ಒಬಾಮಾ ದಂಪತಿ ವಿಚ್ಛೇದನ ಪಡೆಯುತ್ತಾರಾ? ಸುಳಿವು ನೀಡಿದ ಮಿಚೆಲ್‌!

Published : Jan 17, 2025, 11:31 AM ISTUpdated : Jan 17, 2025, 11:57 AM IST
ಒಬಾಮಾ ದಂಪತಿ ವಿಚ್ಛೇದನ ಪಡೆಯುತ್ತಾರಾ? ಸುಳಿವು ನೀಡಿದ ಮಿಚೆಲ್‌!

ಸಾರಾಂಶ

ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಮತ್ತು ಪತ್ನಿ ಮಿಚೆಲ್‌ ಒಬಾಮಾ ವಿಚ್ಛೇದನ ಪಡೆಯುತ್ತಾರೆ ಎಂಬ ವದಂತಿ ಹರಿದಾಡುತ್ತಿದೆ. ಮುಂದಿನ ಸೋಮವಾರ ನೂತನ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ರ ಪ್ರಮಾಣ ಸ್ವೀಕಾರ ಸಮಾರಂಭಕ್ಕೆ ಗೈರು ಹಾಜರಾಗುವ ಮೂಲಕ ಮಿಚೆಲ್‌ ಈ ವದಂತಿಗೆ ಪುಷ್ಠಿ ನೀಡಿದ್ದಾರೆ.

ನ್ಯೂಯಾರ್ಕ್‌ (ಅಮೆರಿಕ): ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಮತ್ತು ಪತ್ನಿ ಮಿಚೆಲ್‌ ಒಬಾಮಾ ವಿಚ್ಛೇದನ ಪಡೆದುಕೊಳ್ಳುವತ್ತ ಸಾಗಿದ್ದಾರೆ. ಹೀಗೊಂದು ವದಂತಿ ಹರಿದಾಡುತ್ತಿದೆ. ಮುಂದಿನ ಸೋಮವಾರ ನೂತನ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ರ ಪ್ರಮಾಣ ಸ್ವೀಕಾರ ಸಮಾರಂಭಕ್ಕೆ ಗೈರು ಹಾಜರಾಗುವ ಬಗ್ಗೆ ಮಿಚೆಲ್‌ ಖಚಿತ ಪಡಿಸಿರುವುದು ದಂಪತಿ ಬೇರ್ಪಡುವಿಕೆಯ ಊಹಾಪೋಹಾಗಳಿಗೆ ಮತ್ತಷ್ಟು ಪುಷ್ಠಿ ನೀಡಿದೆ. ಪತಿ ಒಬಾಮಾ ಭಾಗಿಯಾಗುವ ಅಧಿಕೃತ ಕಾರ್ಯಕ್ರಮದಿಂದ ಮಿಚೆಲ್‌ ಅಂತರ ಕಾಯ್ದುಕೊಳ್ಳುತ್ತಿರುವುದು ತಿಂಗಳಲ್ಲಿ ಇದು ಎರಡನೇ ಬಾರಿಯಾಗಿದೆ. 

ಇದಕ್ಕೂ ಮುನ್ನ ಈ ತಿಂಗಳು ನಡೆದ ಅಮೆರಿಕದ ಮಾಜಿ ಅಧ್ಯಕ್ಷ ಜಮ್ಮಿ ಕಾರ್ಟರ್ ಅವರ  ಅಂತ್ಯಕ್ರಿಯೆಯಲ್ಲೂ ಬರಾಕ್  ಒಬಾಮಾ ಏಕಾಂಗಿಯಾಗಿ ಕಾಣಿಸಿಕೊಂಡಿದ್ದರು. ಜಿಮ್ಮಿ ಕಾರ್ಟರ್ ಅಂತ್ಯ ಸಂಸ್ಕಾರಕ್ಕೂ ಮಿಚೆಲ್‌ ಗೈರಾಗಿದ್ದರು. ಇದಕ್ಕೂ ಮೊದಲು ಕೂಡಾ ದಂಪತಿ ವಿವಿಧ ವಿಷಯಗಳಲ್ಲಿ ತಮ್ಮಿಬ್ಬರ ನಡುವಣ ಭಿನ್ನಾಭಿಪ್ರಾಯದ ಕುರಿತು ಸುಳಿವು ನೀಡಿದ್ದರು.

ಇದನ್ನೂ ಓದಿ: ಮೋದಿ, ಬಿಡೆನ್‌, ಟ್ರುಡೊ, ಟ್ರಂಪ್‌ ವಿಶ್ವದ ಪ್ರಭಾವಿ ದೇಶಗಳ ನಾಯಕರಾಗುವ ಮುನ್ನ ಮಾಡ್ತಿದ್ದ ಕೆಲಸಗಳೇನು ಗೊತ್ತಾ?

ಬರಾಕ್ ಒಬಾಮಾ  ಶ್ವೇತ ಭವನದ ಮೊದಲ ಕಪ್ಪು ವರ್ಣದ  ಅಧ್ಯಕ್ಷರಾಗಿದ್ದರು.  1989ರಲ್ಲಿ ಕಾನೂನಿನ ಸಂಸ್ಥೆಯೊಂದರಲ್ಲಿ ಬರಾಕ್ ಒಬಾಮಾ ಮತ್ತು ಮಿಚೆಲ್‌ ಭೇಟಿಯಾಗಿದ್ದರು. ಪರಿಚಯ ಸ್ನೇಹವಾಗಿ ಬದಲಾಗಿತ್ತು. ಸ್ನೇಹ ಪ್ರೀತಿಯಾಗಿ ಬದಲಾಗಲು  ಹೆಚ್ಚು ಸಮಯ ಬೇಕಿರಲಿಲ್ಲ. ಪರಸ್ಪರ ಪ್ರೀತಿಸಿದ ಬರಾಕ್ ಒಬಾಮಾ ಮತ್ತು  ಮಿಚೆಲ್ 1992ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ದಂಪತಿಗೆ ಮಲೀಹಾ ಮತ್ತು ಸಶಾ ಎಂಬ ಎರಡು ಹೆಣ್ಣು ಮಕ್ಕಳಿದ್ದಾರೆ. ಆದ್ರೆ ಕಳೆದ ಕೆಲವು ದಿನಗಳಿಂದ ಇಬ್ಬರ ವಿಚ್ಚೇದನ ಕುರಿತ ವದಂತಿಗಳು ಹರಿದಾಡುತ್ತಿವೆ.

ಬರಾಕ್ ಒಬಾಮ  ಮತ್ತು ಪತ್ನಿ ಮಿಚೆಲ್ ಇಬ್ಬರೂ ಈ ಸಂಬಂಧ ಯಾವುದೇ ಅಧಿಕೃತ ಹೇಳಿಕೆಯನ್ನು ನೀಡಿಲ್ಲ. ವದಂತಿಗಳ ಬಗ್ಗೆಯೂ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ. ಆದ್ರೆ ಇಬ್ಬರ ವಿಚ್ಛೇದನದ ಬಗ್ಗೆ ಜನರು ತೀವ್ರ ಕುತೂಹಲವಿದ್ದಂತೆ ಕಾಣಿಸುತ್ತಿದ್ದು, ಇಬ್ಬರ ಫೋಟೋಗಳನ್ನು ತರೇಹವಾರಿ ಶೀರ್ಷಿಕೆಯಡಿಯಲ್ಲಿ ಶೇರ್ ಮಾಡಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ಭಾರತ ಉದ್ಧಾರಕನ ಮೂಲ ಪಾಕಿಸ್ತಾನ: ಒಬಾಮಾಗೆ ಆಪ್ತಮಿತ್ರ ಮನಮೋಹನ್ ಸಿಂಗ್!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ವಿಯೆಟ್ನಾಂ ಇಂಡಿಯಾ ಇಂಟರ್​ನ್ಯಾಷನಲ್ ಬ್ಯುಸಿನೆಸ್​ ಕಾನ್​ಕ್ಲೇವ್: ಕರುನಾಡಿನ 29 ಗಣ್ಯರಿಗೆ ಪ್ರಶಸ್ತಿ ಪ್ರದಾನ
ವಿದೇಶಗಳಿಗೆ ಭಾರತೀಯ ಪ್ರತಿಭೆ : ನಷ್ಟವೋ ? ಪ್ರಭಾವವೋ?