
ಲಂಡನ್(ಮೇ.09): ಕೊರೋನಾ ಹಾವಳಿ ನಡುವೇಯೇ ನೈಜೀರಿಯಾದಿಂದ ಇತ್ತೀಚೆಗೆ ಬ್ರಿಟನ್‌ಗೆ ಮರಳಿದ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ವೈರಸ್ ಸೋಂಕು ಪತ್ತೆಯಾಗಿದೆ.
ಮಂಕಿಪಾಕ್ಸ್ ಎಂಬುದು ಅಪರೂಪದ ವೈರಲ್ ಸೋಂಕಾಗಿದ್ದು, ರೋಗಗ್ರಸ್ಥ ಪ್ರಾಣಿಗಳಿಂದ ಮನುಷ್ಯರಿಗೆ ಹರಡುತ್ತದೆ. ಸೌಮ್ಯ ಲಕ್ಷಣಗಳಿದ್ದ ರೋಗಿಗಳು ಕೆಲವೇ ವಾರಗಳಲ್ಲಿ ಚೇತರಿಸಿಕೊಳ್ಳುತ್ತಾರೆ. ಆದರೆ ಕೆಲವೊಮ್ಮೆ ಮಾತ್ರ ಇದು ತೀವ್ರ ಅನಾರೋಗ್ಯಕ್ಕೆ ಕಾರಣವಾಗುತ್ತದೆ. ಆದರೆ ಇದು ಮನುಷ್ಯರಿಂದ ಮನುಷ್ಯರಿಗೆ ಸುಲಭವಾಗಿ ಹರಡುವುದಿಲ್ಲ. ಹೀಗಾಗಿ ಸೋಂಕು ಸಾರ್ವಜನಿಕರಿಗೆ ಹರಡುವ ಸಾಧ್ಯತೆ ಸಾಧ್ಯತೆ ಅತ್ಯಂತ ಕಡಿಮೆಯಿದೆ ಎಂದು ಆರೋಗ್ಯ ತಜ್ಞರು ಹೇಳಿದ್ದಾರೆ.
ಜ್ವರ, ತಲೆನೋವು, ಸ್ನಾಯು ಸೆಳೆತ, ಬೆನ್ನುನೋವು, ನಡುಕ, ಬಳಲಿಕೆ ಮೊದಲಾದವು ಈ ಕಾಯಿಲೆಯ ಸಾಮಾನ್ಯ ಲಕ್ಷಣಗಳಾಗಿವೆ. ಕಣ್ಣು, ಮೂಗು, ಬಾಯಿಯ ಮೂಲಕ ವೈರಾಣು ರೋಗಿಯ ನಿಕಟ ಸಂಪರ್ಕದಲ್ಲಿರುವವರಿಗೆ ಹರಡುವ ಸಾಧ್ಯತೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ರೋಗಿಯೊಂದಿಗೆ ಸಂಪರ್ಕದಲ್ಲಿರುವರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ ಎಂದು ಆರೋಗ್ಯಾಧಿಕಾರಿಗಳು ಹೇಳಿದ್ದಾರೆ.
ಈ ಮೊದಲು 2018ರಲ್ಲಿ ಮೊಟ್ಟಮೊದಲ ಬಾರಿ ಬ್ರಿಟನ್‌ನಲ್ಲಿ ಮಂಕಿಪಾಕ್ಸ್ ಸೋಂಕು ವರದಿಯಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ