ಪೌರತ್ವ ಮಸೂದೆ: ಬೇಡದ ಇರುವೆ ಬಿಟ್ಕೊಂಡ ಪಾಕ್ ಪ್ರಧಾನಿ!

By Suvarna NewsFirst Published Dec 10, 2019, 9:57 PM IST
Highlights

ಲೋಕಸಭೆಯಲ್ಲಿ ಅಂಗೀಕಾರಗೊಂಡ ಪೌರತ್ವ ತಿದ್ದುಪಡಿ ಮಸೂದೆ| ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿದ ಪಾಕ್ ಪ್ರಧಾನಿ| ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಕಾನೂನನ್ನುಉಲ್ಲಂಘನೆ ಎಂದ ಇಮ್ರಾನ್ ಖಾನ್| ‘ಭಾರತ-ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಒಪ್ಪಂದಗಳ ಉಲ್ಲಂಘನೆ’| ‘ಮಸೂದೆ ಪ್ರಧಾನಿ ಮೋದಿ ಹಾಗೂ RSS ನ ಹಿಂದೂ ರಾಷ್ಟ್ರದ ನೀತಿಯ ಭಾಗ’|

ಇಸ್ಲಾಮಾಬಾದ್(ಡಿ.10): ಭಾರತದ ಪೌರತ್ವ ತಿದ್ದುಪಡಿ ಮಸೂದೆಗೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

 ಭಾರತದ ಪೌರತ್ವ ಮಸೂದೆಯನ್ನು ತೀವ್ರವಾಗಿ ಖಂಡಿಸುವುದಾಗಿ ಹೇಳಿರುವ ಇಮ್ರಾನ್ ಖಾನ್, ಈ ಮಸೂದೆ ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಕಾನೂನನ್ನುಉಲ್ಲಂಘಿಸುತ್ತದೆ ಎಂದು ಹರಿಹಾಯ್ದಿದ್ದಾರೆ.

ಅಮಿತ್ ಶಾ CAB: ವಾಷಿಂಗ್ಟನ್ ಟು ದಿಲ್ಲಿ, ಪಿಕ್ಚರ್ ಅಬಿ ಬಾಕಿ ಹೈ....!

ಪೌರತ್ವ ತಿದ್ದುಪಡಿ ಮಸೂದೆ ಭಾರತ-ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಒಪ್ಪಂದಗಳನ್ನು ಉಲ್ಲಂಘನೆ ಮಾಡುತ್ತದೆ ಎಂದೂ ಇಮ್ರಾನ್ ಖಾನ್ ಅಭಿಪ್ರಾಯಪಟ್ಟಿದ್ದಾರೆ.

We strongly condemn Indian Lok Sabha citizenship legislation which violates all norms of int human rights law & bilateral agreements with Pak. It is part of the RSS "Hindu Rashtra" design of expansionism propagated by the fascist Modi Govt. https://t.co/XkRdBiSp3G

— Imran Khan (@ImranKhanPTI)

ಮಸೂದೆ ಅಂಗೀಕಾರವಾಗಿರುವುದು ಪ್ರಧಾನಿ ನರೇಂದ್ರ ಮೋದಿ ಹಾಗೂ RSS ನ ಹಿಂದೂ ರಾಷ್ಟ್ರದ ನೀತಿಯ ಭಾಗ ಎಂದು ಇಮ್ರಾನ್ ಖಾನ್ ಗಂಭೀರ ಆರೋಪ ಮಾಡಿದ್ದಾರೆ. 

ಶಾ ಎದುರಲ್ಲೇ CAB ಪ್ರತಿ ಹರಿದು ವಿವಾದ ಸೃಷ್ಟಿಸಿದ ಒವೈಸಿ!

ಪಾಕಿಸ್ತಾನ, ಅಫ್ಘಾನಿಸ್ತಾನ, ಬಾಂಗ್ಲಾದೇಶಗಳಲ್ಲಿ ಮುಸ್ಲಿಮೇತರ, ಅಲ್ಪಸಂಖ್ಯಾತ ಸಮುದಾಯದ ನಿರಾಶ್ರಿತರಿಗೆ ಭಾರತೀಯ ಪೌರತ್ವ ನೀಡುವ ಉದ್ದೇಶದೊಂದಿಗೆ ಪೌರತ್ವ ತಿದ್ದುಪಡಿ ಮಸೂದೆಯನ್ನು ಮಂಡಿಸಲಾಗಿದೆ.

click me!