
ಒಟ್ಟಾವ: ಕರ್ನಾಟಕದ ತುಮಕೂರು ಜಿಲ್ಲೆಯ ಶಿರಾ ತಾಲೂಕಿನವರಾದ ಕೆನಡಾದ ಸಂಸದ ಚಂದ್ರ ಆರ್ಯ, ಮುಂಬರುವ ಫೆಡರಲ್ ಚುನಾವಣೆಯಲ್ಲಿ ಕೆನಡಾದ ಪ್ರಧಾನ ಮಂತ್ರಿ ಸ್ಥಾನಕ್ಕೆ ತಮ್ಮ ಉಮೇದುವಾರಿಕೆಯನ್ನು ಅಧಿಕೃತವಾಗಿ ಘೋಷಿಸಿದ್ದಾರೆ.
ತಮ್ಮ ನಾಯಕತ್ವದ ಬಗ್ಗೆ ಲಿಬರಲ್ ಪಕ್ಷದೊಳಗೆ ಅಸಮಾಧಾನ ಎದುರಿಸುತ್ತಿದ್ದ ಜಸ್ಟಿನ್ ಟ್ರುಡೊ ಅವರು ರಾಜೀನಾಮೆ ನೀಡಿದ 2 ದಿನಗಳ ನಂತರ ಕೆನಡಾ ಪ್ರಧಾನಿ ಸ್ಥಾನಕ್ಕೆ ಸ್ಪರ್ಧಿಸಲು ಚಂದ್ರ ಆರ್ಯ ಅವರು ತಾವೂ ಸ್ಪರ್ಧೆ ಮಾಡುತ್ತಿರುವುದಾಗಿ ಘೋಷಿಸಿದ್ದಾರೆ. ಇವರಿಗೂ ಮುನ್ನ ಭಾರತೀಯ ಮೂಲದ ಕೆನಡಾ ಸಚಿವೆ ಅನಿತಾ ಆನಂದ್ ಸ್ಪರ್ಧೆ ಘೋಷಿಸಿದ್ದರು.
ಚಂದ್ರ ಆರ್ಯ ಅವರು ಧಾರವಾಡದ ಕೌಸಾಳಿ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಸ್ಟಡೀಸ್‌ನಲ್ಲಿ ಬಿಸಿನೆಸ್ ಅಡ್ಮಿನಿಸ್ಟ್ರೇಷನ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು. 2006ರಲ್ಲಿ ಕೆನಡಾಕ್ಕೆ ವಲಸೆ ಬಂದರು ಹಾಗೂ 2015 ರ ಫೆಡರಲ್ ಚುನಾವಣೆಯಲ್ಲಿ ಗೆದ್ದು ಸಂಸತ್ ಪ್ರವೇಶಿಸಿದ್ದರು ಮತ್ತು 2019ರ ಚುನಾವಣೆಯಲ್ಲಿ ಮತ್ತೊಮ್ಮೆ ಆಯ್ಕೆಯಾಗಿದ್ದರು. ಖಲಿಸ್ತಾನಿ ಉಗ್ರರ ವಾದಿಸುವ ನಿರ್ಗಮಿತ ಪ್ರಧಾನಿ ಜಸ್ಟಿನ್ ಟ್ರುಡೋ ಅವರ ಬೆಂಬಲಿಗರಾಗಿದ್ದರೂ, ಆರ್ಯ ಅವರು ಹಿಂದೂಗಳ ಪರ ದನಿ ಎತ್ತಿ ಖ್ಯಾತಿ ಪಡೆದಿದ್ದಾರೆ.
ಇದನ್ನೂ ಓದಿ: ಯಾರವ್ವ ಇವಳು ಚೆಲುವೆ, ಎಲ್ಲರ ಕಣ್ಣು ಇವಳ ಮೇಲೆ: ಮಹಾಕುಂಭದಲ್ಲಿ ಕಂಡ ಯುವತಿ ಅಂದಕ್ಕೆ ಸೋತ ಜನರು
ಚಂದ್ರ ಆರ್ಯ ಅವರ ಭಾಷಣ ಹೀಗಿತ್ತು
ಸಭಾಪತಿಗಳೇ ಕೆನಡಾ ದೇಶದ ಸಂಸತ್ತನಲ್ಲಿ ನನ್ನ ಮಾತೃಭಾಷೆ ಕನ್ನಡದಲ್ಲಿ ಅವಕಾಶ ಸಿಕ್ಕಿದ್ದಕ್ಕೆ ನನಗೆ ಸಂತೋಷವಾಗುತ್ತಿದೆ. ಭಾರತದ ದೇಶದ ಕರ್ನಾಟಕದ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ದ್ವಾರಲು ಗ್ರಾಮದ ವ್ಯಕ್ತಿ ಕೆನಡಾದಲ್ಲಿ ಸಂಸದನಾಗಿ ಆಯ್ಕೆಯಾಗಿ ಮತ್ತು ಕನ್ನಡದಲ್ಲಿ ಮಾತನಾಡುತ್ತಿರೋದು ಕನ್ನಡಿಗರಿಗೆ ಹೆಮ್ಮೆಯ ವಿಷಯವಾಗಿದೆ. ಕೆನಡಾ ದೇಶದ ಕನ್ನಡಿಗರು 2018ರಲ್ಲಿ ಈ ಸಂಸತ್ತಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಿದ್ದರು. ರಾಷ್ಟ್ರಕವಿ ಕುವೆಂಪು ಬರೆದಿರುವ ಮತ್ತು ನಟ ಸಾರ್ವಭೌಮ ರಾಜ್‌ಕುಮಾರ್ ಹಾಡಿರುವ ಭಾವಗೀತೆಯ ಕೆಲವು ಪದಗಳೊಂದಿಗೆ ನನ್ನ ಹೇಳಿಕೆಯನ್ನು ಮುಗಿಸುತ್ತೇನೆ. ಎಲ್ಲಾದರೂ ಇರು, ಎಂತಾದರೂ ಇರು. ಎಂದೆಂದಿಗೂ ಕನ್ನಡವಾಗಿರು ಎಂದು ಹೇಳಿ ಚಂದ್ರ ಆfಯ ತಮ್ಮ ಮಾತು ಮುಗಿಸಿದರು.
ಇದನ್ನೂ ಓದಿ: ಕನ್ನಡದ ಖ್ಯಾತ ಸಾಹಿತಿ, ಪತ್ರಕರ್ತ ಮತ್ತು ಆಮೀರ್ ಪತ್ನಿ, ಏನಿದು ಸಂಬಂಧದ ಕೊಂಡಿ?
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ