
ನವದೆಹಲಿ(ಮೇ 04) ಕೊರೋನಾ ಲಾಕ್ ಡೌನ್, ಹೋರಾಟದ ನಡುವೆ ಭಾರತ ಪಾಕಿಸ್ತಾನಕ್ಕೆ ಸರಿಯಾದ ಏಟು ನೀಡಿದೆ. ಇಮ್ರಾನ್ ಖಾನ್ ಸರ್ಕಾರಕ್ಕೆ ತಿರುಗೇಟು ನೀಡಿದೆ. ಆಕ್ರಮಿಸಿಕೊಂಡಿರುವ ಭಾರತದ ಜಾಗ ಖಾಲಿ ಮಾಡಲು ಪಾಕಿಸ್ತಾನಕ್ಕೆ ಸೂಚನೆ ರವಾನಿಸಲಾಗಿದೆ.
ಈ ಕುರಿತು ಹೇಳಿಕೆ ನೀಡಿರುವ ಭಾರತದ ವಿದೇಶಾಂಗ ಸಚಿವಾಲಯ ಗಿಲ್ಗಿಟ್-ಬಾಲ್ಟಿಸ್ತಾನ್ ಸೇರಿದಂತೆ ಸಂಪೂರ್ಣ ಜಮ್ಮು -ಕಾಶ್ಮೀರ ಹಾಗೂ ಲದ್ದಾಕ್ ಭಾರತದ ಅವಿಭಾಜ್ಯ ಅಂಗವಾಗಿದೆ ಎಂದು ಪಾಕಿಸ್ತಾನಕ್ಕೆ ಸೂಚಿಸಲಾಗಿದೆ ಎಂದು ಹೇಳಿದೆ. ಪಾಕಿಸ್ತಾನ ಈ ಕೂಡಲೆ ಜಾಗ ತೊರೆಯಬೇಕು ಎಂದು ಹೇಳಿದೆ.
ಜಾಧವ್ ರಕ್ಷಣೆಗೆ ಪಾಕಿಸ್ತಾನದೊಂದಿಗೆ ಹಿಂಬಾಗಿಲ ಮಾತುಕತೆ
ಗಿಲ್ಗಿಟ್-ಬಾಲ್ಟಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆ ನಡೆಸಲು ಪಾಕಿಸ್ತಾನ ಸುಪ್ರೀಂ ಕೋರ್ಟ್ ನೀಡಿರುವ ಆದೇಶದ ವಿರುದ್ಧ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಗಿಲ್ಗಿಟ್-ಬಾಲ್ಟಿಸ್ತಾನ್ ಸೇರಿದಂತೆ ಇಡೀ ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಭಾರತದ ಅವಿಭಾಜ್ಯ ಅಂಗವಾಗಿದೆ ಮತ್ತು ಪಾಕಿಸ್ತಾನವು ಈ ಪ್ರದೇಶಗಳನ್ನು ಬಿಟ್ಟು ಹೊರನಡೆಯಬೇಕು ಎಂದು ಖಾರವಾದ ಉತ್ತರ ನೀಡಲಾಗಿದೆ.
ಪಾಕಿಸ್ತಾನದ ಸುಪ್ರೀಂ ಕೋರ್ಟ್ ತನ್ನ ಇತ್ತೀಚಿನ ಆದೇಶದಲ್ಲಿ, ಈ ಪ್ರದೇಶದಲ್ಲಿ ಸಾರ್ವತ್ರಿಕ ಚುನಾವಣೆ ನಡೆಸಲು ಜತೆಗೆ 2018 ರ 'ಗಿಲ್ಗಿಟ್ ಬಾಲ್ಟಿಸ್ತಾನ್ ಸರ್ಕಾರದ ಆದೇಶಕ್ಕೆ ತಿದ್ದುಪಡಿ ತರಲು ಅನುಮತಿ ನೀಡಿತ್ತು. ಇದಕ್ಕೆ ತಕ್ಷಣ ಪ್ರತಿಕ್ರಿಯೆ ನೀಡಿರುವ ಭಾರತ ಭಾರತದ ಜಾಗದ ಮೇಲೆ ತೀರ್ಮಾನ ನೀಡಲು ಯಾರು ಎಂದು ಪ್ರಶ್ನೆ ಮಾಡಿದೆ
ಈ ಪ್ರದೇಶದಲ್ಲಿ ಪಾಕಿಸ್ತಾನದ ಯಾವ ಹಕ್ಕು ಇರುವುದಿಲ್ಲ, ಸಾರ್ವಭೌಮ ಭಾರತಕ್ಕೆ ಸೇರಿದ ಜಾಗದಲ್ಲಿ ಪಾಕಿಸ್ತಾನ ಕಿತಾಪತಿ ತೋರುವ ಅಗತ್ಯ ಇಲ್ಲ ಎಂದುನ ಖಡಕ್ ಎಚ್ಚರಿಕೆ ರವಾನಿಸಲಾಗಿದೆ. ಚೀನಾ-ಪಾಕಿಸ್ತಾನ್ ಎಕಾನಿಮಿಕ್ ಕಾರಿಡಾರ್ ಹೆಸರಿನಲ್ಲಿ ಚೀನಾ ಸಹ ಕ್ಯಾತೆ ತೆಗೆದಿತ್ತು. ಈಗ ಪಾಕಿಸ್ತಾನ ಚುನಾವಣೆಗೆ ಮುಂದಾಗಲು ಸಿದ್ಧತೆ ಮಾಡಿಕೊಂಡಿದ್ದು ಭಾರತದ ವಿರೋಧಕ್ಕೆ ಕಾರಣ ಆಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ