Operation Sindoor: ಭಾರತ-ಪಾಕ್‌ ಉದ್ವಿಗ್ನತೆ ಉಲ್ಬಣದ ಬಗ್ಗೆ ರಷ್ಯಾ ಕಳವಳ

Published : May 08, 2025, 10:20 AM IST
Operation Sindoor: ಭಾರತ-ಪಾಕ್‌ ಉದ್ವಿಗ್ನತೆ ಉಲ್ಬಣದ ಬಗ್ಗೆ ರಷ್ಯಾ ಕಳವಳ

ಸಾರಾಂಶ

ಪಹಲ್ಗಾಂ ಉಗ್ರದಾಳಿಗೆ ಉತ್ತರವಾಗಿ ಭಾರತ ‘ಆಪರೇಷನ್‌ ಸಿಂದೂರ್‌’ ನಡೆಸಿ ಪಾಕಿಸ್ತಾನ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿದ್ದ ಉಗ್ರರ ನೆಲೆಗಳನ್ನು ಧ್ವಂಸ ಮಾಡಿದ ಬೆನ್ನಲ್ಲೇ ಉಭಯ ದೇಶಗಳ ಸೇನೆ ಮುಖಾಮುಖಿಯಾಗಿ ಉದ್ವಿಗ್ನತೆ ಉಲ್ಬಣಗೊಳ್ಳುತ್ತಿರುವ ಬಗ್ಗೆ ರಷ್ಯಾ ಕಳವಳ ವ್ಯಕ್ತಪಡಿಸಿದೆ.   

ಮಾಸ್ಕೋ (ಮೇ.08): ಪಹಲ್ಗಾಂ ಉಗ್ರದಾಳಿಗೆ ಉತ್ತರವಾಗಿ ಭಾರತ ‘ಆಪರೇಷನ್‌ ಸಿಂದೂರ್‌’ ನಡೆಸಿ ಪಾಕಿಸ್ತಾನ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿದ್ದ ಉಗ್ರರ ನೆಲೆಗಳನ್ನು ಧ್ವಂಸ ಮಾಡಿದ ಬೆನ್ನಲ್ಲೇ ಉಭಯ ದೇಶಗಳ ಸೇನೆ ಮುಖಾಮುಖಿಯಾಗಿ ಉದ್ವಿಗ್ನತೆ ಉಲ್ಬಣಗೊಳ್ಳುತ್ತಿರುವ ಬಗ್ಗೆ ರಷ್ಯಾ ಕಳವಳ ವ್ಯಕ್ತಪಡಿಸಿದೆ. ಈ ಬಗ್ಗೆ ಮಾತನಾಡಿರುವ ರಷ್ಯಾದ ವಿದೇಶಾಂಗ ಇಲಾಖೆಯ ವಕ್ತಾರೆ ಮಾರಿಯಾ ಜಖರೋವಾ, ‘ಪಹಲ್ಗಾಂ ದಾಳಿಯ ಬಳಿಕ ಭಾರತ ಮತ್ತು ಪಾಕಿಸ್ತಾನದ ಸೇನೆ ಮುಖಾಮುಖಿಯಾಗುತ್ತಿರುವ ಬಗ್ಗೆ ನಾವು ತೀವ್ರ ಕಳವಳಗೊಂಡಿದ್ದೇವೆ. 

ಪರಿಸ್ಥಿತಿ ಹದಗೆಡದಂತೆ ತಡೆಯಲು ಸಂಯಮದಿಂದ ವರ್ತಿಸುವಂತೆ ನಾವು ಎರಡೂ ದೇಶಗಳಿಗೆ ಕರೆ ನೀಡುತ್ತೇವೆ. ಭಾರತ ಮತ್ತು ಪಾಕಿಸ್ತಾನದ ನಡುವಿನ ಸಮಸ್ಯೆಗಳನ್ನು ಶಾಂತಿಯುತವಾಗಿ ರಾಜಕೀಯ ಮತ್ತು ರಾಜತಾಂತ್ರಿಕ ಮಾರ್ಗಗಳ ಮೂಲಕ, 1972ರ ಶಿಮ್ಲಾ ಒಪ್ಪಂದ ಮತ್ತು 1999ರ ಲಾಹೋರ್‌ ಒಪ್ಪಂದದನುಸಾರ ಬಗೆಹರಿಸಿಕೊಳ್ಳಬೇಕು ಎಂದು ಆಶಿಸುತ್ತೇವೆ‘ ಎಂದಿರುವುದಾಗಿ ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ. ಇದೇ ವೇಳೆ, ‘ರಷ್ಯಾ ಉಗ್ರಕೃತ್ಯಗಳನ್ನು ಬಲವಾಗಿ ಖಂಡಿಸುತ್ತದೆ. ಈ ದುಷ್ಟತನದ ವಿರುದ್ಧ ಇಡೀ ವಿಶ್ವ ಸಮುದಾಯದ ಯತ್ನವನ್ನು ಒಗ್ಗೂಡಿಸುವ ಅಗತ್ಯವನ್ನು ಒತ್ತಿಹೇಳುತ್ತದೆ’ ಎಂದೂ ಅವರು ಹೇಳಿದ್ದಾರೆ.

ಈ ಸಂಘರ್ಷ ಆದಷ್ಟು ಬೇಗ ಮುಗಿಯಲಿ: ಪಾಕಿಸ್ತಾನಿ ಉಗ್ರರ ಮೇಲೆ ಭಾರತ ನಡೆಸಿದ ದಾಳಿಗೆ ಪ್ರತಿಕ್ರಿಯಿಸಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ‘ಈ ಸಂಘರ್ಷ ಆದಷ್ಟು ಬೇಗ ಮುಗಿಯಲಿ ಎಂದು ಆಶಿಸುತ್ತೇನೆ’ ಎಂದಿದ್ದಾರೆ. ‘ಇದು(ಭಾರತದ ದಾಳಿ) ನಾಚಿಗೇಡು. ಕಚೇರಿಯ ಒಳಹೋಗುತ್ತಿರುವಾಗಲೇ ಈ ವಿಷಯ ತಿಳಿಯಿತು. ಏನೋಒಂದು ಆಗಲಿದೆ ಎಂದು ಜನರಿಗೆ ಅಂದಾಜು ಇತ್ತೆಂದು ಕಾಣುತ್ತದೆ. ಅವರು(ಭಾರತ ಮತ್ತು ಪಾಕ್‌) ಶತಮಾನಗಳಿಂದ ಹೊಡೆದಾಡುತ್ತಿದ್ದಾರೆ. ಇದು ಆದಷ್ಟು ಬೇಗ ಕೊನೆಗೊಳ್ಳಲಿ’ ಎಂದು ಟ್ರಂಪ್‌ ಹೇಳಿದ್ದಾರೆ.

ಆಪರೇಷನ್ ಸಿಂದೂರ: ಕಾರವಾರ ಬಂದರು, ಕೈಗಾ ಅಣುಸ್ಥಾವರಕ್ಕೆ ಭದ್ರತೆ ಹೆಚ್ಚಳ

ಅತ್ತ, ‘ಅಮೆರಿಕದ ಕಾರ್ಯದರ್ಶಿ ಮಾರ್ಕೋ ರುಬಿಯೋ ಅವರು ಬುಧವಾರ ಮಧ್ಯಾಹ್ನ ಭಾರತ ಮತ್ತು ಪಾಕಿಸ್ತಾನದ ರಾಷ್ಟ್ರೀಯ ಭದ್ರಾತಾ ಸಲಹೆಗಾರರೊಂದಿಗೆ ಮಾತನಾಡಿದ್ದು, ಸಂವಹನ ಮಾರ್ಗಗಳನ್ನು ತೆರೆದಿಡಿ ಮತ್ತು ಪರಿಸ್ಥಿತಿ ಉಲ್ಬಣಗೊಳ್ಳುವುದನ್ನು ತಪ್ಪಿಸಿ’ ಎಂದಿರುವುದಾಗಿ ಸರ್ಕಾರ ತಿಳಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ವಿಶ್ವದ ಅತಿ ಬಲಿಷ್ಠ ಕರೆನ್ಸಿಗಳಿವು: ಭಾರತದ ರುಪಾಯಿ ಮುಂದೆ ಘರ್ಜಿಸುವ ಡಾಲರ್ ಈ ದೇಶದ ಕರೆನ್ಸಿ ಮುಂದೆ ಡಮ್ಮಿ!
ರಾಜಮೌಳಿ-ಜೇಮ್ಸ್ ಕ್ಯಾಮರೂನ್ ಹೊಸ ಹೆಜ್ಜೆ, ನಟ ಮಹೇಶ್ ಬಾಬುಗೆ ಪ್ಯಾನ್ ವರ್ಲ್ಡ್ ಪಟ್ಟ..!