Russia Ukraine Crisis: ದಿನಸಿ, ಔಷಧಿ, ನಗದು ಹಣಕ್ಕಾಗಿ ಉಕ್ರೇನ್‌ ಜನರ ಪರದಾಟ

Kannadaprabha News   | Asianet News
Published : Feb 26, 2022, 03:15 AM IST
Russia Ukraine Crisis: ದಿನಸಿ, ಔಷಧಿ, ನಗದು ಹಣಕ್ಕಾಗಿ ಉಕ್ರೇನ್‌ ಜನರ ಪರದಾಟ

ಸಾರಾಂಶ

ಉಕ್ರೇನ್‌ ಮೇಲಿನ ರಷ್ಯಾ ದಾಳಿ, ಜನಸಾಮಾನ್ಯರ ಬದುಕನ್ನ ಹೈರಣಾಗಿಸಿದೆ. ನಿತ್ಯ ಜೀವನದ ಬಹುತೇಕ ಚಟುವಟಿಕೆಗಳ ಮೇಲೆ ಯುದ್ಧವು ವ್ಯತಿರಿಕ್ತ ಪರಿಣಾಮ ಬೀರಿದ್ದು, ಸಾಮಾನ್ಯ ಜನಜೀವನಕ್ಕೆ ಅಡ್ಡಿ ಮಾಡಿದೆ.

ಕೀವ್‌ (ಫೆ.26): ಉಕ್ರೇನ್‌ (Ukraine) ಮೇಲಿನ ರಷ್ಯಾ (Russia) ದಾಳಿ, ಜನಸಾಮಾನ್ಯರ ಬದುಕನ್ನ ಹೈರಣಾಗಿಸಿದೆ. ನಿತ್ಯ ಜೀವನದ ಬಹುತೇಕ ಚಟುವಟಿಕೆಗಳ ಮೇಲೆ ಯುದ್ಧವು ವ್ಯತಿರಿಕ್ತ ಪರಿಣಾಮ ಬೀರಿದ್ದು, ಸಾಮಾನ್ಯ ಜನಜೀವನಕ್ಕೆ ಅಡ್ಡಿ ಮಾಡಿದೆ. ದೇಶಾದ್ಯಂತ ಆನ್‌ಲೈನ್‌ ಮತ್ತು ಡೆಬಿಟ್‌ (Debit Card) ಮತ್ತು ಕ್ರೆಡಿಟ್‌ ಕಾರ್ಡ್‌ಗಳ (Credit Card) ಪಾವತಿ ಸಂಪೂರ್ಣವಾಗಿ ನಿಷಿದ್ಧವಾಗಿದೆ. 

ಹೀಗಾಗಿ ಜನರು ಯಾವುದೇ ಸಣ್ಣ-ಪುಟ್ಟಖರೀದಿಗೂ ನಗದು ಪಾವತಿಸಲು ಎಟಿಎಂಗಳತ್ತ (ATM) ಮುಗಿಬೀಳುತ್ತಿದ್ದಾರೆ. ಹೀಗಾಗಿ ನಗರದ ಪ್ರಮುಖ ಭಾಗಗಳಲ್ಲಿರುವ ಎಟಿಎಂಗಳಲ್ಲಿ ಭಾರೀ ಜನದಟ್ಟಣೆ ಎದುರಾಗಿದೆ. ಯುದ್ಧದಿಂದ ದಿನಸಿ, ಔಷಧಿ ಮತ್ತು ಇನ್ನಿತರ ನಿತ್ಯ ಉಪಯೋಗಿ ವಸ್ತುಗಳ ಅಭಾವ ಎದುರಾಗಲಿದೆ ಎಂಬ ಭೀತಿಯಿಂದ ಜನರು ಈ ವಸ್ತುಗಳನ್ನು ಹೆಚ್ಚಾಗಿ ದಾಸ್ತಾನು ಮಾಡಿಟ್ಟುಕೊಳ್ಳಲು ಯತ್ನಿಸುತ್ತಿದ್ದಾರೆ. ಹೀಗಾಗಿ ದಿನಸಿ ವಸ್ತುಗಳ ಅಂಗಡಿಗಳ ಮುಂದೆಯೂ ಜೇನು ನೊಣದ ಹಿಂಡಿನಂತೆ ಜನರ ದಂಡು ಹರಿದುಬರುತ್ತಿದೆ.

ಹಿರಿಯ ನಾಗರಿಕರಿಗೆ ಭಾರೀ ಸಂಕಷ್ಟ: ರಷ್ಯಾದ ದಾಳಿಯಿಂದಾಗಿ ಉಕ್ರೇನ್‌ನ ಪೂರ್ವ ಭಾಗದಲ್ಲಿರುವ 20 ಲಕ್ಷಕ್ಕೂ ಹೆಚ್ಚು ಹಿರಿಯ ನಾಗರಿಕರ ಗೋಳು ಹೇಳತೀರದಾಗಿದೆ. ರಷ್ಯಾದ ದಾಳಿಗೆ ಸಿಲುಕಿರುವ ಪ್ರದೇಶಗಳಿಂದ ಯುವಕರು ಮತ್ತು ಸಾಮಾನ್ಯ ನಾಗರಿಕರು ಪಾರಾಗುತ್ತಿದ್ದಾರೆ. ಆದರೆ ಹಿರಿಯ ನಾಗರಿಕರು ಈ ಸ್ಥಳಗಳಿಂದ ಪಾರಾಗಲು ಸಾಧ್ಯವಾಗುತ್ತಿಲ್ಲ. ಜತೆಗೆ ತಮ್ಮ ಪ್ರಾಣದ ಹಂಗಿನಲ್ಲಿ ಪೇರೆ ಕಿತ್ತುತ್ತಿರುವ ಯುವಕರು, ಹಿರಿಯರಾದ ತಮ್ಮ ತಂದೆ-ತಾಯಿ ಮತ್ತು ಪೋಷಕರನ್ನು ಜೊತೆಗೆ ಕರೆದುಕೊಂಡು ಹೋಗಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಈ ಪ್ರದೇಶಗಳಲ್ಲಿ ತಮ್ಮ ಪ್ರೀತಿ-ಪಾತ್ರರಿಲ್ಲದೆ ಹಿರಿಯ ನಾಗರಿಕರು ಏಕಾಂಗಿಯಾಗಿದ್ದಾರೆ.

Russia Ukraine Crisis: ಬಾಲ್ಟಿಕ್‌ ದೇಶದಲ್ಲೂ ಯುದ್ಧ ಭೀತಿ!

ಉತ್ತಮ ಆರೋಗ್ಯಕ್ಕೆ ಅಗತ್ಯವಿರುವ ಔಷಧಿ ಮತ್ತು ಆಹಾರಗಳಿಂದ ವಂಚಿತರಾಗಿರುವ ಹಿರಿಯ ಜೀವಗಳಿಗೆ ಯುದ್ಧದಲ್ಲಿ ಮಡಿಯುವುದೊಂದೇ ಹಾದಿಯಂಥ ದುಸ್ಥಿತಿ ಏರ್ಪಟ್ಟಿದೆ. ಗ್ರಾಮೀಣ ಪ್ರದೇಶಗಳಲ್ಲಿ ಯುದ್ಧದಂಥ ವಾತಾವರಣದಿಂದ ಪ್ರಾಣ ಉಳಿಸಿಕೊಳ್ಳುವುದು ಸುಲಭ. ಆದರೆ ನಾವು ಅಲ್ಲಿಗೆ ಹೋಗಲು ಆಗುವುದೇ ಇಲ್ಲ. ಹೀಗಾಗಿ ನಮ್ಮ ಸುತ್ತಮುತ್ತಲ ಪ್ರದೇಶಗಳಲ್ಲಿ ಶೆಲ್ಲಿಂಗ್‌ ಮತ್ತು ಬಾಂಬ್‌ ದಾಳಿಗಳು ಸಂಭವಿಸಿದರೆ, ಮನೆಯ ನೆಲಮಹಡಿಗೆ ಹೋಗುತ್ತೇನೆ. ದಾಳಿಗಳು ನಿಂತ ಬಳಿಕ ಮತ್ತೆ ಮೇಲೆ ಬರುತ್ತೇವೆ ಎಂದು ಹಿರಿಯ ನಾಗರಿಕರೊಬ್ಬರು ಹೇಳಿದ್ದಾರೆ.

ಉಕ್ರೇನ್‌ನಲ್ಲಿ ಕನ್ನಡಿಗರು ಸಿಲುಕಿದ್ದರೆ ಈ ಸಂಖ್ಯೆಗೆ ಕರೆ ಮಾಡಿ: ಉಕ್ರೇನ್‌ (Ukraine) ಮತ್ತು ರಷ್ಯಾ (Russia) ನಡುವಿನ ಯುದ್ಧದಿಂದಾಗಿ (War) ಉಕ್ರೇನ್‌ ರಾಷ್ಟ್ರದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ರಾಜ್ಯ ಸರ್ಕಾರ (Government of Karnataka) ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣೆ ಪ್ರಾಧಿಕಾರ ಆಯುಕ್ತ ಡಾ.ಮನೋಜ್‌ ರಾಜನ್‌ ಅವರನ್ನು ನೊಡೆಲ್‌ ಅಧಿಕಾರಿಯನ್ನಾಗಿ ನಿಯೋಜನೆ ಮಾಡಿದೆ.

ಉಕ್ರೇನ್‌ನ ಕೀವ್‌ನಲ್ಲಿನ ಭಾರತದ ರಾಯಭಾರಿ ಕಚೇರಿಯೊಂದಿಗೆ(Embassy of India) ಡಾ.ಮನೋಜ್‌ ರಾಜನ್‌(Dr Manoj Rajan) ಅವರು ಸಮನ್ವಯ ಸಾಧಿಸಲಿದ್ದಾರೆ. ಅಲ್ಲಿನ ಕನ್ನಡಿಗರ (Kannadigas) ಕುಂದುಕೊರತೆಯನ್ನು ಆಲಿಸುವುದರ ಜತೆಗೆ ರಕ್ಷಣೆಯ ಕಾರ್ಯವನ್ನು ಮಾಡಲಿದ್ದಾರೆ. ದೆಹಲಿಯಲ್ಲಿನ ಉಕ್ರೇನ್‌ ರಾಯಭಾರಿ ಕಚೇರಿಯು 24 ತಾಸುಗಳ ಕಾಲ ಸಹಾಯವಾಣಿ (Helpline) ತೆಗೆದಿದೆ. ಅಂತೆಯೇ ರಾಜ್ಯದಲ್ಲಿಯೂ (Karnataka) 24/7 ಸಹಾಯವಾಣಿ ಆರಂಭಿಸಿದೆ. ಇದರ ಜವಾಬ್ದಾರಿಯನ್ನು ಮನೋಜ್‌ ರಾಜನ್‌ ಅವರು ನಿರ್ವಹಿಸಲಿದ್ದಾರೆ.

ಚಳಿಯಲ್ಲಿ ಭಾರತೀಯ ವಿದ್ಯಾರ್ಥಿಗಳ ಪರದಾಟ, ಜೀವ ಕೈಯಲ್ಲಿ ಹಿಡಿದು ಉಕ್ರೇನ್‌ ಪೋಲೆಂಡ್ ಗಡಿಗೆ ನಡೆದಾಟ!

ಸಹಾಯವಾಣಿ: ಉಕ್ರೇನ್‌ ರಾಷ್ಟ್ರದಲ್ಲಿ ನೆಲೆಸಿರುವ ಕನ್ನಡಿಗ ವಿದ್ಯಾರ್ಥಿಗಳು (Students) ಮತ್ತು ನಾಗರಿಕರ ಪೋಷಕರು ಸಹಾಯವಾಣಿಯನ್ನು ಸಂಪರ್ಕಿಸಿ ಮಾಹಿತಿ ನೀಡಬಹುದಾಗಿದೆ. ಸಹಾಯವಾಣಿ ಸಂಖ್ಯೆ - 080-1070, 080-22340676, ಇ-ಮೇಲ್‌- manoarya@gmail.com, revenuedmkar@gmail.com ಗೆ ಸಂಪರ್ಕಿಸಬಹುದು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ವೃತ್ತಿಪರತೆ ಅಂತ್ಯಸಂಸ್ಕಾರ, ಪ್ರಶ್ನೆ ಕೇಳಿದ ಪತ್ರಕರ್ತೆಗೆ ಕಣ್ಣು ಹೊಡೆದ ಪಾಕಿಸ್ತಾನ ಸೇನಾ ಲೆ.ಜನರಲ್
ಜಪಾನ್‌ನಲ್ಲಿ 7.5 ತೀವ್ರತೆಯ ಭೂಕಂಪ: ಧರಣಿ ಗರ ಗರನೇ ತಿರುಗಿದ ಕ್ಷಣದ ವೀಡಿಯೋಗಳು ವೈರಲ್