ಟೇಕಾಫ್ ವೇಳೆ ಪತನಗೊಂಡು ಧಗಧಗನೇ ಹೊತ್ತಿ ಉರಿದ 19 ಜನರಿದ್ದ ಶೌರ್ಯ ಏರ್‌ಲೈನ್ಸ್ ವಿಮಾನ

Published : Jul 24, 2024, 12:07 PM ISTUpdated : Jul 24, 2024, 12:09 PM IST
ಟೇಕಾಫ್ ವೇಳೆ ಪತನಗೊಂಡು ಧಗಧಗನೇ ಹೊತ್ತಿ ಉರಿದ 19 ಜನರಿದ್ದ ಶೌರ್ಯ ಏರ್‌ಲೈನ್ಸ್ ವಿಮಾನ

ಸಾರಾಂಶ

ಇಂದು ಬೆಳಗ್ಗೆ 11 ಗಂಟೆಗೆ ಶೌರ್ಯ ಏರ್‌ಲೈನ್ಸ್ ವಿಮಾನ ತ್ರಿಭುವನ್ ಏರ್‌ಪೋರ್ಟ್‌ನಿಂದ ಪೊಝಾರಾದತ್ತ ಹೊರಟಿತ್ತು ಎಂದು ಟಿಐಎ ವಕ್ತಾರ ಪ್ರೇಮನಾಥ್ ಟಾಕೂರ ಮಾಹಿತಿ ನೀಡಿದ್ದಾರೆ.

ಕಠ್ಮಂಡು: ಶೌರ್ಯ ಏರ್‌ಲೈನ್ಸ್ ಏರ್‌ಕ್ರಾಫ್ಟ್ ಟೇಕಾಫ್ ವೇಳೆ ಪತನಗೊಂಡಿದೆ. ನೇಪಾಳ ಕಠ್ಮಂಡು ತ್ರಿಭುವನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವಘಡ ಸಂಭವಿಸಿದೆ.  ಏರ್ ಸ್ಟಾಫ್ ಸಿಬ್ಬಂದಿ ಸೇರಿದಂತೆ ಒಟ್ಟು 19 ಜನರು ವಿಮಾನದಲ್ಲಿದ್ದರು. ಇಂದು ಬೆಳಗ್ಗೆ 11 ಗಂಟೆಗೆ ಶೌರ್ಯ ಏರ್‌ಲೈನ್ಸ್ ವಿಮಾನ ತ್ರಿಭುವನ್ ಏರ್‌ಪೋರ್ಟ್‌ನಿಂದ ಪೊಝಾರಾದತ್ತ ಹೊರಟಿತ್ತು ಎಂದು ಟಿಐಎ ವಕ್ತಾರ ಪ್ರೇಮನಾಥ್ ಟಾಕೂರ ಮಾಹಿತಿ ನೀಡಿದ್ದಾರೆ.

ವಿಮಾನ ಪತನವಾಗುತ್ತಿದ್ದಂತೆ ಅಗ್ನಿಶಾಮಕದಳದ ಸಿಬ್ಬಂದಿ ದೌಡಾಯಿಸಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಸ್ಥಳದಲ್ಲಿ ವೈದ್ಯಕೀಯ ತಂಡ ಸಿಬ್ಬಂದಿ ಆಗಮಿಸಿದ್ದಾರೆ. ಗಾಯಾಳು ಗಳನ್ನು ಆಸ್ಪತ್ರೆಗೆ ಸಾಗಿಸಲು ಅಂಬುಲೆನ್ಸ್  ಬಂದು ನಿಂತಿವೆ. ಯಾವುದೇ ಸಾವು-ನೋವಿನ ಬಗ್ಗೆ ಅಧಿಕೃತ ಮಾಹಿತಿ ಬಂದಿಲ್ಲ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮುದ್ದಿನ ಶ್ವಾನಗಳಿಗಾಗಿ ಅನಿಮೇಟೆಡ್ ಸಿನಿಮಾ ಶೋ ಆಯೋಜಿಸಿದ ಥಿಯೇಟರ್: ರೆಡ್ ಕಾರ್ಪೆಟ್ ಹಾಸಿ ಸ್ವಾಗತ
sculptor makeup: ಹುಡುಗರೇ ಆಹಾ ಚೂಪಾದ ಮೂಗು ಎಂಥಾ ಬ್ಯೂಟಿ ಅಂತ ಮರುಳಾಗದಿರಿ ಜೋಕೆ..!