
ಇಸ್ರೇಲ್: ಭಾರತದ ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಭೇಟಿಗಾಗಿ ಇಸ್ರೇಲ್ ಪ್ರವಾಸ ಕೈಗೊಂಡಿದ್ದು, ಈ ವೇಳೆ ಪ್ರಧಾನಿ ನರೇಂದ್ರ ಮೋದಿ, ಇಸ್ರೇಲ್‌ನ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹಾಗೂ ಅವರ ಪತ್ನಿಯನ್ನು ಭೇಟಿಯಾಗಿ ಉಭಯ ಕುಶಲೋಪರಿ ನಡೆಸಿದ್ದಾರೆ. ಈ ವೇಳೆ ಒಂದು ಹಾಸ್ಯಮಯ ಸನ್ನಿವೇಶಕ್ಕೆ ಸಾಕ್ಷಿಯಾಯಿತು.
ಪ್ರಧಾನಿ ನರೇಂದ್ರ ಮೋದಿ ಇಸ್ರೇಲ್‌ಗೆ ಬಂದಿಳಿಯುತ್ತಿದ್ದಂತೆಯೇ ನೆತನ್ಯಾಹು ಹಾಗೂ ಅವರ ಪತ್ನಿ ವಿಮಾನ ನಿಲ್ದಾಣದಲ್ಲಿಯೇ ಆತ್ಮೀಯವಾಗಿ ಸ್ವಾಗತಿಸಿದರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಧರಿಸಿದ್ದ ಕೋಟ್‌ನ ಜೇಬಿನಲ್ಲಿ ಕೇಸರಿ ಬಣ್ಣದ ಸ್ಕ್ವೇರ್, ನೆತನ್ಯಾಹು ಗಮನ ಸೆಳೆಯಿತು. ಯಾಕೆಂದರೆ ನೆತನ್ಯಾಹು ಪತ್ನಿ ಕೂಡಾ ಕೇಸರಿ ಬಣ್ಣದ ಕೋಟ್ ಧರಿಸಿದ್ದರು. ಈ ವಿಡಿಯೋವೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಇರಾನ್-ಅಮೆರಿಕ ಯುದ್ಧಾತಂಕ ಸೇರಿದಂತೆ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರವಾಗಿರುವ ನಡುವೆಯೇ, ದ್ವಿಪಕ್ಷೀಯ ಸಹಕಾರವನ್ನು ಬಲಪಡಿಸಲು ಪ್ರಧಾನಿ ನರೇಂದ್ರ ಮೋದಿ ಬುಧವಾರದಿಂದ 2 ದಿನ ಇಸ್ರೇಲ್ ಪ್ರವಾಸ ಕೈಗೊಂಡಿದ್ದಾರೆ.
ಇಸ್ರೇಲ್‌ಗೆ ಪ್ರಧಾನಿ ನರೇಂದ್ರ ಮೋದಿ 2017ರಲ್ಲಿ ಮೊದಲ ಭೇಟಿ ನೀಡಿದ್ದರು. ಪ್ರಧಾನಿ ಬೆಂಜಮಿನ್ ನೆತನ್ಯಾಹು ಜೊತೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. ಅಧ್ಯಕ್ಷ ಐಸಾಕ್ ಹೆರ್ಜಾಗ್ ಜೊತೆಗೂ ಸಭೆ ನಡೆಸಲಿದ್ದಾರೆ. ಗುರುವಾರ ನಡೆಯಲಿರುವ ಉಭಯ ಪ್ರಧಾನಿಗಳನ್ನು ಒಳಗೊಂಡ ನಿಯೋಗ ಮಟ್ಟದ ಮಾತುಕತೆಯಲ್ಲಿ ಪರಸ್ಪರ ರಕ್ಷಣಾ ಮತ್ತು ಭದ್ರತಾ ಸಹಕಾರವನ್ನು ಹೆಚ್ಚಿಸುವುದು ಕೇಂದ್ರಬಿಂದುವಾಗಿರಲಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೇಲ್‌ನ ಸಂಸತ್ತು ‘ಕ್ನೆಸೆಟ್’ ಪ್ರವೇಶಿಸುತ್ತಿದ್ದಂತೆ ಸಂಸದರೆಲ್ಲ ‘ಮೋದಿ ಮೋದಿ’ ಎಂಬ ಉದ್ಗಾರ ಮೊಳಗಿಸಿದರು. ಬಳಿಕ ಅವರನ್ನು ಪ್ರಶಂಸಿಸುತ್ತಾ ಎಲ್ಲರೂ ಎದ್ದು ನಿಂತು ಚಪ್ಪಾಳೆ ತಟ್ಟಿದ್ದು ವಿಶೇಷವಾಗಿತ್ತು.
‘ನೀವು ಇಸ್ರೇಲ್ ಪರವಾಗಿ ನಿಂತಿದ್ದೀರಿ, ಧನ್ಯವಾದಗಳು ನನ್ನ ಗೆಳೆಯ..’ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ತಮ್ಮ ಭಾಷಣದಲ್ಲಿ ಹೇಳಿದರು. ಆಗ ಮೋದಿ ಅವರು ನೆತನ್ಯಾಹು ಕೈಕುಲುಕಿ ಧನ್ಯವಾದ ಸಮರ್ಪಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ