ಭೀಕರ ಬರಗಾಲ ಎದುರಿಸುತ್ತಿರುವ ಜಿಂಬಾಬ್ವೆಯಲ್ಲಿ ಜನರಿಗೆ ಆಹಾರ ಒದಗಿಸುವ ಸಲುವಾಗಿ ಆನೆಗಳನ್ನು ಕೊಲ್ಲಲು ಅಲ್ಲಿನ ಅಧಿಕಾರಿಗಳು ನಿರ್ಧರಿಸಿದ್ದಾರೆ. ‘ದೇಶದ ಅರ್ಧ ಜನಸಂಖ್ಯೆ ಹಸಿವಿನಿಂದ ಬಳಲುತ್ತಿದ್ದು, ಅವರ ಹಸಿವನ್ನು ನೀಗಿಸುವ ಉದ್ದೇಶದಿಂದ 200 ಆನೆಗಳನ್ನು ಕೊಲ್ಲಲು ನಿರ್ಧರಿಸಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹರಾರೆ: ಭೀಕರ ಬರಗಾಲ ಎದುರಿಸುತ್ತಿರುವ ಜಿಂಬಾಬ್ವೆಯಲ್ಲಿ ಜನರಿಗೆ ಆಹಾರ ಒದಗಿಸುವ ಸಲುವಾಗಿ ಆನೆಗಳನ್ನು ಕೊಲ್ಲಲು ಅಲ್ಲಿನ ಅಧಿಕಾರಿಗಳು ನಿರ್ಧರಿಸಿದ್ದಾರೆ. ‘ದೇಶದ ಅರ್ಧ ಜನಸಂಖ್ಯೆ ಹಸಿವಿನಿಂದ ಬಳಲುತ್ತಿದ್ದು, ಅವರ ಹಸಿವನ್ನು ನೀಗಿಸುವ ಉದ್ದೇಶದಿಂದ 200 ಆನೆಗಳನ್ನು ಕೊಲ್ಲಲು ನಿರ್ಧರಿಸಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜೊತೆಗೆ 45,000 ಆನೆಗಳಿಗೆ ಆಶ್ರಯ ಒದಗಿಸಬಲ್ಲ ನಮ್ಮ ದೇಶದಲ್ಲಿ ಪ್ರಸ್ತುತ 84,000 ಆನೆಗಳಿದ್ದು, ಆನೆಗಳ ಸಂಖ್ಯೆಯಲ್ಲಿ ಜಿಂಬಾಬ್ವೆ ವಿಶ್ವದಲ್ಲೇ ಎರಡನೇ ಸ್ಥಾನದಲ್ಲಿದೆ ಎನ್ನುವ ಮೂಲಕ ಆನೆ ಹತ್ಯೆ ಸಮರ್ಥಿಸಿಕೊಂಡಿದ್ದಾರೆ. ಈ ಮೊದಲು ಆನೆಗಳನ್ನು ಕೊಂದು ಅವುಗಳ ಮಾಂಸವನ್ನು ಒಣಗಿಸಿ ಪ್ರೋಟೀನ್ ಅವಶ್ಯಕತೆ ಇರುವವರಿಗೆ ಕೊಡುವ ಬಗ್ಗೆ ಚರ್ಚಿಸಲಾಗುತ್ತಿದೆ ಎಂದು ಜಿಂಬಾಬ್ವೆ ಪರಿಸರ ಸಚಿವ ಸಿತೆಂಬಿಸೋ ನಿಯೋನಿ ಹೇಳಿದ್ದರೆಂದು ವರದಿಯಾಗಿತ್ತು.
undefined
ತೀವ್ರ ಬರದಿಂದ ಬೇಸತ್ತ ನಮೀಬಿಯಾ: ಜನರ ಹಸಿವು ನೀಗಿಸಲು ಆನೆಗಳ ಹತ್ಯೆಗೆ ಮುಂದಾದ ಸರ್ಕಾರ
ಇತ್ತೀಚೆಗೆ ನಮೀಬಿಯಾ ಕೂಡ ಜನರಿಗೆ ಆಹಾರ ಭದ್ರತೆ ಒದಗಿಸಲು ಆನೆ ಸೇರಿದಂತೆ ವಿವಿಧ ಅರಣ್ಯಜೀವಿಗಳನ್ನು ಕೊಲ್ಲಲು ನಿರ್ಧರಿಸಿತ್ತು. ಇದಕ್ಕೆ ಪ್ರಾಣಿ ಹಕ್ಕುಗಳ ಕಾರ್ಯಕರ್ತರು ಮತ್ತು ಸಂರಕ್ಷಣಾವಾದಿಗಳಿಂದ ಭಾರೀ ಟೀಕೆ ಕೇಳಿ ಬಂದಿತ್ತು.
ಬರ ಪೀಡಿತ ನಮೀಬಿಯಾದ ಆನೆಗಳ ರಕ್ಷಣೆಗೆ ಮುಂದಾದ ಅನಂತ್ ಅಂಬಾನಿಯ ವಂತಾರಾ ಪ್ರತಿಷ್ಠಾನ