶೋಧನೆ ಮಾಡಿದ್ದಾರೆ. ಅವರು ಎತ್ತಿರುವ ಸಮಸ್ಯೆಗಳನ್ನು ಬಗೆಹರಿಸುವ ಅಗತ್ಯವಿದೆ’ ಎಂದು ಪ್ರಶಸ್ತಿಯನ್ನು ಪ್ರಕಟಿಸುವಾಗ ರಾಯಲ್ ಸ್ವೀಡಿಶ್ ಅಕಾಡೆಮಿ ಹೇಳಿದೆ.
ಆಗ ಕೆಮಿಸ್ಟ್ರಿಯಲ್ಲಿ ಫೇಲ್ : ಈಗ ರಸಾಯನಶಾಸ್ತ್ರದಲ್ಲಿ ನೊಬೆಲ್: ವಿಜ್ಞಾನಿ ಬವೆಂಡಿ ರೋಚಕ ಕಹಾನಿ
ಕಾರ್ಮಿಕ ಮಾರುಕಟ್ಟೆಯಲ್ಲಿ ಮಹಿಳೆಯರು ಹಾಗೂ ಪುರುಷರ ನಡುವೆ ಇರುವ ಅಂತರ, ಹೇಗೆ ಅದು ಕಾಲಕ್ರಮೇಣ ಕಡಿಮೆಯಾಗಿದೆ, ಈಗಲೂ ಮಹಿಳೆಯರು ಹೇಗೆ ತಾರತಮ್ಯ ಎದುರಿಸುತ್ತಿದ್ದಾರೆ, ಈ ಸಮಸ್ಯೆ ಎಷ್ಟು ಸಂಕೀರ್ಣವಾದುದು, ಅದಕ್ಕೆ ಕಾರಣವೇನು ಎಂಬುದನ್ನು ಕ್ಲಾಡಿಯಾ ತಮ್ಮ ಸಂಶೋಧನೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ