
ಲಾಹೋರ್: 2019ರ ಪುಲ್ವಾಮಾ ದಾಳಿಯ ಪ್ರಮುಖ ರೂವಾರಿ ಎಂದು ಗುರುತಿಸಲ್ಪಟ್ಟಿದ್ದ ಹಮ್ಜಾ ಬುರ್ಹಾನ್ ಉಗ್ರನನ್ನು ಧುರಂಧರ್ ಹೊಡೆದುರಿಳಿಸಿದ್ದಾನೆ. ಅವನ ಹತ್ಯೆ ಬಳಿಕ ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಂತ್ಯಕ್ರಿಯೆಯಲ್ಲಿ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐಗೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಹಲವು ಉಗ್ರ ಸಂಘಟನೆಗಳ ನಾಯಕರು ಭಾಗಿಯಾಗಿರುವ ಮಾಹಿತಿ ಬಯಲಾಗಿದೆ. ಆ ಮೂಲಕ ಪಾಕಿಸ್ತಾನ ಉಗ್ರರರನ್ನು ಪೋಷಿಸುತ್ತಿದೆ ಎಂದು ಮತ್ತೊಮ್ಮೆ ಸಾಬೀತಾಗಿದೆ.
ಹಮ್ಜಾ ಬುರ್ಹಾನ್‌ನ್ನು ಗುರುವಾರ ಬೆಳಿಗ್ಗೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಅಪರಿಚಿತ ಬಂದೂಕುಧಾರಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಈ ಹತ್ಯೆಯ ಹಿಂದೆ ‘ಧುರಂಧರ್’ ಎಂಬ ರಹಸ್ಯ ಕಾರ್ಯಾಚರಣೆ ಇರಬಹುದೆಂಬ ಚರ್ಚೆಗಳು ಜೋರಾಗಿವೆ. ಆದರೆ ಈ ಕುರಿತು ಯಾವುದೇ ಅಧಿಕೃತ ಸ್ಪಷ್ಟನೆ ಹೊರಬಿದ್ದಿಲ್ಲ.
ಹಮ್ಜಾ ಬುರ್ಹಾನ್ 2019ರ ಫೆಬ್ರವರಿಯಲ್ಲಿ ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಭೀಕರ ಉಗ್ರ ದಾಳಿಯ ಪ್ರಮುಖ ಸಂಚುಕೋರನಾಗಿದ್ದ ಎಂದು ಭಾರತೀಯ ಭದ್ರತಾ ಸಂಸ್ಥೆಗಳು ಗುರುತಿಸಿವೆ. ಆ ದಾಳಿಯಲ್ಲಿ ಸಿಆರ್‌ಪಿಎಫ್‌ನ 40 ಯೋಧರು ಹುತಾತ್ಮರಾಗಿದ್ದರು. ಈ ದಾಳಿ ಬಳಿಕ ಭಾರತ-ಪಾಕಿಸ್ತಾನ ಸಂಬಂಧ ತೀವ್ರ ಉದ್ವಿಗ್ನಗೊಂಡಿತ್ತು.
ಅಂತ್ಯಕ್ರಿಯೆ ವೇಳೆ ಭಾರತದ ಮೋಸ್ಟ್ ವಾಂಟೆಡ್ ಉಗ್ರರ ಹಾಜರಿ
ಶುಕ್ರವಾರ ನಡೆದ ಅಂತ್ಯಕ್ರಿಯೆಯಲ್ಲಿ ಹಿಜ್ಬುಲ್ ಮುಜಾಹಿದೀನ್ ಮುಖ್ಯಸ್ಥ ಸೈಯದ್ ಸಲಾಹುದ್ದೀನ್, ಅಲ್ ಬದ್ರ್ ಸಂಘಟನೆಯ ಮುಖ್ಯಸ್ಥ ಬಖ್ತ್ ಜಮೀನ್ ಖಾನ್ ಸೇರಿದಂತೆ ಹಲವು ಮೋಸ್ಟ್ ವಾಂಟೆಡ್ ಉಗ್ರರು ಭಾಗಿಯಾಗಿರುವುದು ಬಯಲಾಗಿದೆ ಜೊತೆಗೆ ಐಎಸ್‌ಐ ಅಧಿಕಾರಿಗಳು ಹಾಜರಾತಿ ಪಾಕಿಸ್ತಾನ ಮತ್ತು ಉಗ್ರ ಸಂಘಟನೆಗಳ ನಡುವಿನ ಸಂಬಂಧದ ಬಯಲಾಗಿದೆ.
ಪಾಕಿಸ್ತಾನ ವಿರುದ್ಧ ಮತ್ತೆ ಆರೋಪ
ಉಗ್ರ ಸಂಘಟನೆಗಳಿಗೆ ಪಾಕಿಸ್ತಾನ ಬೆಂಬಲ ನೀಡುತ್ತಿದೆ ಎಂಬ ಭಾರತದ ಆರೋಪಗಳಿಗೆ ಈ ಬೆಳವಣಿಗೆ ಮತ್ತಷ್ಟು ಬಲ ನೀಡಿದೆ. ಅಂತ್ಯಕ್ರಿಯೆಯಲ್ಲಿ ಉಗ್ರ ನಾಯಕರು ಮತ್ತು ಐಎಸ್‌ಐ ಅಧಿಕಾರಿಗಳು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿರುವುದು ಅಂತರರಾಷ್ಟ್ರೀಯ ಮಟ್ಟದಲ್ಲೂ ಚರ್ಚೆಗೆ ಕಾರಣವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ